ಜನರಿಗೆ ಮನೆ ಇಲ್ಲದೆ ಇನ್ನೂ ಗುಡಿಸಲಿನಲ್ಲೇ ವಾಸ; ನಾಗಲಕ್ಷ್ಮಿ ಚೌಧರಿ ಅಸಮಾಧಾನ

Please follow and like us:
ತುಮಕೂರು: ಜುಲೈ 21ರಂದು ತಾಲ್ಲೂಕಿನ ಸೀನಪ್ಪನಹಳ್ಳಿ ಜನತಾ ಕಾಲೊನಿಯಗೆ ಭೇಟಿ ನೀಡಿ ಪರಿಶೀಲಿಸಿದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ, ಜನರು ಮನೆ ಇಲ್ಲದೆ ಇನ್ನೂ ಗುಡಿಸಲಿನಲ್ಲಿ ವಾಸಿಸುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.

ಮಹಿಳೆಯರು ಹೊರಗಡೆ ಬಟ್ಟೆ ಕಟ್ಟಿಕೊಂಡು ಮರೆಯಲ್ಲಿ ಸ್ನಾನ ಮಾಡುತ್ತಿರುವುದು ಶೋಚನೀಯ. ಕೂಡಲೇ ನಿವೇಶನ ಮಂಜೂರು ಮಾಡಿ ಆಶ್ರಯ ಮನೆ ನಿರ್ಮಾಣಕ್ಕೆ ಅಗತ್ಯ ಕ್ರಮ ವಹಿಸುವಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ: ಬಾಲ್ಯ ವಿವಾಹದ ಬಗ್ಗೆ ಮಾಹಿತಿ ನೀಡಿದ ಶಿಕ್ಷಕಿ; ಗ್ರಾಮಸ್ಥರಿಂದ ಬಹಿಷ್ಕಾರ

ಸಿರಿವರ, ನಾಗವಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಸಿಬ್ಬಂದಿ ಕೊರತೆ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ವಿಚಾರವನ್ನು ಸರ್ಕಾರದ ಗಮನಕ್ಕೆ ತರುವುದಾಗಿ ತಿಳಿಸಿದರು.

ಇದಕ್ಕೂ ಮುನ್ನ ತಾಲ್ಲೂಕಿನ ರಾಯಪುರ ಗ್ರಾಮದಲ್ಲಿ ಸಾಯಿ ಸೇವಾಶ್ರಮ ಸೇವಾ ಸಂಸ್ಥೆ ಏರ್ಪಡಿಸಿದ್ದ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿದರು. ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ಮತ್ತು ಮಕ್ಕಳ ನೆರವಿಗಾಗಿ ಕಾರ್ಯನಿರ್ವಹಿಸುತ್ತಿರುವ ಸಹಾಯವಾಣಿ 1098, 112 ಮತ್ತು 181ರ ಬಗ್ಗೆ ಹೆಚ್ಚಿನ ಪ್ರಚಾರ ಮಾಡಬೇಕು. ಇಂತಹ ಸಂದರ್ಭದಲ್ಲಿ ಮಹಿಳಾ ಸಾಂತ್ವನ ಕೇಂದ್ರಗಳ ನೆರವು ಪಡೆದುಕೊಳ್ಳಬೇಕು ಎಂದು ಸಲಹೆ ಮಾಡಿದರು.

ನಾಗವಲ್ಲಿ- ಲಕ್ಕೇನಹಳ್ಳಿಯ ಸ್ಫೂರ್ತಿಧಾಮ ಸೇವಾ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ವೈದ್ಯಕೀಯ ತಪಾಸಣಾ ಶಿಬಿರ ಉದ್ಘಾಟಿಸಿದರು.

ಇದನ್ನೂ ನೋಡಿ: ಆಸಕ್ತಿಕರ ಸಂಗತಿ |ಪ್ರಾಣಿಗಳಲ್ಲಿ ಆಕಳಿಕೆJanashakthi Media

Please follow and like us:
Donate Janashakthi Media

Leave a Reply

Your email address will not be published. Required fields are marked *