ಬೆಂಗಳೂರು: ಒಳ ಮೀಸಲಾತಿ ಮಸೂದೆಗೆ ಅನುಮೋದನೆ ನೀಡುವಂತೆ ಕೋರಿ ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ನೇತೃತ್ವದ ನಿಯೋಗವು ರಾಜ್ಯಪಾಲ ಥಾವರಚಂದ್ ಗೆಹಲೋಟ್ ಅವರಿಗೆ ಫೆಬ್ರವರಿ 17ರಂದು ಮನವಿ ಸಲ್ಲಿಸಿತು.
ಪರಿಶಿಷ್ಟ ಜಾತಿ ಎಡಗೈ ಸಮುದಾಯದ ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಸಮುದಾಯ ಮುಖಂಡರನ್ನು ಒಳಗೊಂಡ ನಿಯೋಗ ಲೋಕಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದರು.
ಇದನ್ನೂ ಓದಿ: ಪೋಕ್ಸೋ, ಅತ್ಯಾಚಾರ ಪ್ರಕರಣಗಳ ಎಫ್‌ಐಆರ್: ಪೊಲೀಸರಿಗೆ ಸುತ್ತೋಲೆ ಬಿಡುಗಡೆ
‘ಸಂವಿಧಾನದ ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಮೌಲ್ಯಗಳಿಗೆ ಅನುಗುಣವಾಗಿ ಪರಿಶಿಷ್ಟ ಜಾತಿಯ 101 ಒಳ ಸಮುದಾಯಗಳಿಗೆ ನ್ಯಾಯಸಮ್ಮತ ಮೀಸಲಾತಿ ಕಲ್ಪಿಸಲು ಮಸೂದೆ ಮಹತ್ವದ ಹೆಜ್ಜೆಯಾಗಿದೆ’ ಎಂದು ಮನವರಿಕೆ ಮಾಡಿಕೊಟ್ಟರು.
ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಆಡಳಿತ ಹಾಗೂ ವಿರೋಧ ಪಕ್ಷಗಳ ಸಹಮತದಿಂದ ಎರಡೂ ಸದನಗಳಲ್ಲಿ ಅಂಗೀಕರಿಸಲ್ಪಟ್ಟ ಒಳಮೀಸಲಾತಿ ಮಸೂದೆಗೆ ಅನುಮೋದನೆ ನೀಡಬೇಕು ಎಂದು ಕೋರಿದರು.
ಇದನ್ನೂ ನೋಡಿ: ಅಖಿಲ ಭಾರತ ಮುಷ್ಕರ| ಪೊಲೀಸರ ದರ್ಪ – ಮಾನವೀಯತೆ ಕಳೆದುಕೊಂಡ ಸರಕಾರ Janashakthi Media
