ಪ್ರಧಾನ ಮಂತ್ರಿ ಸ್ಥಾನಕ್ಕೆ ನರೇಂದ್ರ ಮೋದಿ ರಾಜೀನಾಮೆ!

ನವದೆಹಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ ಸಲ್ಲಿಸಿದರು. ಪ್ರಧಾನ

ರಾಷ್ಟ್ರಪತಿಗಳು ರಾಜೀನಾಮೆ ಅಂಗೀಕರಿಸಿದ್ದಾರೆ. 17ನೇ ಲೋಕಸಭೆ ವಿಸರ್ಜನೆಯ ಆಗಬೇಕಿರುವ ಹಿನ್ನೆಲೆಯಲ್ಲಿ ಅವರು ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.ಸದ್ಯ ಮೋದಿಯವರು ಉಸ್ತುವಾರಿ ಪ್ರಧಾನಿಯಾಗಿ ಮುಂದುವರಿಯಲಿದ್ದಾರೆ.

ಎನ್‌ಡಿಎ ಬಲ್ಲ ಮೂಲಗಳ ಪ್ರಕಾರ ಜೂನ್‌ 8ರಂದು ನೂತನ ಸರಕಾರ ರಚನೆಯಾಗಿಲಿದ್ದು ಪ್ರಧಾನಿ ಆಯ್ಕೆ ಇನ್ನೆರಡು ದಿನದಲ್ಲಿ ಅಂತಿಮಗೊಳ್ಳಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬಿಜೆಪಿ ನೇತೃತ್ವದ ಎನ್‌ಡಿಎ 294 ಸ್ಥಾನಗಳೊಂದಿಗೆ ಬಹುಮತ ಪಡೆದಿದೆ. ಇಂತಹ ಪರಿಸ್ಥಿತಿಯಲ್ಲಿ ಎನ್‌ಡಿಎ ಸರ್ಕಾರ ರಚಿಸುವ ಸಾಧ್ಯತೆ ದಟ್ಟವಾಗಿದೆ. ಆದರೆ ಬಿಜೆಪಿಗೆ ಸ್ವಂತ ಬಲದಿಂದ ಬಹುಮತ ಬಂದಿಲ್ಲ. ಇದರಿಂದಾಗಿ ಎನ್‌ಡಿಎ ಮಿತ್ರಪಕ್ಷಗಳು ಕೈಬಿಡುವ ಸಾಧ್ಯತೆ ಇದೆಯಾ ಅನ್ನೋದರ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ. ಬಿಹಾರ ಮುಖ್ಯಮಂತ್ರಿ ಮತ್ತು ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಮತ್ತು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಬಗ್ಗೆ ಹೆಚ್ಚಿನ ಚರ್ಚೆ ನಡೆಯುತ್ತಿದೆ. ಆದರೆ, ಇಬ್ಬರೂ ನಾಯಕರು ಎನ್‌ಡಿಎ ಜೊತೆಗಿರುವ ಸುಳಿವು ನೀಡಿದ್ದಾರೆ.

ಇದನ್ನೂ ಓದಿಬಿಜೆಪಿಗೆ ಹಿನ್ನಡೆಯುಂಟು ಮಾಡಿರುವ ಜನರ ತೀರ್ಪು – ಲೋಕಸಭಾ ಚುನಾವಣಾ ಫಲಿತಾಂಶಗಳ ಬಗ್ಗೆ ಸಿಪಿಐ(ಎಂ)ಅಭಿನಂದನೆ

ಇತ್ತ 234 ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಐಎನ್‌ಡಿಐಎ ಒಕ್ಕೂಟ ಸಹ ಸರ್ಕಾರ ರಚನೆಗೆ ಕಸರತ್ತು ನಡೆಸುತ್ತಿದೆ. ಈ ಎಲ್ಲಾ ಬೆಳವಣಿಗೆ ನಡುವೆ ತೇಜಸ್ವಿ ಯಾದವ್ ಮತ್ತು ನಿತೀಶ್ ಕುಮಾರ್ ಜೊತೆಯಾಗಿಯೇ ದೆಹಲಿಗೆ ಆಗಮಿಸಿದ್ದಾರೆ.

