ಬೆಂಗಳೂರು| ಮದ್ಯ ಸೇವಿಸುವವರನ್ನು ಪೊಲೀಸ್ ವಾಹನದಲ್ಲಿ ಮನೆಗೆ – ವ್ಯವಸ್ಥೆಗೆ ಆಕ್ಷೇಪ

ಬೆಂಗಳೂರು :  ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು  ಹೊಸ ವರ್ಷಾಚರಣೆ ವೇಳೆಯಲ್ಲಿ (ಡಿ.31 ರ ರಾತ್ರಿ) ಮದ್ಯ ಸೇವಿಸುವವರನ್ನು ಪೊಲೀಸ್ ವಾಹನದಲ್ಲಿ ಅವರ ಮನೆಗೆ ತಲುಪಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ.

ಇದನ್ನೂ ಓದಿ : ‘ಜಿ ರಾಮ್‍ ಜಿ’: ಗ್ರಾಮೀಣ ಜೀವನ ಸೇತು ಮತ್ತು ಸಂವಿಧಾನದ ನಿರ್ದೇಶಕ ತತ್ವಗಳಿಗೆ ಕೊಡಲಿಯೇಟು – ಬೃಂದಾ ಕಾರಟ್

ಭಾನುವಾರ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕೈಗೊಂಡಿರುವ ಭದ್ರತೆಯ ಕುರಿತು ಗೃಹ ಸಚಿವರು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಅತಿಯಾಗಿ ಮದ್ಯ ಸೇವಿಸಿರುವವರನ್ನು ಮನೆಗೆ ತಲುಪಿಸಲು ಖಾಸಗಿ ವಾಹನದ ವ್ಯವಸ್ಥೆ ಮಾಡಲಾಗಿದೆ. ಕೆಲವು ಕಡೆ ಟ್ಯಾಕ್ಸಿಗಳು ಸಿಗುವುದಿಲ್ಲ. ಅಂತವರು ಸುರಕ್ಷಿತವಾಗಿ ಮನೆಗಳಿಗೆ ಹೋಗಲು 8 ಕಡೆ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ತೆಗೆ ಅವರನ್ನು ಪೊಲೀಸ್ ವಾಹನದಲ್ಲಿಯೇ ಅವರನ್ನು ಮನೆಗೆ ಕರೆದೊಯ್ದು ಬಿಡಲಾಗುವುದು ಎಂದು ಹೇಳಿದ್ದರು. ಈ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಗೃಹ ಸಚಿರವ ಹೇಳಿಕೆಗೆ ನೆಟ್ಟಿಗರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ನೋಡಿ : ಕುವೆಂಪು ಜನ್ಮ ದಿನ | ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ – ಓದು : ಎಚ್.ವಿ. ನಟರಾಜ Janashakthi Media

Donate Janashakthi Media

Leave a Reply

Your email address will not be published. Required fields are marked *