ಆನ್ಲೈನ್ ಮೂಲಕ ಪೋಡಿ ದುರಸ್ತಿ: ಕೃಷ್ಣ ಬೈರೇಗೌಡ

ಬೆಂಗಳೂರು: ಆನ್ಲೈನ್ ಮೂಲಕ ಪೋಡಿ ದುರಸ್ತಿಯನ್ನು ಮಾಡಿಕೊಡಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಮೂಲಕ

ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಸರ್ವೆ ಇಲಾಖೆ ಮುಖ್ಯಸ್ಥರೊಂದಿಗೆ ಏಪ್ರಿಲ್‌ 25 ಶುಕ್ರವಾರದಂದು ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು ನಂತರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಪ್ರತಿ ತಿಂಗಳ 5 ಸಾವಿರ ಪೋಡಿ ದುರಸ್ತಿ ಮಾಡಿಕೊಡುವ ಗುರಿ ನಿಗದಿ ಮಾಡಲಾಗಿದ್ದು, ಆಂದೋಲನ ರೂಪದಲ್ಲಿ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಇದನೂ ಓದಿ: ಭಯೋತ್ಪಾದನೆಯನ್ನು ಎದುರಿಸುವಲ್ಲಿ ಸರಕಾರಕ್ಕೆ ಬೆಂಬಲ- ಆದರೆ ಅದರಲ್ಲಿ ಸಂಕುಚಿತತೆ ಇರಬಾರದು :ಸರ್ವ ಪಕ್ಷ ಸಭೆಯಲ್ಲಿ ಸಿಪಿಐ(ಎಂ) ಆಗ್ರಹ

ಸರಳೀಕೃತ ರೂಪದಲ್ಲಿ ಪೋಡೊ ದುರಸ್ತಿ ಮಾಡಿಕೊಡಲಿದ್ದು, ಇದರಿಂದ ರೈತರು ಕಚೇರಿಗಳಿಗೆ ವಿನಾಕಾರಣ ಅಲೆಯುವುದು ತಪ್ಪುತ್ತದೆ. ನಾವೇ ಮನೆಗಳಿಗೆ ಹೋಗಿ 1-5 ದಾಖಲೆಗಳನ್ನು ಸಿದ್ಧಪಡಿಸುತ್ತೇವೆ. ಇವುಗಳ ಪೈಕಿ 30,476 ಪ್ರಕರಣಗಳಲ್ಲಿ ಸರ್ವೆ ಇಲಾಖೆಯಿಂದ ಭೂಮಾಪನ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ತಹಶೀಲ್ದಾರ್ ಕಚೇರಿಗಳಲ್ಲಿರುವ ಎ ಮತ್ತು ಬಿ ದರ್ಜೆಯ ಕಡತಗಳನ್ನು ಭೂ ಸುರಕ್ಷಾ ಯೋಜನೆ ಅಡಿ ಗಣಕೀಕರಣ ಮಾಡಿ ಇಂಡೆಕ್ಸ್ ಕ್ಯಾಟಲಾಗ್ ಮಾಡಿ ಸ್ಕ್ಯಾನ್ ಮಾಡಲಾಗುತ್ತಿದೆ. ಇದುವರೆಗೆ 18.28 ಕೋಟಿ ಪುಟಗಳಷ್ಟು ಸ್ಕ್ಯಾನ್ ಮಾಡಲಾಗಿದ್ದು, ಇನ್ನು ಮುಂದೆ ಆನ್ಲೈನ್ ನಲ್ಲಿ ಅರ್ಜಿ ಹಾಕಿ ಪ್ರಮಾಣೀಕೃತ ದಾಖಲೆ ಪಡೆದುಕೊಳ್ಳಬಹುದು ಎಂದು ಹೇಳಿದ್ದಾರೆ.

ಇದನ್ನೂ ನೋಡಿ: ಪಹಲ್‍ಗಾಂಮ್ ಹತ್ಯಾಕಾಂಡ| ಭದ್ರತೆಯ ಲೋಪವನ್ನೂ ತನಿಖೆಗೆ ಒಳಪಡಿಸಲು ಸಿಪಿಐ(ಎಂ) ಆಗ್ರಹ Janashakthi Media

Donate Janashakthi Media

Leave a Reply

Your email address will not be published. Required fields are marked *