543 ಸದಸ್ಯ ಬಲದ ಲೋಕಸಭೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 294 ಸ್ಥಾನಗಳನ್ನು ಗಳಿಸಿದೆ. ಲೋಕಸಭೆಯಲ್ಲಿ ಅಧಿಕಾರ ಹಿಡಿಯುವುದಕ್ಕೆ 272 ಸೀಟುಗಳ ಅಗತ್ಯವಿದೆ. ಸರಳ ಬಹುಮತಕ್ಕಿಂತ 22 ಸೀಟು ಹೆಚ್ಚೇ ಎನ್‌ಡಿಎ ಮೈತ್ರಿಕೂಟ ಗೆದ್ದಿದೆ. ಹಾಗಾಗಿ ಮೈತ್ರಿ ಪಕ್ಷದ ನಾಯಕರನ್ನು ವಿಶ್ವಾಸದಲ್ಲಿ ಹಿಡಿದಿಟ್ಟುಕೊಳ್ಳುವುದು ತುಂಬಾ ಅವಶ್ಯವಾಗಿದೆ.
ಇತ್ತ ಇಂಡಿಯಾ ಮೈತ್ರಿಕೂಟವೂ ಸರಳ ಬಹುಮತಕ್ಕಿಂತ 38 ಸೀಟು ಕಡಿಮೆ ಗೆದ್ದಿದೆ. ಹೀಗಾಗಿ ಎನ್‌ಡಿಎ ಮೈತ್ರಿಕೂಟದಲ್ಲಿರುವ ಬಿಹಾರ ಜೆಡಿಯುನ ನಿತೀಶ್ ಕುಮಾರ್ ಹಾಗೂ ಆಂಧ್ರ ಪ್ರದೇಶ ಟಿಡಿಪಿಯ ಚಂದ್ರಬಾಬು ನಾಯ್ಡು ಇಲ್ಲಿ ಕಿಂಗ್ ಮೇಕರ್ ಆಗಿ ಹೊರ ಹೊಮ್ಮಿದ್ದು, ಇಂದು ದೆಹಲಿಯ ಖಾಸಗಿ ಹೊಟೇಲ್‌ನಲ್ಲಿ ನಡೆಯುವ ಎನ್‌ಡಿಎ ಕೂಟದ ಸಭೆಯಲ್ಲಿ ಭಾಗವಹಿಸಬಹುದು ಎಂಬ ಮಾಹಿತಿ ಲಭ್ಯವಾಗಿದೆ.

ಮೋದಿ ರಾಜೀನಾಮೆ ಬೆನ್ನಲ್ಲಿ, ಎನ್‌ಡಿಎ ಪ್ರಧಾನಿ ಬದಲಾಗಬಹುದು ಎಂಬ ಚರ್ಚೆಗಳು ಕೇಳಿ ಬಂದಿವೆ. ಮೋದಿ ಕಡುವೈರಿಯಾಗಿರುವ ಚಂದ್ರಬಾಬು ನಾಯ್ಡು ಹಾಗೂ ನಿತೀಶ್‌ ಕುಮಾರ್‌ ಸೂಚಿಸಿದ ಹೆಸರಿನವರು ಪ್ರಧಾನಿಯಾಗಲಿದ್ದಾರೆ ಎಂಬ ಚರ್ಚೆಗಳು ನಡೆಯುತ್ತಿವೆ.

ಈ ವಿಡಿಯೋ ನೋಡಿಲೋಕಮತ 2024 | ಐದು ರಾಜ್ಯಗಳಲ್ಲಿ ನಡೆಯದ ಬಿಜೆಪಿ ಆಟ

 

 

Donate Janashakthi Media

Leave a Reply

Your email address will not be published. Required fields are marked *