ಬೆಂಗಳೂರು : ದಿನೇ ದಿನೇ ಹೆಚ್ಚುತ್ತಿರುವ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಘಟಕವು ಕ್ರಾಂತಿವೀರ ಸಂಗೊಳ್ಳಿರಾಯಣ್ಣ ರೈಲು ನಿಲ್ದಾಣದಿಂದ ಕಾಂಗ್ರೆಸ್ ಭವನದ ವೆರೆಗೆ ಪ್ರತಿಭಟನಾ ರ್ಯಾಲಿಯನ್ನು ನಡೆಸಿ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿದರು.
ಈ ಪ್ರತಿಭಟನಾ ರ್ಯಾಲಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡುತ್ತಾ ಈ ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗುತ್ತಿದ್ದಂತೆ ಬೀದಿಗೆ ಬಂದು ಪ್ರತಿಭಟನೆ ಮಾಡುತ್ತಿದ್ದ ಬಿಜೆಪಿ ನಾಯಕ ಮತ್ತು ಮಹಿಳಾ ಮುಖಂಡರು ಈಗ ಬಾಯಿಗೆ ಬೀಗ ಹಾಕಿಕೊಂಡಿದ್ದಾರೆ ಎಂದು ಕಿಡಿಕಾರಿದರು.
ಕೊರೊನಾ ಸಂರ್ಭದಲ್ಲಿ ಆಟೋ ಆಲಕರು, ನೇಕಾರರು, ಟೈಲರ್ ಗಳು ಅಗಸರು, ರೈತರು ಸೇರಿದಂತೆ ಎಲ್ಲರೂ ಸಂಕಷ್ಟಕ್ಕೆ ಒಳಗಾದರು. ಆದರೆ ಬಿಜೆಪಿ ಸರ್ಕಾರದಿಂದ ಆವರಿಗೆ ಒಂದು ಪೈಸೆ ಲಾಭವಾಗಿ. ಅಡುಗೆ ಅನಿಲದ ಬೆಲೆ ಸಾವಿರ ರೂ. ಆದರೂ ನಮಗೆ ಖರೀದಿಸುವ ಸಾಮಥ್ರ್ಯ ಇದೆ. ಆದರೆ, ಜನಸಾಮಾನ್ಯರು ಹಾಗೂ ಬಡವರ ಹೇಗೆ ಖರೀದಿಸುತ್ತಾರೆ? ಈಹಿಂದೆಲ್ಲಾ ಬಾಯಿ ಬಡಿದುಕೊಳ್ಳುತ್ತಿದ್ದವರು, ಈಗ ನಿರಂತರವಾಗಿ ಏರಿಕೆ ಕಾಣುತ್ತಿರುವ ತೈಲ, ಅಡುಗೆ ಅನಿಲ ಬೆಲೆಗಳ ಬಗ್ಗೆ ಮೌನ ವಹಿಸುತ್ತಿದ್ದಾರೆ.
ಈ ಹಿಂದೆ ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ರಾಜ್ಯದ ಶೋಭಾಕರಂದ್ಲಾಜೆ, ಕೇಂದ್ರ ಸಚಿವರಾದ ನಿರ್ಮಲಾಸೀತಾರಾಮನ್, ಸ್ಮೃತಿ ಇರಾನಿ ಹಾಗೂ ಮತ್ತಿತರ ಮಹಿಳಾ ಮುಖಂಡರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದರು. ಆದರೆ ಈಗ ಎಲ್ಲಾ ದರಗಳು ಏರುತ್ತಲೇ ಇವೆ. ಅವರೆಲ್ಲರೂ ಮೌನಕ್ಕೆ ಶರಣಾಗಿದದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾಸೀತಾರಾಮನ್ ಅವರಿಗೆ ಹೊಲೆ ಹಚ್ಚಿ ಅಡುಗೆ ಮಾಡಿದ ಅನುಭವ ಇದ್ದಂತೆ ಇಲ್ಲ. ಅವರೂ ಈ ಕುರಿತು ಬಾಯಿ ಬಿಡುತ್ತಿಲ್ಲ. ಹಾಗಾಗಿ ಬಿಜೆಪಿ ಮಹಿಳಾ ಮುಖಂಡರ ಮನೆಗಳಿಗೆ ಗ್ಯಾಸ್ ಸಿಲೆಂಡರ್ ಗಳನ್ನು ಬಹುಮಾನವಾಗಿ ಕಳುಹಿಸಬೇಕೆಂದು ತಿರುಗೇಟು ನೀಡಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಮಾಜಿ ಸಚಿವ ಕೃಷ್ಣಬೈರೇಗೌಡ, ಶಾಸಕಿ ಲಕ್ಷ್ಮೀಹೆಬ್ಬಾಳ್ಕರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್, ಶಾಸಕಿ ಸೌಮ್ಯಾರೆಡ್ಡಿ, ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಪುಷ್ಪಾ ಅಮರ್‍ನಾಥ್ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.