ಬಾಗಲಕೋಟೆ: ವಿಷಕಾರಿ ಹಣ್ಣು (Poisonous Fruit) ಸೇವಿಸಿ ಐವರು ಮಕ್ಕಳು ಅಸ್ವಸ್ಥಗೊಂಡಿದ್ದು, ಜಮಖಂಡಿ ತಾಲ್ಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ತೇರದಾಳ ಪಟ್ಟಣದಲ್ಲಿರುವ ಮೆಟ್ರಿಕ್ ಪೂರ್ವ ವಸತಿ ನಿಲಯದ 8ನೇ ತರಗತಿ ವಿದ್ಯಾರ್ಥಿಗಳಾದ ಆಕಾಶ ಮಾದರ, ಮಲ್ಲು ಮಾದರ, ಮಹಾಂತೇಶ ಮಾದರ, ಮುತ್ತು ಮಾದರ ಹಾಗೂ ಅಪ್ಪಾಜಿ ಮಾದರ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇದನ್ನೂ ಓದಿ:ಉಪಹಾರದಲ್ಲಿ ಹಾವಿನ ಮರಿ! 50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
ಈ ಐವರು ಆಟಕ್ಕೆಂದು ಸಮೀಪದ ಹಳಿಂಗಳಿ ಬೆಟ್ಟಕ್ಕೆ ತೆರಳಿದ್ದಾರೆ. ಈ ವೇಳೆ ಗಿಡದಲ್ಲಿದ್ದ ಹಣ್ಣುಗಳನ್ನು ಕಂಡು ಬಾದಾಮಿ ಹಣ್ಣು ಇರಬಹುದೆಂದು ಸೇವಿಸಿದ್ದಾರೆ. ಆದರೆ ಆಟ ಮುಗಿಸಿ ವಾಪಸ್ ವಸತಿ ನಿಲಯಕ್ಕೆ ಬಂದಾಗ ಎಲ್ಲರಿಗೂ ಆರೋಗ್ಯದಲ್ಲಿ ಏರುಪೇರಾಗಿದೆ.
ಅಸ್ವಸ್ಥಗೊಂಡು ಒದ್ದಾಡುತ್ತಿದ್ದ ಮಕ್ಕಳನ್ನು ಕೂಡಲೇ ರಬಕವಿ ಬನಹಟ್ಟಿ ಸಮುದಾಯ ಆಸ್ಪತ್ರೆಗೆ ಸೇರಿ ಪ್ರಾಥಮಿಕ ಚಿಕಿತ್ಸೆಯನ್ನು ಕೊಡಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಜಮಖಂಡಿ ತಾಲೂಕು ಆಸ್ಪತೆಗೆ ದಾಖಲು ಮಾಡಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ತೆರಳಿದ ವಾರ್ಡನ್ ವಸಂತ ಹಿರೇಮಠ ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿದ್ದಾರೆ.
ವಿಡಿಯೋ ನೋಡಿ:ನಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸಿಸಿಡಿದೆದ್ದ ಗ್ರಾಮ ಪಂಚಾಯಿತಿ ನೌಕರರು Janashakthi Media