ಕೊಡಿಹಳ್ಳಿ ಚಂದ್ರಶೇಖರ್‌ ಪೊಲೀಸರ ವಶಕ್ಕೆ

ಬೆಳಗಾವಿ:  ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿರುವ ಸಾರಿಗೆ ನೌಕರರ ಮುಷ್ಕರ ತೀವ್ರತರ ಸ್ವರೂಪ ಪಡೆದುಕೊಂಡಿದ್ದು, ಮುಷ್ಕರಕ್ಕೆ ಕರೆ ನೀಡಿದ್ದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬೆಳಗಾವಿಯ ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿಯ ಸುವರ್ಣಸೌಧ ಬಳಿ ಇರುವ ಸುವರ್ಣ ಗಾರ್ಡನ್‌ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಸಭೆಯನ್ನು ನಡೆಸಲು ಉಪಸ್ಥಿತರಿದ್ದರು.​ ಸಭೆಗೂ ಮುನ್ನವೇ ಹೋಟಲ್‌ ನಲ್ಲಿ ತಂಗಿದ್ದ ಕೋಡಿಹಳ್ಳಿ ಚಂದ್ರಶೇಖರನ್ನು ಪೊಲೀಸರು ವಶಕ್ಕೆ ಪಡೆದು ಬೆಳಗಾವಿಯ ಹಿರೇಬಾಗೇವಾಡಿ ಠಾಣೆಗೆ ಕರೆದುಕೊಂಡು ಹೋದರು.

ಇದನ್ನು ಓದಿ :ಮುಷ್ಕರ ನಿಷೇಧಕ್ಕೆ ಬಗ್ಗದ ಸಾರಿಗೆ ನೌಕರರು : ನಾಲ್ಕನೇ ದಿನಕ್ಕೆ ಕಾಲಿಟ್ಟ ಸಾರಿಗೆ ಮುಷ್ಕರ

ಪೊಲೀಸರು ಬಂಧಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಕೋಡಿಹಳ್ಳಿ ಚಂದ್ರಶೇಖರ್ ಸರ್ಕಾರ ನೌಕರರ ಹೋರಾಟವನ್ನು ಸರ್ಕಾರ ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಆಕ್ರೋಶವ್ಯಕ್ತಪಡಿಸಿದರು.

ಪೊಲೀಸರು ಕರೆದೊಯ್ಯುವ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮುಂಜಾಗ್ರತಾ ಕ್ರಮವಿದು ಎನ್ನುತ್ತಿದ್ದಾರೆ, ಆದರೆ ಸರಿಯಾದ ಕಾರಣವನ್ನು ನೀಡುತ್ತಿಲ್ಲ. ಚಳವಳಿಯನ್ನು ಹತ್ತಿಕ್ಕುವ ಕ್ರಮವಾಗಿದೆ. ಧಮನದ ನೀತಿಯಾಗಿದೆ ಎಂದು ಆರೋಪಿಸಿದರು.

ಎಲ್ಲರಿಗೂ ವಾಕ್ ಸ್ವಾತಂತ್ರ್ಯ ಮತ್ತು ಚಳವಳಿ ನಡೆಸುವ ಸ್ವಾತಂತ್ರ್ಯ ಇರಬೇಕು. ಸರ್ಕಾರ ತಪ್ಪು ನಿರ್ಧಾರ ತೆಗೆದುಕೊಂಡಿದೆ. ಆಗಲಿ, ಇದನ್ನ ನಾವು ಸ್ವಾಗತ ಮಾಡುತ್ತೇವೆ’ ಎಂದು ಹೇಳಿದರು.

Donate Janashakthi Media

One thought on “ಕೊಡಿಹಳ್ಳಿ ಚಂದ್ರಶೇಖರ್‌ ಪೊಲೀಸರ ವಶಕ್ಕೆ

  1. Though employees have a right to fight for their rights in a peaceful way Mr. Kodihalli Chandrashekhar has no concern to create illegal and unlawful situations and to fish in troubled water. Rs. 12,500/- is too meagre s salary to drivers and conductors who must be paid decent salaries.

Leave a Reply

Your email address will not be published. Required fields are marked *