ಚಿಕ್ಕಮಗಳೂರು : ಆಟೋ ಚಾಲಕ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ಕಳಸ ತಾಲೂಕಿನ ಬಸ್ತಿಗದ್ದೆ ಗ್ರಾಮದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕುದುರೆಮುಖ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಮಗಳೂರು
ಇದನ್ನೂ ಓದಿ: ಪಾಟ್ನಾ| ಮತದಾರರ ಪಟ್ಟಿಯಿಂದ ತೆಗೆದುಹಾಕಿದ್ದ 65 ಲಕ್ಷ ಜನರ ಹೆಸರು ಬಹಿರಂಗ
ಆಟೋ ಚಾಲಕ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಂತೆ, ಆರೋಪಿ ಗೋವಾಕ್ಕೆ ತೆರಳಿದ್ದ. ಪೊಲೀಸರು ಪತ್ತೆ ಹಚ್ಚಿ ಆತನನ್ನು ಬಂಧಿಸಿದ್ದಾರೆ. ಆರೋಪಿ ಪೇದೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಂಧಿತ ಆರೋಪಿಯನ್ನು ಸಿದ್ದೇಶ್ ಎಂದು ಗುರುತಿಸಲಾಗಿದೆ. ಆ.13ರಂದು ಆಟೋ ಚಾಲಕ ನಾಗೇಶ್ (32) ಡೆತ್ನೋಟ್ ಬರೆದಿಟ್ಟು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್ನೋಟ್ನಲ್ಲಿ ಪೊಲೀಸರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದರು
ನಾಗೇಶ್ ಸಾವಿನ ನಂತರ ದಲಿತ ಹಾಗೂ ಪ್ರಗತಿಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದ್ದವು. ಈ ನಡುವೆ ಚಿಕ್ಕಮಗಳೂರು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಯಕುಮಾರ್ ಮೃತರ ಕುಟುಂಬವನ್ನು ಮನವೊಲಿಸಲು ಪ್ರಯತ್ನಿಸಿದರೂ, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವವರೆಗೂ ಮರಣೋತ್ತರ ಪರೀಕ್ಷೆ ಮಾಡಲು ಬಿಡುವುದಿಲ್ಲ ಎಂದು ಕುಟುಂಬಸ್ಥರು ಹಠ ಹಿಡಿದು ಕುಳಿತಿದ್ದರು. ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಮೃತ ನಾಗೇಶ್ ಕುಟುಂಬಸ್ಥರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ನ್ಯಾಯ ದೊರಕಿಸುವ ಭರವಸೆ ನೀಡಿದ್ದರು.
ಇದನ್ನೂ ನೋಡಿ: ಸಮುದಾಯ 50 | ಆಗಸ್ಟ್ 24 ರಿಂದ 27 ; ಕಲಾ ಶಿಬಿರ – ನಾಟಕೋತ್ಸವ Janashakthi Media
