ಗದಗ| ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣ: ಅಪರಾಧಿಗಳಿಗೆ ಶಿಕ್ಷೆ ಪ್ರಕಟಣೆ

ಗದಗ: ನಗರದ ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳಿಗೆ ಶಿಕ್ಷೆ ಪ್ರಕಟಗೊಂಡಿದ್ದೂ, ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷ ಕಠಿಣ ಶಿಕ್ಷೆ ಹಾಗೂ 36.87 ಲಕ್ಷ ರೂಪಾಯಿ ದಂಡವನ್ನು ವಿಧಿಸಿದೆ. ಗದಗ

ದಂಡದ ಮೊತ್ತದಲ್ಲಿ ಪೊಲೀಸ್ ಠಾಣೆ ಹಾನಿ ಪರಿಹಾರವಾಗಿ 12.72 ಲಕ್ಷ ರೂಪಾಯಿ ನೀಡಲು ನ್ಯಾಯಾಲಯ ಸೂಚನೆ ನೀಡಿದೆ. ದೊಂಬಿ ಪ್ರಕರಣವೊಂದರಲ್ಲಿ ಇದೇ ಮೊದಲ ಬಾರಿಗೆ ಭಾರೀ ಪ್ರಮಾಣದ ದಂಡ ವಸೂಲಿ ಮಾಡಲು ನ್ಯಾಯಾಲಯ ಆದೇಶಿಸಿದೆ.

ಇದನ್ನೂ ಓದಿ: ಹಣ ಪತ್ತೆ ಪ್ರಕರಣ: ದೆಹಲಿ ಹೈಕೋರ್ಟ್ ನ್ಯಾ. ಯಶವಂತ್ ವರ್ಮಾ ಕರ್ತವ್ಯ  ನಿರ್ವಹಿಸದಂತೆ ಆದೇಶ

ವರ್ಷಗಳ ಹಿಂದೆ ಅಂದರೆ 2017 ಫೆಬ್ರವರಿ 5 ರಂದು ಅಕ್ರಮ ಮರಳು ಸಾಗಿಸುವ ವಾಹನವನ್ನು ಪೊಲೀಸರು ತಡೆದಿದ್ದರು. ಈ ವಾಹನ ಚಲಾಯಿಸುತ್ತಿದ್ದ ಲಕ್ಷ್ಮೇಶ್ವರ ತಾಲೂಕಿನ ಬಟ್ಟೂರು ಗ್ರಾಮದ ನಿವಾಸಿ ಶಿವಪ್ಪ ಡೋಣಿ ಎಂಬುವರಿಗೆ ಪೊಲೀಸರು ಹಿಗ್ಗಾ ಮುಗ್ಗಾ ಥಳಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ನಂತರ, ಶಿವಪ್ಪ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸದೆ ಶಿವಪ್ಪ ಮೃತಪಟ್ಟಿದ್ದರು.

ಇದರಿಂದ ಆಕ್ರೋಶಗೊಂಡಿದ್ದ ಶಿವಪ್ಪ ಅವರ ಪೋಷಕರು ಮತ್ತು ಗ್ರಾಮಸ್ಥರು ಮೃತದೇಹವನ್ನು ಪೊಲೀಸ್ ಠಾಣೆ ಮುಂದಿಟ್ಟು ಪ್ರತಿಭಟನೆ ನಡೆಸಿದ್ದರು. ನೋಡ ನೋಡುತ್ತಿದ್ದಂತೆ ಶಾಂತಯುತವಾಗಿ ನಡೆದಿದ್ದ ಪ್ರತಿಭಟನೆ, ವಿಕೋಪಕ್ಕೆ ತಿರುಗಿತ್ತು. ಪ್ರತಿಭಟನಾಕಾರರು ಪೊಲೀಸ್ ಠಾಣೆಯೊಳಗೆ ನುಗ್ಗಿ, ಕಚೇರಿಯಲ್ಲಿದ್ದ ಕಡತಗಳು, ದಾಖಲೆಗಳು, ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದರು.

ಇದನ್ನೂ ನೋಡಿ: ವಚನಾನುಭವ – 23 ಅನ್ನವ ನೀಡುವವರಿಂಗೆ ಧಾನ್ಯವೇ ಶಿವಲೋಕ | ಅಕ್ಕಮಹಾದೇವಿ ವಚನ Janashakthi Media

Donate Janashakthi Media

Leave a Reply

Your email address will not be published. Required fields are marked *