ಚನ್ನಗಿರಿ: ತಮ್ಮ ಮಕ್ಕಳನ್ನು ರಾಜಕಾರಣಿಗಳು ದೃಷ್ಟಿಕೋನ ಬದಲಾಯಿಸಿ, ಸರಕಾರಿ ಶಾಲೆಗಳಿಗೆ ಸೇರಿಸಿದರೆ ಮಾತ್ರ ಸರಕಾರಿ ಶಾಲೆಗಳು ಉಳಿಯಲು ಸಾಧ್ಯ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಕನ್ನಡ ಶಾಲೆಗಳನ್ನು ಉಳಿಸುತ್ತೇವೆ ಎಂದು ಬಾಯಿಮಾತಿನಲ್ಲಿ ಹೇಳಿದರೆ ಸಾಲದು, ಕಾರ್ಯರೂಪಕ್ಕೂ ತರಬೇಕು. ರಾಜಕಾರಣಿಗಳು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಾರೆ ಎಂದರು.
ಇದನ್ನೂ ಓದಿ: ಕಾನೂನು, ನ್ಯಾಯ ಮತ್ತು ಸಾರ್ವಜನಿಕ ಪ್ರಜ್ಞೆ
ಯಾವುದೇ ಶಾಲೆಗಳಲ್ಲಿ ಮಕ್ಕಳನ್ನು ಕಸಗುಡಿಸುವ ಕಾರ್ಯಕ್ಕೆ ತೊಡಗಿಸಿದರೆ ಕಠಿನ ಕ್ರಮ ಜರಗಿಸಲಾಗುವುದು. ಶಾಲಾ ಕೊಠಡಿ ಹಾಗೂ ಶೌಚಾಲಯಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು. ಮುಂದಿನ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದಲ್ಲಿ 13,500 ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದರು.
ಇದನ್ನೂ ನೋಡಿ: ಇಂಗ್ಲೀಷ್ ಕಲಿಯೋಣ ಬನ್ನಿ | Have – Had – Has ಬಳಸುವುದು ಹೇಗೆ? | ತೇಜಸ್ವಿನಿ Janashakthi Media