ಬೆಂಗಳೂರು: ರಾಹುಲ್ ಗಾಂಧಿ ಮಹಿಳೆಯರ ಘನತೆಗೆ ಚ್ಯುತಿ ಉಂಟು ಮಾಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಕ್ರಮಕ್ಕೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿ ಅರ್ಜಿದಾರರಿಗೆ 25 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ.
ಕಳೆದ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭ ಜೆಡಿಎಸ್ ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ 400 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಇದನ್ನು ಓದಿ : ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ ಹಿನ್ನಲೆ: ರಾಹುಲ್ ಗಾಂಧಿ ಜಾರ್ಖಂಡ್‌ಗೆ ಭೇಟಿ
ಮತ ಗಳಿಕೆಯ ಉದ್ದೇಶದಿಂದ ರಾಹುಲ್ ಈ ಸುಳ್ಳು ಆರೋಪ ಮಾಡಿದ್ದು, ಇದರಿಂದ ಹಾಸನದ ಮಹಿಳೆಯರ ಗೌರವಕ್ಕೆ ಧಕ್ಕೆಯಾಗಿದೆ. ಹಾಗಾಗಿ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಆಲ್ ಇಂಡಿಯಾ ದಲಿತ್ ಆ್ಯಕ್ಷನ್ ಕಮಿಟಿಯು ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಿತ್ತು.
ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾ.ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ಪೀಠ ಅರ್ಜಿಯನ್ನು ವಜಾಗೊಳಿಸಿ, ಅರ್ಜಿದಾರರಿಗೆ ದಂಡ ವಿಧಿಸಿ ಆದೇಶಿಸಿದೆ.
ಇದನ್ನು ನೋಡಿ : ಪಿಎಂಎಲ್‌ಎ ಮತ್ತು ಯುಎಪಿಎ – ಎರಡು ಕರಾಳು ಶಾಸನಗಳ ಆಳ ಅಗಲ Janashakthi Media