ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್: ಶಿವಮೊಗ್ಗದಲ್ಲಿ ಘಟನೆ

Please follow and like us:
ಶಿವಮೊಗ್ಗ : ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ರೌಡಿಶೀಟರ್ ಹಬೀಬ್ ವುಲ್ಲಾ ಅಲಿಯಾಸ್ ಅಮ್ಮು ಅವರನ್ನು ಬಂಧಿಸುವ ವೇಳೆ ಪೊಲೀಸ್ ತಮ್ಮ ರಕ್ಷಣೆಗಾಗಿ ಹಬೀಬ್ ವುಲ್ಲಾ ಕಾಲಿಗೆ ಗುಂಡು ಹಾರಿಸಿದ್ದಾರೆ.

ಇದನ್ನು ಓದಿ : ಸರ್ಕಾರ ಜಾತಿಗಣತಿ ಜಾರಿ ಮಾಡಲೇಬೇಕು: ಸದಸ್ಯ ಬಿ.ಕೆ.ಹರಿಪ್ರಸಾದ್ ಒತ್ತಾಯ

ಬೈಪಾಸ್ ರಸ್ತೆ ಸಮೀಪದ ಗರುಡ ಲೇಔಟ್‌ನಲ್ಲಿ ಇಂದು ಬೆಳಗ್ಗೆ ಹಬೀಬುಲ್ಲಾನ ಬಂಧನಕ್ಕೆ ಪೊಲೀಸರು ತೆರಳಿದ್ದರು. ಈ ಸಂದರ್ಭ ಹಬೀಬುಲ್ಲಾ ಪೊಲೀಸ್ ಸಿಬ್ಬಂದಿ ಜಯಪ್ಪ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾನೆ. ಆಗ ಇನ್ಸ್‌ಪೆಕ್ಟರ್ ಕೆ.ಟಿ.ಗುರುರಾಜ್ ಅವರು ಆತ್ಮರಕ್ಷಣೆಗೆ ಗುಂಡು ಹಾರಿಸಿದ್ದಾರೆ ಎಂದು ತಿಳಿದು ಬಂದಿದೆ.

ಶಿವಮೊಗ್ಗದ ತುಂಗಾನಗರ ಠಾಣೆಯ ಪೊಲೀಸ್ ಫೈರಿಂಗ್ ಮಾಡಿದ್ದಾರೆ. ಗಾಯಗೊಂಡಿರುವ ಪೊಲೀಸ್ ಸಿಬ್ಬಂದಿ ಜಯಪ್ಪ ಅವರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನು ನೋಡಿ : ಜಾತಿಗಣತಿ ಜಾರಿಗೆ ಸಿಎಂ ಸಿದ್ದರಾಮಯ್ಯ ಮೀನಮೇಷ ಎಣಿಸುತ್ತಿದ್ದಾರೆ : Janashakthi Media

Please follow and like us:
Donate Janashakthi Media

Leave a Reply

Your email address will not be published. Required fields are marked *