ಗೃಹಲಕ್ಷ್ಮಿ ಬ್ಯಾಂಕ್ ಮತ್ತು ಸಹಕಾರ ಸಂಘವನ್ನು ಕೌಶಲಾಭಿವೃದ್ಧಿ ಕರ್ತವ್ಯ ನಿರ್ವಹಿಸಲು ಮನವಿ

ಮೈಸೂರು :  ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆ ಅಡಿ ಬರುವ ಗೃಹಲಕ್ಷ್ಮಿ ಬ್ಯಾಂಕ್ ಮತ್ತು ಸಹಕಾರ ಸಂಘವನ್ನು ಕೌಶಲಾಭಿವೃದ್ಧಿ ಇಲಾಖೆಯ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ( NRLM) ಯೋಜನೆಯಡಿ ಸೇರ್ಪಡೆಗೊಳಿಸಿ ಅನುಷ್ಠಾನ ಮಾಡಿ NRLM ಅನುವು ಸಿಬ್ಬಂದಿಗಳು  ಮಹಿಳಾ ಇಲಾಖೆಯ ಯೋಜನೆಯನ್ನೂ ಒಳಗೊಂಡಂತೆ ಕರ್ತವ್ಯ ನಿರ್ವಹಿಸಲು ಮಾಡಿಕೊಡಬೇಕು ಎಂದು ಸಿಎಂ ಗೆ ಸಂಜೀವಿನಿ ನೌಕರರು ಮನವಿ ಸಲ್ಲಿಸಿದ್ದಾರೆ.

ಇದನ್ನೂ ಓದಿ : ಸರ್ಕಾರಿ ಶಾಲಾ ವಿದ್ಯಾರ್ಥಿಗಳೊಂದಿಗೆ ಸಚಿವ ಮಧು ಬಂಗಾರಪ್ಪ ಸಂವಾದ

ಈ  ವಿಷಯಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ಸರ್ಕಾರದ ಗೃಹಲಕ್ಷ್ಮಿ ಯೋಜನೆಯನ್ನು ಅನುಷ್ಠಾನ ಗೊಳಿಸಲು ಈಗಾಗಲೇ ಗ್ರಾಮೀಣ ಪ್ರದೇಶದಲ್ಲಿ ದುಡಿಯುತ್ತಿರುವ ಕೌಶಲ್ಯಭಿವೃದ್ಧಿ ಇಲಾಖೆಯ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (NRLM)  ಗ್ರಾಮ  ಪಂಚಾಯಿತಿ ಮಟ್ಟದ ಒಕ್ಕೂಟದ ಮಹಿಳಾ ಸಿಬ್ಬಂದಿಗಳಿಗೆ ಅವಕಾಶ ಮಾಡಿಕೊಟ್ಟರೆ ಅವರು ತಮ್ಮ ಮಹತ್ವಕಾಂಕ್ಷಿ ಯೋಜನೆಯನ್ನು ಗ್ರಾಮೀಣ ಪ್ರದೇಶದ ಮಹಿಳೆಯರ ಶ್ರೇಯೋಭಿವೃದ್ಧಿಗೋಸ್ಕರ ಅನುಷ್ಠಾನಗೊಳಿಸಲು ಮತ್ತು ಅದರ ಯಶಸ್ಸಿಗೋಸ್ಕರ ಶ್ರಮಿಸಲು ಸಿದ್ಧರಿದ್ದೇವೆ ಎಂದು ಹೆಳಿದರು.

ಹಾಗಾಗಿ ತಮ್ಮ ಇಲಾಖೆಯ ಗೃಹಲಕ್ಷ್ಮಿ ಬ್ಯಾಂಕ್ ಮತ್ತು ಗೃಹಲಕ್ಷ್ಮಿ ಸಹಕಾರ ಸಂಘ ಕೆಲಸವನ್ನು ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ GPLF ಮಹಿಳಾ ಸಿಬ್ಬಂದಿಗಳಿಗೆ ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದ್ದಾರೆ.

ಇದನ್ನೂ ನೋಡಿ : ICDS ಯೋಜನೆ ಖಾಯಂ ಮಾಡಿ| ವೇತನ ಹೆಚ್ಚಳಕ್ಕೆ ಆಗ್ರಹಿಸಿ ಡಿಸೆಂಬರ್ 1 ರಿಂದ ಅಂಗನವಾಡಿ ನೌಕರರ ಧರಣಿ Janashakthi Media

Donate Janashakthi Media

Leave a Reply

Your email address will not be published. Required fields are marked *