ಕವಿ ಜಿ ಎಸ್ ಸಿದ್ಧಲಿಂಗಯ್ಯ ನಿಧನ

Please follow and like us:

ಬೆಂಗಳೂರು: ಸಾಹಿತಿ, ಲೇಖಕ ಜಿ ಎಸ್ ಸಿದ್ದಲಿಂಗಯ್ಯ (94) ಅವರು ಅನಾರೋಗ್ಯದಿಂದ ಮಂಗಳವಾರ ರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಇದನ್ನೂ ಓದಿ:ಕಾರ್ಲ್‌ ಮಾರ್ಕ್ಸ್‌ ಹುಟ್ಟಿದ ದಿನ : ಮಾರ್ಕ್ಸ್‌ ಅವರ ಪ್ರಧಾನ ಕೊಡುಗೆಗಳು

ಸಿದ್ದಲಿಂಗಯ್ಯ ಅವರು ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ರಾತ್ರಿ ನಿಧನರಾಗಿದ್ದರು. ಚಾಮರಾಜಪೇಟೆಯ ಲಿಂಗಾಯತರ ರುದ್ರಭೂಮಿಯಲ್ಲಿ ಇಂದು ಬುಧವಾರ ಮಧ್ಯಾಹ್ನ 3 ನಂತರ ಮೃತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಇದನ್ನು ಓದಿ:ಕೆಪಿಎಸ್‌ಸಿ: 2023-24ನೇ ಸಾಲಿನ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದ್ದ ಗೊಂದಲದ ಬಗ್ಗೆ ಸ್ಪಷ್ಟನೆ

ಸಿದ್ದಲಿಂಗಯ್ಯ ಅವರು ಸಾಹಿತಿ, ಕವಿ ಹಾಗೂ ವಿಮರ್ಶಕರಾಗಿದ್ದ ಸಿದ್ದಲಿಂಗಯ್ಯನವರು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದರು. ಸಾಹಿತ್ಯ ಅಕಾಡೆಮಿಯ ವಿಶೇಷ ಗೌರವ, ರಾಜ್ಯೋತ್ಸವ ಪ್ರಶಸ್ತಿ,ಬಸವ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ ಸೇರಿ ಹಲವು ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ.

Please follow and like us:
Donate Janashakthi Media

Leave a Reply

Your email address will not be published. Required fields are marked *