ದೆಹಲಿಯಲ್ಲಿ ಕೇಂದ್ರ ಸಶಸ್ತ್ರ ಪಡೆಗಳ ನಿಯೋಜನೆ ಅಕ್ಟೋಬರ್ 20ರವರೆಗೆ ವಿಸ್ತರಿಸಲು ಪೊಲೀಸರ ಮನವಿ

ನವದೆಹಲಿ: ದೆಹಲಿಯಲ್ಲಿ ಎಸ್‌ಐಆರ್‌ ವಿರುದ್ಧದ ಪ್ರತಿಭಟನೆಗಳು ಮುಂದುವರಿದಿರುವ ಹಿನ್ನೆಲೆಯಲ್ಲಿ, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ನಿಯೋಜನೆಯನ್ನು ಅಕ್ಟೋಬರ್ 20ರವರೆಗೆ ವಿಸ್ತರಿಸುವಂತೆ ದೆಹಲಿ ಪೊಲೀಸರು ಕೇಂದ್ರ ಗೃಹ ಸಚಿವಾಲಯಕ್ಕೆ ಮನವಿ ಮಾಡಿದ್ದಾರೆ. ದೆಹಲಿ

ಪ್ರತಿಭಟನೆಗಳು ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ ಎಂಬ ಗುಪ್ತಚರ ಇಲಾಖೆಯ ಮಾಹಿತಿ ಆಧರಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯುವುದು ನಿಯೋಜನೆ ವಿಸ್ತರಣೆಯ ಉದ್ದೇಶ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಸ್ತುತ ದೆಹಲಿಯಲ್ಲಿ ನಿಯೋಜಿಸಲಾಗಿರುವ 273 ಕಂಪನಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಅವಧಿ ಸೋಮವಾರಕ್ಕೆ ಮುಕ್ತಾಯಗೊಂಡಿದೆ. ಈ ಪಡೆಗಳ ನಿಯೋಜನೆಯನ್ನು ವಿಸ್ತರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಜಂತರ್‌ ಮಂತರ್‌, ಚುನಾವಣಾ ಆಯೋಗದ ಕಚೇರಿ, ಸಂಸತ್ ಭವನ ಮತ್ತು ಇಂಡಿಯಾ ಗೇಟ್ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಪ್ರತಿಭಟನೆಗಳು ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಪೊಲೀಸರು ಆತಂಕ ವ್ಯಕ್ತಪಡಿಸಿದ್ದಾರೆ.

ಅಕ್ಟೋಬರ್ 6ರಂದು 221 ಕಂಪನಿಗಳ ನಿಯೋಜನೆಗೆ ಅನುಮತಿ ನೀಡಲಾಗಿತ್ತು. ಅಕ್ಟೋಬರ್ 8ರಂದು ಹೆಚ್ಚುವರಿಯಾಗಿ 80 ಕಂಪನಿಗಳ ನಿಯೋಜನೆಗೆ ಅನುಮೋದನೆ ದೊರೆತಿತ್ತು. ಹೀಗೆ ಒಟ್ಟು 301 ಕಂಪನಿಗಳ ನಿಯೋಜನೆಗೆ ಅನುಮತಿ ನೀಡಲಾಗಿದ್ದರೂ, ಹೆಚ್ಚುವರಿಯಾಗಿ ಅನುಮೋದನೆ ಪಡೆದಿದ್ದ 80 ಕಂಪನಿಗಳ ಪೈಕಿ 28 ಕಂಪನಿಗಳು ಸೋಮವಾರದವರೆಗೆ ದೆಹಲಿಗೆ ತಲುಪಿರಲಿಲ್ಲ. ದೆಹಲಿ

ಮಹಿಳಾ ಪತ್ರಕರ್ತರ ಮೇಲಿನ ದೌರ್ಜನ್ಯ ಪ್ರಕರಣ ನಾಳೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

ದೆಹಲಿ ಪ್ರತಿಭಟನೆಗಳ ಸಂದರ್ಭದಲ್ಲಿ ಪೊಲೀಸರಿಂದ ನ್ಯಾಯಾಲಯದ ಆದೇಶಗಳ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಪತ್ರಕರ್ತರು ಸಲ್ಲಿಸಿರುವ ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬಂದಿವೆ. ಅರ್ಜಿಗಳಲ್ಲಿನ ಅಂಶಗಳನ್ನು ಪರಿಶೀಲಿಸಿದ ಬಳಿಕ ವಿಚಾರಣೆ ನಡೆಸುವುದಾಗಿ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ತಿಳಿಸಿದ್ದಾರೆ.

ಪ್ರತಿಭಟನೆಯ ವರದಿಗಾರಿಕೆಯಲ್ಲಿ ತೊಡಗಿದ್ದ ಮಹಿಳಾ ಪತ್ರಕರ್ತರ ಮೇಲೆ ಪೊಲೀಸರು ಹಲ್ಲೆ ನಡೆಸಿದ ಆರೋಪದ ಕುರಿತು ವಿವರಣೆ ನೀಡಲು ದೆಹಲಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ವಿಚಾರಣೆಗೆ ಹಾಜರಾಗಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ.

ಅಕ್ಟೋಬರ್ 9ರಂದು ನ್ಯಾಯಾಲಯ ನೀಡಿದ್ದ ಆದೇಶಗಳ ಅನುಷ್ಠಾನದ ಕುರಿತು ವರದಿ ಸಲ್ಲಿಸುವಂತೆ ಹಾಗೂ ನ್ಯಾಯಾಲಯದ ಆದೇಶ ಉಲ್ಲಂಘನೆ ಆರೋಪಗಳಿಗೆ ಉತ್ತರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಲಾಗಿದೆ. ಈ ಸಂಬಂಧ ಉತ್ತರ ಸಲ್ಲಿಸಲು ಅಕ್ಟೋಬರ್ 15ರವರೆಗೆ ಕಾಲಾವಕಾಶ ನೀಡಲಾಗಿದೆ.

ವಕೀಲರ ಮೇಲೆಯೂ ಹಲ್ಲೆ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮತ್ತೊಂದು ಅರ್ಜಿ ಸಲ್ಲಿಕೆಯಾಗಿದೆ. ಅರ್ಜಿಗಳಲ್ಲಿನ ಲೋಪಗಳನ್ನು ಸರಿಪಡಿಸಿದ ಬಳಿಕ ಎಲ್ಲ ಅರ್ಜಿಗಳನ್ನು ವಿಚಾರಣೆಗೆ ಪಟ್ಟಿ ಮಾಡುವುದಾಗಿ ನ್ಯಾಯಾಲಯ ತಿಳಿಸಿದೆ. ಅಕ್ಟೋಬರ್ 15ರಂದು ಬೆಳಿಗ್ಗೆ 11ರಿಂದ 11.30ರ ನಡುವೆ ವಿಚಾರಣೆ ನಡೆಯುವ ಸಾಧ್ಯತೆಯಿದೆ. ದೆಹಲಿ

ಇದನ್ನೂ ನೋಡಿ : SIR ಅಕ್ರಮ: ಕುಂಬಳಕಾಯಿ ಕಳ್ಳ ಅಂದ್ರೆ ಬಿಜೆಪಿ ಹೆಗಲು ಮುಟ್ಕೊಳೋದ್ಯಾಕೆ? Janashakthi Media

Donate Janashakthi Media

Leave a Reply

Your email address will not be published. Required fields are marked *