ಬೆಂಗಳೂರು: ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿ ಶಿಕ್ಷೆಗೆ ಒಳಗಾದ ಅಪರಾಧಿಗಳಿಗೆ ನಿಗದಿಯಾದ ಶಿಕ್ಷೆಯ ಪ್ರಮಾಣವನ್ನು ಕಡಿಮೆ ಮಾಡುವ ಅಧಿಕಾರ ನ್ಯಾಯಾಲಯಕ್ಕೆ ಇಲ್ಲವೆಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ.
ಪೋಕ್ಸೋ ಕಾಯಿದೆಯಡಿ ಅಧೀನ ನ್ಯಾಯಾಲಯಗಳಿಗೆ ಲಭ್ಯವಿರುವ ಅಧಿಕಾರವನ್ನು ವಿಶ್ಲೇಷಿಸಿರುವ ಹೈಕೋರ್ಟ್ ನ್ಯಾಯಮೂರ್ತಿ ವಿ. ಶ್ರೀಷಾನಂದ ಅವರ ಪೀಠ, ಎಂತಹುದೇ ಪ್ರಕರಣದಲ್ಲೂ ಶಿಕ್ಷೆಯನ್ನು ಕಡಿಮೆ ಮಾಡಲು ಅವಕಾಶವಿಲ್ಲ. ಸರ್ಕಾರದ ಮೇಲ್ಮನವಿಯನ್ನು ಮಾನ್ಯ ಮಾಡಿ ಆದೇಶ ನೀಡಿದ್ದಾರೆ.
ಆರೋಪಿಯಾಗಿರುವ ಶೇಖ್ ರೌಫ್ ಅನ್ನು ದೋಷಿಯಾಗಿ ತೀರ್ಮಾನಿಸಿ ಪೋಕ್ಸೋ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದಿರುವ ಹೈಕೋರ್ಟ್ ನ್ಯಾಯಪೀಠ, ಆತನಿಗೆ ವಿಧಿಸಲಾಗಿದ್ದ ಐದು ವರ್ಷ ಜೈಲು ಶಿಕ್ಷೆಯನ್ನು ಏಳು ವರ್ಷಕ್ಕೆ ಹೆಚ್ಚಿಸಿದೆ.
ಪೋಕ್ಸೋ ಕಾಯ್ದೆಯ ಪ್ರಕಾರ ಅಪ್ರಾಪ್ತೆ ಮೇಲಿನ ಲೈಂಗಿಕ ದೌರ್ಜನ್ಯ ನಡೆಸಿದ ಅಪಾರಾಧಿಗೆ ಕನಿಷ್ಠ 7 ವರ್ಷ ಜೈಲು ಶಿಕ್ಷೆ ನಿಗದಿಯಾಗಿದೆ. ಆದರೆ, ಈ ಅಂಶಗಳನ್ನು ನಿರ್ಲಕ್ಷಿಸಿರುವ ವಿಶೇಷ ನ್ಯಾಯಾಲಯ ಆರೋಪಿಗೆ 5 ವರ್ಷ ಜೈಲು ಶಿಕ್ಷೆಯಷ್ಟೇ ವಿಧಿಸಿದೆ. ಈ ಆದೇಶದಲ್ಲಿ ಹೈಕೋರ್ಟ್ ಮಧ್ಯಪ್ರವೇಶಿಸುವ ಅಗತ್ಯವೆಂದು ಆದೇಶಿಸಲಾಗಿದೆ.
ಶಿಕ್ಷೆ ಪ್ರಮಾಣವನ್ನು ಕಡಿಮೆ ಮಾಡಲು ವಿಶೇಷ ನ್ಯಾಯಾಲಯಕ್ಕೆ ಯಾವುದೇ ವಿವೇಚನಾತ್ಮಕ ಅಧಿಕಾರ ಇಲ್ಲ ವಾದಿಸಲಾಗಿದೆ.