ಬೆಂಗಳೂರು : ಕಳೆದೆರಡು ದಿನಗಳಿಂದ ಕನ್ನಡ ಚಿತ್ರರಂಗದ ಖ್ಯಾತ ನಟ ಸುದೀಪ್ ಅವರು ಬಿಜೆಪಿ ಪಕ್ಷ ಸೇರಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಸಾಕಷ್ಟು ಓಡಾಡುತ್ತಿತ್ತು, ಈ ಕಾರಣಕ್ಕಾಗಿ ನೆನ್ನೆ ದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸುದೀಪ್ ಅವರು ನಾನು ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷವನ್ನು ಸೇರುವುದಿಲ್ಲ ಆದರೆ ನಾನು ಬೊಮ್ಮಾಯಿ ಅವರಿಗೆ ಸದಾ ಕಾಲ ಬೆಂಬಲವಾಗಿ ನಿಂತಿರುತ್ತೇನೆ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಅವರು ಹೇಳಿದ ಅಭ್ಯರ್ಥಿಗಳ ಪರ ಪ್ರಚಾರ ಮಾಡುವುದಾಗಿ ನಟ ಸುದೀಪ್ ಘೋಷಣೆ ಮಾಡಿದ್ದರು ಇದಕ್ಕೆ ಸಂಬಂಧಸಿದಂತೆ ವಮೊಗ್ಗದ ವಕೀಲರೊಬ್ಬರು ಚುನಾವಣೆ ಆಯೋಗಕ್ಕೆ ಪತ್ರ ಬರೆದಿದ್ದು, ಸುದೀಪ್ ಪರೋಕ್ಷವಾಗಿ ಬಿಜೆಪಿ ಅಭ್ಯರ್ಥಿಗಳಿಗೆ ಪ್ರಚಾರ ಮಾಡುವುದಾಗಿ ತಿಳಿಸಿದ್ದರಿಂದ, ಅವರ ನಟನೆಯ ಚಿತ್ರಗಳನ್ನು ಪ್ರಸಾರ ಮಾಡದಂತೆ ತಡೆಯಬೇಕು ಎಂದು ಅವರು ಮನವಿ ಪತ್ರ ಸಲ್ಲಿಸಿದ್ದಾರೆ.
ಇದನ್ನೂ ಓದಿ: ನಾನು ಚುನಾವಣೆಗೆ ಸ್ಪರ್ಧಿಸುತ್ತಿಲ್ಲ,ಯಾರ ಹತ್ತಿರವೂ ಟಿಕೆಟ್ ಕೇಳಿಲ್ಲ : ನಟ ಕಿಚ್ಚ ಸುದೀಪ್ ಸ್ಪಷ್ಟನೆ
ವಕೀಲರ ಪತ್ರದಲ್ಲೇನಿದೆ : ‘ಕನ್ನಡದ ಚಲನಚಿತ್ರ ನಟ ಕಿಚ್ಚ ಸುದೀಪ್ ಅವರು ಭಾರತೀಯ ಜನತಾ ಪಕ್ಷದ ಸ್ಟಾರ್ ಪ್ರಚಾರಕರಾಗಿರುವುದರಿಂದ ಚುನಾವಣೆ ಮುಗಿಯುವವರೆಗೂ ಅವರ ನಟನೆಯ ಯಾವುದೇ ಚಲನಚಿತ್ರಗಳು ಚಿತ್ರ ಮಂದಿರಗಳಲ್ಲಿ ಮತ್ತು ಅವರು ನಡೆಸಿಕೊಡುವ ಟಿವಿಶೋಗಳು ಪ್ರಸಾರವಾಗದಂತೆ ಮತ್ತು ಅವರು ನಟಿಸಿರುವ ಜಾಹೀರಾತುಗಳು ಸಹ ಪ್ರಸಾರವಾಗದಂತೆ ಚುನಾವಣಾ ಆಯೋಗ ಕಟ್ಟು ನಿಟ್ಟಿನ ಕ್ರಮಜರುಗಿಸಬೇಕು’ ಎಂದು ಬರೆದಿದ್ದಾರೆ
ಅಲ್ಲದೇ, ‘ಅವರು ಒಂದು ರಾಜಕೀಯ ಪಕ್ಷದ ಪರವಾಗಿ ಪ್ರಚಾರಮಾಡುತ್ತಿರುವುದನ್ನು ಅವರೆ ಘೋಷಣೆ ಮಾಡಿದ್ದರಿಂದ ಅವರ ನಟನೆಯ ಚಲನಚಿತ್ರಗಳು ಮತ್ತು ಟಿವಿಶೋಗಳು ಹಾಗೂ ಜಾಹೀರಾತುಗಳು ಮತದಾರರ ಮೇಲೆ ಪ್ರಭಾವ ಬೀರುವುದರಿಂದ ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ ಆಗಿರುತ್ತದೆ. ಆದ್ದರಿಂದ ತಕ್ಷದಿಂದ ಚುನಾವಣಾ ಆಯೋಗ ಈ ವಿಷಯಕ್ಕೆ ಸಂಬಂದಿಸಿದಂತೆ ತುರ್ತು ಕ್ರಮ ಜರುಗಿಸಬೇಕೆಂದು ಒಬ್ಬ ಜವಾಬ್ದಾರಿಯುತ ನಾಗರೀಕನಾಗಿ ಒತ್ತಾಯಿಸುತ್ತಿದ್ದೇನೆ’ ಎಂದು ಶಿವಮೊಗ್ಗದ ವಕೀಲರಾದ ಕೆ.ಪಿ ಶ್ರೀಪಾಲ್ ಎನ್ನುವವರು ಚುನಾವಣಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ.