ಎಂಇಎಸ್ ಧೋರಣೆ ಖಂಡಿಸಿ ಪ್ರತಿಭಟನೆ; ಕರವೇ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೋಲೀಸರು

ಬೆಳಗಾವಿ: ಎಂಇಎಸ್ ಧೋರಣೆ ಖಂಡಿಸಿ, ಇಲ್ಲಿನ ವ್ಯಾಕ್ಸಿನ್ ಡಿಪೊ ಮೈದಾನದತ್ತ ತೆರಳುತ್ತಿದ್ದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಧರ್ಮವೀರ ಸಂಭಾಜಿ ವೃತ್ತದಲ್ಲಿ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಡಿಸೆಂಬರ್‌ 6ರಂದು ನಡೆದಿದೆ.

ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ ಸೇರಿ ಹಲವರನ್ನು ವಶಕ್ಕೆ ಪಡೆಯಲಾಗಿದ್ದೂ, ಮತ್ತೊಂದೆಡೆ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ಜಿಲ್ಲಾ ಘಟಕದ ಅಧ್ಯಕ್ಷ ವಾಜೀದ್ ಹಿರೇಕೋಡಿ ಅವರನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ʼಗುಮ್ಮಡಿ ನರಸಯ್ಯʼ ಸಿನಿಮಾ ಪೋಸ್ಟರ್ ಬಿಡುಗಡೆ; ಮಾಜಿ ಶಾಸಕರ ನಿವಾಸಕ್ಕೆ ನಟ ಶಿವರಾಜ್ ಕುಮಾರ್ ಭೇಟಿ

ನಗರದಲ್ಲಿ ಏಕಕಾಲಕ್ಕೆ ಕನ್ನಡ ಸಂಘಟನೆಯವರು ಮತ್ತು ಎಂಇಎಸ್ ನವರು ಬೇರೆ ಬೇರೆ ಸ್ಥಳಗಳಲ್ಲಿ ಪ್ರತಿಭಟಿಸುತ್ತಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ಇದನ್ನೂ ನೋಡಿ: ಗಲ್ಫ್ ರಾಷ್ಟ್ರಗಳಲ್ಲಿ ದುಡಿಯುವ ಪ್ರವಾಸಿಗರಿಗೆ ಕಲ್ಯಾಣ ಮಂಡಳಿ ಸ್ಥಾಪಿಸಿ -ಮುನೀರ್ ಕಾಟಿಪಳ್ಳ Janashakthi Media

Donate Janashakthi Media

Leave a Reply

Your email address will not be published. Required fields are marked *