ಒಡಿಶಾ: ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕಟಕ್: ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸುಭಾಷ್ ಕುಮಾರ್ ಬೆಹಾರಿ ಮೃತದೇಹ ಅವರ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದಕ್ಕೆ ನಿರ್ದಿಷ್ಟ ಕಾರಣ ತಿಳಿದು ಬಂದಿಲ್ಲ.

ಈ ಬಗ್ಗೆ ಮಾಹಿತಿ ನೀಡಿರುವ ಕಟಕ್ ನಗರ ವಲಯ 3ರ ಸಹಾಯಕ ಪೊಲೀಸ್ ಕಮಿಷನರ್ ತಪಸ್ ಪ್ರಧಾನ್, ಒಡಿಶಾದ ಕಟಕ್‌ನ ಪೋಕ್ಸೊ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸುಭಾಷ್ ಕುಮಾರ್ ಬೆಹಾರಿ ಅವರಿಗೆ 49 ವರ್ಷ ವಯಸ್ಸಾಗಿತ್ತು. ಅವರ ಮೃತದೇಹ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅವರ ಕುತ್ತಿಗೆಯಲ್ಲಿ ಗಾಯದ ಗುರುತುಗಳಿವೆ ಎಂದು ಹೇಳಿದ್ದಾರೆ.

ಘಟನೆ ನಡೆದ ಸಮಯದಲ್ಲಿ ನ್ಯಾಯಾಧೀಶರ ಪತ್ನಿ ಮನೆಯಲ್ಲಿರಲಿಲ್ಲ. ಮಗಳು ಶಾಲೆಗೆ ಹೋಗಿದ್ದರು. ಎರಡು ದಿನಗಳ ಕಾಲ ರಜೆಯಲ್ಲಿದ್ದ ಸುಭಾಷ್‌ ಕುಮಾರ್‌ ಬೆಹಾರಿ ಅವರು ಶುಕ್ರವಾರ ಕೆಲಸಕ್ಕೆ ಹಾಜರಾಗಬೇಕಿತ್ತು ಎಂದು ಅವರು ಮಾಹಿತಿ ನೀಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಟಕ್‌ನ ಎಸ್‌‍ಸಿಬಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶರ ಸಾವಿನ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಪ್ರಾಥಮಿಕವಾಗಿ ಆತ್ಮಹತ್ಯೆ ಆಗಿರಬಹುದು ಎಂದು ಶಂಕಿಸಲಾಗಿದೆ. ಅವರು ತಮ್ಮ ಕೆಲಸದಲ್ಲಿ ತೊಡಗಿಸಿಕೊಂಡಿದ್ದರಿಂದ  ಹೆಚ್ಚು ಮಾತನಾಡುತ್ತಿರಲಿಲ್ಲ. ಕುಟುಂಬಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳ ಬಗ್ಗೆ ತನಗೆ ತಿಳಿದಿಲ್ಲ ಎಂದು  ಮೃತ ನ್ಯಾಯಾಧೀಶರ ಸಹೋದರ ತಿಳಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *