ಬೆಳಗಾವಿ: ಮದುವೆಗೆ ಆರ್ಡರ್ ಇದೆ ಎಂದು ಬಂದಿದ್ದ ಪೋಟೋಗ್ರಾಫರ್ ಓರ್ವರನ್ನು ನಾಲ್ವರ ಗುಂಪು ಕಿಡ್ನ್ಯಾಪ್ ಮಾಡಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಉಮೇಶ್ ಹಲ್ಲೆ ಗೊಳಗಾದ ಫೋಟೋಗ್ರಾಫರ್ ಎಂದು ಗುರುತಿಸಲಾಗಿದೆ. ಬೈಲಹೊಂಗಲ ಪಟ್ಟಣದಲ್ಲಿ ವಾಸವಾಗಿದ್ದ ಉಮೇಶ್, ಬೆಳಗಾವಿ ನಗರದ ಕೆಪಿಟಿಸಿಎಲ್ ಕಲ್ಯಾಣ ಮಂಟಪಕ್ಕೆ ನಾಲ್ಕು ದಿನಗಳ ಹಿಂದೆ ಬೆಳಗಾವಿಗೆ ಬಂದಿದ್ದ.
ಈ ವೇಳೆ ಉಮೇಶ್ ನನ್ನು ಕಿಡ್ನ್ಯಾಪ್ ಮಾಡಿದ ನಾಲ್ವರ ಗುಂಪು ಮಾರಣಾಂತಿಕವಾಗಿ ರಾಡ್ ನಿಂದ ಹಲ್ಲೆ ನಡೆಸಿ ಬೈಲಹೊಂಗಲ ತಾಲೂಕಿನ ಚವಳಗುಂಡಿ ಕ್ರಾಸ್ ಬಳಿ ಕಾರು ನಿಲ್ಲಿಸಿ ಬಿಟ್ಟು ಹೋಗಿದ್ದರು.
ಇದನ್ನೂ ಓದಿ: 87 ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವೈದ್ಯ – 14 ವರ್ಷದಿಂದ 67 ವರ್ಷಗಳ ವಯಸ್ಸಿನವರ ಮೇಲೂ ಅತ್ಯಾಚಾರ
ಉಮೇಶ್ ಹೆಣ್ಣುಮಕ್ಕಳನ್ನು ಕಾಡಿಸುತ್ತಿದ್ದ ಎಂಬ ಕಾರಣಕ್ಕೆ ಆತನನ್ನು ಕಿಡಿಪ್ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. 8 ಜನರ ವಿರುದ್ಧ ಮಾಳಮಾರುತಿ ಠಾಣೆಯಲ್ಲಿ ಕೇಸ್ ದಾಖಲತ್ತು. ಪ್ರಕರಣ ಸಂಬಂಧ ಇಬ್ಬರು ಮಹಿಳೆಯರು ಸೇರಿ 8 ಜನರನ್ನು ಬಂಧಿಸಲಾಗಿದೆ.
ವಿಕ್ಕಿ, ಪ್ರವೀಣ್, ಉಮಾರಾಣಿ, ಬಸವರಾಜ್ ನರಟ್ಟಿ, ಸೇರಿ 8 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಹಲ್ಲೆಗೊಳಗಾದ ಉಮೇಶ್ ಬೈಲಹೊಂಗಲ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ.
ಇದನ್ನೂ ನೋಡಿ: ಒಂದು ದೇಶ, ಒಂದು ಚುನಾವಣೆ | ಸಂವಿಧಾನದ ಮೂಲಭೂತರಚನೆಗೆ ಗಂಡಾಂತರ – ಕೆ.ಎನ್. ಉಮೇಶ್ Janashakthi Media