ನವದೆಹಲಿ: ಸಂವಿಧಾನದ ಪೀಠಿಕೆಗೆ ಸಮಾಜವಾದಿ ಮತ್ತು ಜಾತ್ಯತೀತ ಪದಗಳ ಸೇರ್ಪಡೆಗೆ ಸಂಬಂಧಿಸಿದ ತಿದ್ದುಪಡಿಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ
‘ಸಮಾಜವಾದ’ ಮತ್ತು ‘ಜಾತ್ಯತೀತ’ ಎಂಬ ಪದಗಳನ್ನು 1976ರಲ್ಲಿ ತುರ್ತು ಪರಿಸ್ಥಿತಿಯ ವೇಳೆ 42ನೇ ತಿದ್ದುಪಡಿ ಮೂಲಕ ಸಂವಿಧಾನದ ಪೀಠಿಕೆಯಲ್ಲಿ ಸೇರಿಸಲಾಗಿತ್ತು. ಇದನ್ನು ಪ್ರಶ್ನಿಸಿ ಬಿಜೆಪಿ ಹಿರಿಯ ನಾಯಕ ಡಾ. ಸುಬ್ರಮಣಿಯನ್ ಸ್ವಾಮಿ, ಬಲರಾಮ್ ಸಿಂಗ್ ಹಾಗೂ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅರ್ಜಿ ಸಲ್ಲಿಸಿದ್ದರು. ಅರ್ಜಿಗಳ ಕುರಿತಾದ ತೀರ್ಪನ್ನು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಹಾಗೂ ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರಿದ್ದ ನ್ಯಾಯಪೀಠ ನವೆಂಬರ್ 22 ರಂದು ಕಾಯ್ದಿರಿಸಿತ್ತು.
ಇದನ್ನೂ ಓದಿ: ದಹಾನು (ಎಸ್ಟಿ) ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ-ಎನ್ಡಿಎ ವಿರುದ್ಧ ಸಿಪಿಐ(ಎಂ) ಐತಿಹಾಸಿಕ ಗೆಲುವು ಸುಪ್ರೀಂ
ಈ ಅರ್ಜಿಗಳ ಬಗ್ಗೆ ವಿವರವಾದ ವಿಚಾರಣೆ ನಡೆಸುವ ಅಗತ್ಯವಿಲ್ಲ ಎಂದು ಸಿಜೆಐ ಸಂಜೀವ್ ಖನ್ನಾ ನೇತೃತ್ವದ ಪೀಠ ಹೇಳಿದೆ. ಸಂವಿಧಾನವನ್ನು ತಿದ್ದುಪಡಿ ಮಾಡುವ ಅಧಿಕಾರ ಸಂಸತ್ತಿಗೆ ಇದೆ. ತಿದ್ದುಪಡಿಯಾಗಿ ಹಲವು ವರ್ಷಗಳು ಕಳೆದಿದ್ದು, ಈಗ ಅದನ್ನು ರದ್ದುಪಡಿಸಲಾಗದು ಎಂಬುದನ್ನು ಈಗಾಗಲೇ ವಿವರಿಸಲಾಗಿದೆ ಎಂದು ಹೇಳಿ ಅರ್ಜಿಯನ್ನು ಪೀಠ ವಜಾಗೊಳಿಸಿತು.
ಇದನ್ನೂ ನೋಡಿ: ವಚನಾನುಭವ 20 | ಕಾಣದ ಠಾವಿನಲ್ಲಿ | ಮನುಷ್ಯನೊಳಗಿನ ಕಲ್ಮಷ ತೊಳೆದ ಬಸವಣ್ಣ – ಮೀನಾಕ್ಷಿ ಬಾಳಿ Janashakthi Media