ಪೆನ್ ಡ್ರೈವ್ ಪ್ರಕರಣ; ಹೋರಾಟ ಮಾಡದಂತೆ ಕುಮಾರಸ್ವಾಮಿಯನ್ನು ಕಟ್ಟಿಹಾಕಿರುವವರು ಯಾರು: ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು

ಬೆಂಗಳೂರು: “ಪೆನ್ ಡ್ರೈವ್ ಪ್ರಕರಣದಲ್ಲಿ ಹೋರಾಟ ಮಾಡದಂತೆ ಕುಮಾರಸ್ವಾಮಿಯನ್ನು ಹಿಡಿದು ನಿಲ್ಲಿಸಿಕೊಂಡಿರುವವರು ಯಾರು? ಕಟ್ಟಿ ಹಾಕಿರುವವರು ಯಾರು?” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು.

ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು.

ಇದನ್ನೂ ಓದಿ: ಪೆನ್ ಡ್ರೈವ್ ಪ್ರಕರಣದಲ್ಲಿ ಶಿವರಾಮೇಗೌಡ ಒಬ್ಬ ಏಜೆಂಟ್

ಕುಮಾರಸ್ವಾಮಿ ರಾಜಭವನಕ್ಕೆ ಭೇಟಿ ನೀಡಿ ಪ್ರಜ್ವಲ್ ಪ್ರಕರಣವನ್ನು ಸಿಬಿಐ ನೀಡುವಂತೆ ಹೋರಾಟ ಮಾಡುತ್ತಿರುವ ಬಗ್ಗೆ ಕೇಳಿದಾಗ ಅವರು ಉತ್ತರಿಸಿದ್ದು ಹೀಗೆ; “ಅವರನ್ನು ಹೋರಾಟ ಮಾಡದಂತೆ ಯಾರೂ ತಡೆದಿಲ್ಲ, ಅವರು ಹೋರಾಟ ಮಾಡಲಿ. ಆಂಧ್ರಪ್ರದೇಶದ ಚುನಾವಣಾ ಪ್ರಚಾರದಿಂದ ವಾಪಸು ಬಂದ ನಂತರ ಈ ಬಗ್ಗೆ ಮಾತನಾಡುತ್ತೇನೆ” ಎಂದರು.

ಪೆನ್ ಡ್ರೈವ್ ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ರನ್ನು ಅನಗತ್ಯವಾಗಿ ಎಳೆದು ತರಲಾಗುತ್ತಿದೆ ಎಂದು ಒಕ್ಕಲಿಗ ಸಚಿವರು ಮಾತನಾಡಿರುವ ಬಗ್ಗೆ ಕೇಳಿದಾಗ “ಈ ವಿಚಾರದಲ್ಲಿ ನಾನು ಏನು ಹೇಳಬೇಕೊ ಅದನ್ನೆಲ್ಲಾ ಈಗಾಗಲೇ ಹೇಳಿ ಆಗಿದೆ. ಈಗ ನಾನು ಏನೂ ಹೇಳಬೇಕಿಲ್ಲ. ಮಿಕ್ಕಿದ್ದೆಲ್ಲಾ ವಿಧಾನಸಭೆ ಅಧಿವೇಶನ ಕಲಾಪದಲ್ಲಿ ಚರ್ಚೆ ಮಾಡೋಣ” ಎಂದರು.

ಇದನ್ನೂ ನೋಡಿ: ಪೆನ್‌ಡ್ರೈವ್‌ ಪ್ರಕರಣ : ರೇವಣ್ಣ, ಪ್ರಜ್ವಲ್ ರೇವಣ್ಣ ಶೀಘ್ರ ಬಂಧನಕ್ಕೆ ಆಗ್ರಹ Janashakthi Media

Donate Janashakthi Media

Leave a Reply

Your email address will not be published. Required fields are marked *