ಪೆರಿಯಾ ಜೋಡಿ ಕೊಲೆ ಪ್ರಕರಣ: 4 ಅಪರಾಧಿಗಳಿಗೆ ವಿಧಿಸಿದ್ದ ಶಿಕ್ಷೆ ತಡೆ

ಕೊಚ್ಚಿ: ಇಂದು, ಬುಧವಾರದಂದು ಕೇರಳ ಹೈಕೋರ್ಟ್ ಪೆರಿಯಾ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ನಾಲ್ವರು ಅಪರಾಧಿಗಳಿಗೆ ವಿಧಿಸಿದ್ದ ಶಿಕ್ಷೆಗೆ ತಡೆ ನೀಡಿದೆ.

ತಲಾ ಐದು ವರ್ಷಗಳ ಸಜೆಯನ್ನು ಪೆರಿಯಾ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಶಾಸಕ ಕೆ.ವಿ.ಕುಂ ಞ ರಾಮನ್, ಕೆ.ಮಣಿಕಂಠನ್, ರಾಘವನ್ ವೆಳುತ್ತೊಳಿ, ಕೆ.ವಿ.ಭಾಸ್ಕರನ್ ಎಂಬವರಿಗೆ ವಿಧಿಸಲಾಗಿತ್ತು.

ಇದನ್ನು ಪ್ರಶ್ನಿಸಿ ಅಪರಾಧಿಗಳು ಕೇರಳ ಹೈಕೋರ್ಟ್ ಮೊರೆ ಹೋಗಿದ್ದರು. ಈ ನಾಲ್ವರು ಪ್ರಸ್ತುತ ಕಣ್ಣೂರು ಕೇಂದ್ರ ಕಾರಾಗೃಹದಲ್ಲಿದ್ದಾರೆ.

ಇದನ್ನೂ ಓದಿ: ಬೆಂಗಳೂರು| 8 ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ

ಐದು ವರ್ಷಗಳ ಹಿಂದೆ ಕಾಸರಗೋಡು ಜಿಲ್ಲೆಯ ಪೆರಿಯಾದಲ್ಲಿ ಇಬ್ಬರು ಯೂತ್ ಕಾಂಗ್ರೆಸ್ ಕಾರ್ಯಕರ್ತರನ್ನು ಹತ್ಯೆಗೈದ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯವು 10 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು, ಸಿಪಿಎಂನ ಮಾಜಿ ಶಾಸಕ ಕುಂಞಿರಾಮನ್ ಸೇರಿದಂತೆ ಇತರ ನಾಲ್ವರಿಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.

ಯುವ ಕಾಂಗ್ರೆಸ್ ಕಾರ್ಯಕರ್ತರಾಗಿದ್ದ ಪೆರಿಯ ಕಲ್ಯೊಟ್ ನಿವಾಸಿಗಳಾದ ಕೃಪೇಶ್ (19) ಮತ್ತು ಶರತ್ ಲಾಲ್(21) ಅವರನ್ನು 2019ರ ಫೆಬ್ರವರಿ 17ರ ರಾತ್ರಿ ತಂಡವೊಂದು ಹತ್ಯೆ ಮಾಡಿತ್ತು. ಪ್ರಕರಣದ ಬಗ್ಗೆ ಸ್ಥಳೀಯ ಪೊಲೀಸರು , ರಾಜ್ಯ ಅಪರಾಧ ವಿಭಾಗ ಹಾಗೂ ಸಿಬಿಐ ತನಿಖೆ ನಡೆಸಿತ್ತು. ಪ್ರಕರಣದಲ್ಲಿ ಒಟ್ಟು 24 ಮಂದಿ ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಪೈಕಿ 10 ಮಂದಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿತ್ತು.

ಇದನ್ನೂ ನೋಡಿ: ಬಸ್‌ ‍ಪ್ರಯಾಣ ದರ ಹೆಚ್ಚಳ : ಫ್ರೀಡಂ ಪಾರ್ಕ್‌ ಬಳಿ ಸಿಪಿಐ(ಎಂ) ಪ್ರತಿಭಟನೆ Janashakthi Media

Donate Janashakthi Media

Leave a Reply

Your email address will not be published. Required fields are marked *