ಪ್ರಧಾನಿಯವರೇ ಇಂಡಿಯಾ ಎಂಬ ಹೆಸರಿನ ಬಗ್ಗೆ ನಿಮಗೆ ಯಾಕೆ ಇಷ್ಟು ದ್ವೇಷ?: ಸಿಎಂ ಸಿದ್ದರಾಮಯ್ಯ

ಬೆಂಗಳೂರು:ಭಯೋತ್ಪಾದಕ ಸಂಘಟನೆ ಇಂಡಿಯನ್‌ ಮುಜಾಹಿದೀನ್‌ ಹೆಸರಿನಲ್ಲೂ INDIA ಇದೆ ಎಂದು ವಿರೋಧ ಪಕ್ಷಗಳ ಒಕ್ಕೂಟದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾಡಿದ್ದ ಟೀಕೆಗೆ ಕಿಡಿಕಾರಿದ ಮುಖ್ಯ ಮಂತ್ರಿ ಸಿದ್ದರಾಮಯ್ಯ ನವರು, ಪ್ರಧಾನಿ ನರೇಂದ್ರ ಮೋದಿಯವರೇ,ಇಂಡಿಯಾ ಎಂಬ ಸುಂದರ,ಸುಮಧುರ ಮತ್ತು ಪವಿತ್ರ ಹೆಸರಿನ ಬಗ್ಗೆ ನಿಮಗೆ ಯಾಕೆ ಇಷ್ಟೊಂದು ದ್ವೇಷ?ಎಂದು ಟ್ವೀಟ್‌ ಮೂಲಕ ಪ್ರಶ್ನಿಸಿದ್ದಾರೆ.

ಇಂಡಿಯಾ ಹೆಸರಿನ ಬಗ್ಗೆ ಇಷ್ಟೊಂದು ಅಸಹನೆ ಹೊಂದಿರುವ ನೀವು ನಿಮ್ಮದೇ ಸರಕಾರದ ಕಾರ್ಯಕ್ರಮಗಳಾದ ಮೇಕ್‌ ಇನ್‌ ಇಂಡಿಯಾ,ಸ್ಟಾರ್ಟ್‌ ಆಪ್‌ ಇಂಡಿಯಾ,ಸ್ಕಿಲ್‌ ಇಂಡಿಯಾ ಮೊದಲಾದ ಕಾರ್ಯಕ್ರಮಗಳ ಹೆಸರನ್ನೂ ಬದಲಾಯಿಸುವಿರಾ?ಎಂದು ಪ್ರಧಾನಿ ಮಂತ್ರಿ ಮೋದಿಗೆ ಪ್ರಶ್ನಿಸಿದ್ದಾರೆ.

ವಿರೋಧ ಪಕ್ಷಗಳ ಮೈರಿಕೂಟ ಇಂಡಿಯಾವನ್ನು ಈಸ್ಟ್‌ ಇಂಡಿಯಾ ಕಂಪನಿ ಮತ್ತು ಇಂಡಿಯನ್‌ ಮುಜಾಹಿದ್ದೀನ್‌ಗೆ ಹೋಲಿಸಿರುವ ಸನ್ಮಾನ ಪ್ರಧಾನಿ ನರೇಂದ್ರ ಮೋದಿಯವರೇ ಭಾರತೀಯರ ನೂರಾರು ಕೋಟಿ ತೆರಿಗೆ ಹಣವನ್ನು ಲೂಟಿ ಮಾಡಿ ದೇಶ ಬಿಟ್ಟು ಓಡಿಹೋಗಿರುವ ನೀರವ್‌ ಮೋದಿ ಮತ್ತು ಲಲಿತ್‌ ಮೋದಿ ಅವರ ಹೆಸರಿನಲ್ಲಿಯೂ ನಿಮ್ಮ ಹೆಸರಿನ ಮೋದಿ ಇದೆಯಲ್ವಾ?ಅವರನ್ನು ನಿಮ್ಮ ಜೊತೆ ಹೋಲಿಸಬಹುದಾ? ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ:ಕೋಮು ಗಲಭೆಗಳಲ್ಲಿ ಅಮಾಯಕರ ಮೇಲಿನ ಕೇಸ್‌ ವಾಪಸ್‌ಗೆ ಶಿಫಾರಸು: ಬಿಜೆಪಿ ಕಿಡಿ

ಲಲಿತ್‌ ಮತ್ತು ನೀರವ್‌ ಹೆಸರಲ್ಲಿಯೂ ಮೋದಿ ಇದೆಯಲ್ಲಾ ಎಂಬ ಸಾಮಾನ್ಯ ಪ್ರಶ್ನೆ ಕೇಳಿದ ರಾಹುಲ್‌ ಗಾಂಧಿಯವರ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡಿ,ಎರಡು ವರ್ಷ ಜೈಲು ಶಿಕ್ಷೆ ನೀಡಿ,ಲೋಕಸಭೆಯಿಂದ ಅನರ್ಹಗೊಳಿಸಲಾಯಿತು.ಈಗ ಇಂಡಿಯಾವನ್ನು ಈಸ್ಟ್‌ ಇಂಡಿಯಾ ಕಂಪನಿ ಮತ್ತು ಇಂಡಿಯನ್‌ ಮುಜಾಹಿದ್ದೀನ್‌ಗೆ ಹೋಲಿಸಿರುವ ನಿಮ್ಮ ಹೋಲಿಕೆಗೆ ರಾಹುಲ್‌ ಗಾಂಧೀಯವರ ವಿರುದ್ದದ ಕ್ರಮ ಅನ್ವಯವಾಗುವುದಿಲ್ಲವೇ?ಎಂದು ಹೇಳಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *