ಬೆಂಗಳೂರು: ಇನ್ಮುಂದೆ ರಾಜ್ಯದಲ್ಲಿ ಇಂಧನ ಬೆಲೆ ಏರಿಕೆಯಾಗಲಿದೆ ಎಂಬ ಮಾತುಗಳು ಕೇಳಿ ಬಂದಿವೆ ಪೆಟ್ರೋಲ್
ರಾಜ್ಯ ಸರ್ಕಾರ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ಮಾರಾಟ ತೆರಿಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದ್ದರ ಪರಿಣಾಮ, ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ದರ ಹೆಚ್ಚಳವಾಗಲಿದೆ.ಪೆಟ್ರೋಲ್, ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ದರವನ್ನು ಹೆಚ್ಚಳ ನಿರ್ಧಾರವನ್ನು ಸರ್ಕಾರ ಪ್ರಕಟಿಸಿದೆ.
ಇದನ್ನು ಓದಿ : ಕರ್ನಾಟಕಕ್ಕೆ ಹರಿದು ಬಂದ.3750 ಕೋಟಿ ರೂ. ಬಂಡವಾಳ: ಹೆಚ್.ಕೆ.ಪಾಟೀಲ
ತೆರಿಗೆ ದರ ಹೆಚ್ಚಳದಿಂದಾಗಿ ರಾಜ್ಯದಲ್ಲಿ ಪೆಟ್ರೋಲ್ ದರ 3 ರೂಪಾಯಿ ಹಾಗೂ ಡೀಸೆಲ್ ದರ 3.50 ರೂ ಹೆಚ್ಚಳ ವಾಗಲಿದೆ. ಈ ಹಿಂದೆ ಪೆಟ್ರೋಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಶೇ.25.92ರಷ್ಟಿತ್ತು. ಈಗ ಶೇ.3.9ರಷ್ಟು ಹೆಚ್ಚಳ ಮಾಡಲಾಗಿದ್ದು, ಶೇ.29.84ಕ್ಕೆ ಏರಿಕೆ ಮಾಡಲಾಗಿದೆ. ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಶೇ.14.34ರಷ್ಟಿತ್ತು. ಈಗ ಶೇ.4.1ರಷ್ಟು ಹೆಚ್ಚಳ ಮಾಡಲಾಗಿದ್ದು, ಶೇ.18.44ಕ್ಕೆ ಏರಿಕೆಯಾಗಿದೆ.
ಇದನ್ನು ನೋಡಿ : ನಿರಂಜನ 100 ಚಿರಸ್ಮರಣೆ | ಕಯ್ಯೂರು ವೀರರ ಕಥೆJanashakthi Media