ಮೈಸೂರು: ದಕ್ಷಿಣ ಭಾರತದಲ್ಲಿನ ಜನರು ಬಿಜೆಪಿಯನ್ನು ಬೆಂಬಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ ಭಾರತದಲ್ಲಿ ಏನೇ ಮಾಡಿದರು ಬಿಜೆಪಿಯನ್ನು ಜನ ಬೆಂಬಲಿಸುವುದಿಲ್ಲ. ಬಿಜೆಪಿ ಎನ್ನುವುದೊಂದು ಆರ್‌ಎಸ್‌ಎಸ್‌ನ ರಾಜಕೀಯ ಮುಖವಾಡ. ಆದ್ದರಿಂದಲೇ ಉತ್ತರ ಭಾರತದಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. ಆರ್.ಎಸ್.ಎಸ್ ನ ಮುಖ್ಯಸ್ಥರು ಅಹಂಕಾರಕ್ಕೆ ಜನ ಸರಿಯಾದ ಪಾಠ ಕಲಿಸಿದ್ದಾರೆ ಎಂದು ಹೇಳಿದ್ದಾರೆ ಎಂದರು.
ಇದನ್ನೂ ಓದಿ: ಕ್ರಿಯಾ ಯೋಜನೆ ಕೂಡಲೇ ಸಿದ್ಧ ಪಡಿಸಲು ಸಿಎಂ ಸೂಚನೆ
ರಾಯ್ ಎಂಬುವರಿಗೆ 2010 ಜಾಥಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಬಂಧಿಸಲು ಆದೇಶ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಬಿಜೆಪಿಯದ್ದು ದ್ವೇಷದ ರಾಜಕಾರಣ. ಹೆದರಿಸುವುದು ಬೆದರಿಸುವುದು, ಇಡಿ, ಸಿಬಿಐ ಬಳಕೆ ಮಾಡುವುದನ್ನು ಮೊದಲಿನಿಂದಲೂ ಮಾಡಿಕೊಂಡು ಬರುತ್ತಿದ್ದಾರೆ. ಅದಕ್ಕಾಗಿ ಜನ ಈ ಬಾರಿ ಅವರಿಗೆ ಬಹುಮತ ಕೊಡಲಿಲ್ಲ ಎಂದರು.
ಯಡಿಯೂರಪ್ಪ ಬಳಿಕ ತಮ್ಮ ಕುಟುಂಬವನ್ನು ಟಾರ್ಗೆಟ್ ಮಾಡಲು ಕಾಂಗ್ರೆಸ್ ಹೊರಟಿದೆ ಎನ್ನುವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದಾಮಯ್ಯ, ನಾನು ನಿನ್ನೆ ಮೊನ್ನೆ ರಾಜಕೀಯಕ್ಕೆ ಬಂದಿಲ್ಲ. ದ್ವೇಷದ ರಾಜಕಾರಣವನ್ನು ನಾನು ಇಂದಿನವರೆಗೆ ಯಾರ ಮೇಲೂ ಮಾಡಿಲ್ಲ. ಅದು ಬಿಜೆಪಿಯವರ ಕೆಲಸ.ದ್ವೇಷದ ರಾಜಕಾರಣ ಬಿಜೆಪಿಯ ಕೆಲಸವೇ ಹೊರತು ನಮ್ಮದಲ್ಲ.
ನಾವು ಎಂದಿಗೂ ಸೇಡಿನ ರಾಜಕಾರಣ ಮಾಡುವುದಿಲ್ಲ. ನಮ್ಮ ಮೇಲೆ, ಡಿ.ಕೆ. ಶಿವಕುಮಾರ್, ರಾಹುಲ್ ಗಾಂಧಿ ಅವರ ಮೇಲೆ ಕೇಸು ಹಾಕಿರುವುದನ್ನು ಏನೆಂದು ಕರೆಯಬೇಕು. ರಾಹುಲ್ ಗಾಂಧಿ ಅವರ ಸಂಸದ ಸ್ಥಾನವನ್ನೇ ರದ್ದುಗೊಳಿಸಿದ್ದನ್ನು ಏನೆಂದು ಕರೆಯಬೇಕು? ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜೈಲಿಗೆ ಕಲಿಸಿದ್ದನ್ನು ಏನೆಂದು ಕರೆಯಬೇಕು? ಎಂದು ಪ್ರಶ್ನಿಸಿ, ಇದೆಲ್ಲವೂ ದ್ವೇಷದ ರಾಜಕಾರಣವೋ ಅಥವಾ ಪ್ರೀತಿಯ ರಾಜಕಾರಣವೋ ಸೇಡಿನ ರಾಜಕಾರಣವೋ ? ಎಂದು ಸೂಚ್ಯವಾಗಿ ಪ್ರಶ್ನಿಸಿದರು.
ಇದನ್ನೂ ನೋಡಿ: ಚೆ ಅಂದ್ರೆ ಪ್ರೀತಿ, ಚೆ ಅಂದ್ರೆ ಕ್ರಾಂತಿJanashakthi Media