ಹೊಸ ಕ್ರಿಮಿನಲ್ ಕಾನೂನುಗಳ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ

ಹೊಸದಿಲ್ಲಿ: ಭಾರತದ ಕ್ರಿಮಿನಲ್ ಕಾನೂನುಗಳನ್ನು ಸಂಪೂರ್ಣವಾಗಿ ಬದಲಿಸಿ ಕೇಂದ್ರದ ಬಿಜೆಪಿ ಸರ್ಕಾರ ಇತ್ತೀಚೆಗೆ ಪರಿಚಯಿಸಿದ ಮೂರು ಹೊಸ ಕಾನೂನುಗಳ ಜಾರಿಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದ್ದು, ಈ ಕಾನೂನಿನಲ್ಲಿ ಅನೇಕ “ದೋಷಗಳು ಮತ್ತು ವ್ಯತ್ಯಾಸಗಳಿವೆ” ಎಂದು ಆರೋಪಿಸಿದ್ದಾರೆ. ಭಾರತೀಯ ನ್ಯಾಯ (ಎರಡನೇ) ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ (ದ್ವಿತೀಯ) ಸಂಹಿತಾ ಮತ್ತು ಭಾರತೀಯ ಸಾಕ್ಷಿ (ಎರಡನೇ) ಮಸೂದೆಗಳು ಎಂಬ ಮೂರು ಪ್ರಮುಖ ಮಸೂದೆಗಳನ್ನು ಲೋಕಸಭೆಯಲ್ಲಿ ಡಿಸೆಂಬರ್ 21 ರಂದು  ಅಂಗೀಕರಿಸಲಾಗಿತ್ತು. ಅದಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಿಸೆಂಬರ್ 25 ರಂದು ಮಸೂದೆಗಳಿಗೆ ಒಪ್ಪಿಗೆ ನೀಡಿದ್ದಾರೆ.

ಈ ಹೊಸ ಕಾನೂನುಗಳು ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಕಾಯಿದೆಯನ್ನು ಬದಲಿಗೆ ಪರಿಚಯಿಸಲಾಗಿದೆ. ಮೂರು ಕಾನೂನುಗಳ ಕಾರ್ಯಾಚರಣೆಗೆ ತಡೆಯಾಜ್ಞೆ ಕೋರಿ, ವಕೀಲ ವಿಶಾಲ್ ತಿವಾರಿ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ, “ಸಂಸತ್ತಿನಲ್ಲಿ ವಿರೋಧ ಪಕ್ಷದ ಬಹುತೇಕ ಸದಸ್ಯರು ಅಮಾನತುಗೊಂಡಿರುವ ವೇಳೆ ಯಾವುದೇ ಚರ್ಚೆಯಿಲ್ಲದೆ ಅವುಗಳನ್ನು ಜಾರಿಗೊಳಿಸಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೋವಿಡ್ ಸಂದರ್ಭದಲ್ಲಿ 40 ಸಾವಿರ ಕೋಟಿ ರೂ. ಅಕ್ರಮ; ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ

ಮೂರು ಹೊಸ ಕ್ರಿಮಿನಲ್ ಕಾನೂನುಗಳ ಕಾರ್ಯಸಾಧ್ಯತೆಯನ್ನು ನಿರ್ಣಯಿಸಲು ತಜ್ಞರ ಸಮಿತಿಯನ್ನು ತಕ್ಷಣವೇ ರಚಿಸುವಂತೆ ನಿರ್ದೇಶನ ನೀಡುವಂತೆ ಅರ್ಜಿ ನ್ಯಾಯಾಲಕ್ಕೆ ಕೋರಿದೆ. “ಹೊಸ ಕ್ರಿಮಿನಲ್ ಕಾನೂನುಗಳು ಹೆಚ್ಚು ಕಠಿಣವಾಗಿದ್ದು, ವಾಸ್ತವದಲ್ಲಿ ಅದು ಪೊಲೀಸ್ ರಾಜ್ಯವನ್ನು ಸ್ಥಾಪಿಸುತ್ತವೆ. ಭಾರತದ ಜನರ ಮೂಲಭೂತ ಹಕ್ಕುಗಳ ಪ್ರತಿಯೊಂದು ನಿಬಂಧನೆಗಳನ್ನು ಇದು ಉಲ್ಲಂಘಿಸುತ್ತವೆ. ಬ್ರಿಟಿಷ್ ಕಾನೂನುಗಳನ್ನು ವಸಾಹತುಶಾಹಿ ಮತ್ತು ಕಠೋರವೆಂದು ಪರಿಗಣಿಸಿದರೆ, ಭಾರತೀಯ ಕಾನೂನುಗಳು ಈಗ ಹೆಚ್ಚು ಕಠಿಣವಾಗಿವೆ” ಎಂದು ಅರ್ಜಿಯು ವಾದಿಸಿದೆ.

“ಬ್ರಿಟಿಷರ ಅವಧಿಯಲ್ಲಿ ನೀವು ಒಬ್ಬ ವ್ಯಕ್ತಿಯನ್ನು ಗರಿಷ್ಠ 15 ದಿನಗಳವರೆಗೆ ಪೊಲೀಸ್ ಕಸ್ಟಡಿಯಲ್ಲಿ ಇರಿಸಬಹುದು. ಆದರೆ ಹೊಸ ಕಾನೂನಿನಲ್ಲಿ ಇದನ್ನು 15 ದಿನಗಳಿಂದ 90 ದಿನಗಳು ಮತ್ತು ಅದಕ್ಕಿಂತ ಹೆಚ್ಚಿನ ದಿನಗಳಿಗೆ ವಿಸ್ತರಿಸಲಾಗಿದೆ. ಇದು ಪೊಲೀಸ್ ಚಿತ್ರಹಿಂಸೆಯನ್ನು ಸಕ್ರಿಯಗೊಳಿಸುವ ಆಘಾತಕಾರಿ ನಿಬಂಧನೆಯಾಗಿದೆ” ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಹೊಸ ಕಾನೂನುಗಳ ಅಡಿಯಲ್ಲಿ, ದಂಡವನ್ನು ವಿಧಿಸುವ ಮ್ಯಾಜಿಸ್ಟ್ರೇಟ್ ಅಧಿಕಾರವನ್ನು ಹೆಚ್ಚಿಸಲಾಗಿದ್ದು, ಘೋಷಿತ ಅಪರಾಧಿ ಎಂದು ಘೋಷಿಸುವ ವ್ಯಾಪ್ತಿಯನ್ನು ಹೆಚ್ಚಿಸಲಾಗಿದೆ.

ವಿಡಿಯೊ ನೋಡಿ: ಶೋಷಿತರ ಧ್ವನಿಗೆ ಪ್ರತಿಧ್ವನಿಯಾಗಿ ಮೊಳಗಿದ ಸಪ್ದರ್ ಹಾಶ್ಮಿ Janashakthi Media

Donate Janashakthi Media

Leave a Reply

Your email address will not be published. Required fields are marked *