ಮೋದಿ ಸರ್ಕಾರದಿಂದ ರಾಜ್ಯಕ್ಕೆ ಅಕ್ಕಿ ನಿರಾಕರಣೆ ರಾಜಕೀಯ: ಸಿಪಿಐ(ಎಂ) ಪ್ರತಿಭಟನೆ

ಬೆಂಗಳೂರು: ಒಕ್ಕೂಟ ಸರಕಾರ ರಾಜ್ಯ ಹಿತದ ವಿರುದ್ಧ ನಗ್ನವಾಗಿ ನಿಂತಿದ್ದು, ರಾಜ್ಯದ ಬಹುತೇಕ ಸಂಸದರು ಬಿಜೆಪಿಯವರಾಗಿದ್ದರೂ ಅವರೆಲ್ಲರೂ ಬಾಯಿ ಹೊಲೆದುಕೊಂಡಿರುವುದು ಅವರ ಜನವಿರೋದಿ ನೀತಿಯನ್ನು ಬಯಲುಗೊಳಿಸುತ್ತದೆ ಎಂದು ಸಿಪಿಐ(ಎಂ) ಬೆಂಗಳೂರು ಉತ್ತರ ಜಿಲ್ಲಾ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.

ಕರ್ನಾಟಕ ರಾಜ್ಯಕ್ಕೆ ಅಗತ್ಯವಿರುವ ಅಕ್ಕಿ ನೀಡಲು ನಿರಾಕರಿಸುತ್ತಿರುವ ಬಿಜೆಪಿಯ ಮೋದಿ ನೇತೃತ್ವದ ಸರ್ಕಾರ ನಿರಾಕರಿಸುತ್ತಿರುವ ಹಿನ್ನಲೆ ಗುರುವಾರ ನಗರದ ಫ್ರೀಡಂ ಪಾರ್ಕ್ ನಲ್ಲಿ ಸಿಪಿಐಎಂ ಕಾರ್ಯಕರ್ತರು, ಮುಖಂಡರು ಪ್ರತಿಭಟನೆ ನಡೆಸಿದರು.

ಕರ್ನಾಟಕ ಸರಕಾರ ಜೂಲೈ ಒಂದರಿಂದ ಎಲ್ಲ ಬಿಪಿಎಲ್‌, ಅಂತ್ಯೋದಯ ಕಾರ್ಡದಾರರಿಗೆ ಈಗ ನೀಡಲಾಗುತ್ತಿದ್ದ ಐದು ಕೇಜಿ ಅಕ್ಕಿಯನ್ನು ತಲಾ 10 ಕೇಜಿಗೆ ಹೆಚ್ಚಿಸಿ ಅಕ್ಕಿ ಅಥವಾ ಆಹಾರಧಾನ್ಯ ನೀಡಲು ನಿರ್ಧರಿಸಿತ್ತು. ರಾಜ್ಯ ಸರ್ಕಾರದ ಈ ನಿರ್ಧಾರವನ್ನು ಸಿಪಿಐ(ಎಂ) ಸ್ವಾಗತಿಸಿದ್ದು,”ಬಿಜೆಪಿ ಸರಕಾರವು ರಾಜ್ಯಕ್ಕೆ ಹೆಚ್ಚುವರಿ ಆಹಾರಧಾನ್ಯ ನೀಡುವಲ್ಲಿ ಸಂಕುಚಿತ ರಾಜಕೀಯ ಮಾಡುತ್ತಿದೆ” ಎಂದು ತೀವ್ರವಾಗಿ ಖಂಡಿಸಿದೆ.

ಇದನ್ನೂ ಓದಿ: ಅಮಿತ್ ಶಾ ಭೇಟಿ ಮಾಡಿದ ಸಿದ್ದರಾಮಯ್ಯ : ಅಕ್ಕಿ ವಿಚಾರದಲ್ಲಿ ರಾಜಕೀಯ ಬೇಡ ಎಂದು ಮನವಿ

ಪ್ರತಿಭಟನೆಯಲ್ಲಿ ಮಾತನಾಡಿದ ಸಿಪಿಐ(ಎಂ) ನಾಯಕರು, “ರಾಜ್ಯ ಸರಕಾರದ ಮನವಿಗೆ ಸಕಾರಾತ್ಮಕವಾಗಿ ಸಂದಿಸಿ ಹೆಚ್ಚುವರಿ ಆಹಾರಧಾನ್ಯ ನೀಡಲು ಭಾರತ ಆಹಾರ ನಿಗಮದ ಅಧಿಕಾರಿಗಳು ಒಪ್ಪಿದೆ. ಆದರೂ ಕೂಡಾ ಒಕ್ಕೂಟ ಸರಕಾರ ಬಡವರ ವಿರೋಧಿಯಾಗಿ ನಿಂತಿರುವುದು ಅಕ್ಷಮ್ಯವಾಗಿದೆ. ಬಿಜಿಪಿ ಮತ್ತು ಒಕ್ಕೂಟ ಸರಕಾರ ತಮ್ಮ ಸಂಕುಚಿತ ಜನ ವಿರೋದಿ ರಾಜಕಾರಣವನ್ನು ಕೂಡಲೇ ಕೈ ಬಿಟ್ಟು, ಒಪ್ಪಂದದಂತೆ ಭಾರತ ಆಹಾರ ನಿಗಮದ ಮೂಲಕ ಆಹಾರ ಧಾನ್ಯಗಳನ್ನು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ಒಕ್ಕೂಟ ಸರಕಾರ ಹಾಗೂ ಪ್ರಧಾನ ಮಂತ್ರಿಗಳನ್ನು ಒತ್ತಾಯಿಸುತ್ತದೆ.

“ರಾಜ್ಯ ಸರಕಾರದ ಈ ಯೋಜನೆಯು ಬಡವರ ಹಸಿವು ನೀಗಿಸಲು ನೆರವಾಗುವ ಯೋಜನೆಯಾಗಿದೆ. ಇದು ಹಸಿವಿನ ಸೂಚ್ಯಂಕದಲ್ಲಿ ಅತ್ಯ೦ತ ತಳ ಮಟ್ಟದಲ್ಲಿರುವ ನಮ್ಮ ದೇಶವನ್ನು ಸ್ವಲ್ಪವಾದರೂ ಮೇಲೆತ್ತುವ ಯೋಜನೆಯಂಬುದನ್ನು ಒಕ್ಕೂಟ ಸರಕಾರ ಅರಿಯ ಬೇಕು. ಒಕ್ಕೂಟ ಸರಕಾರ ರಾಜ್ಯಹಿತದ ವಿರುದ್ಧ ನಗ್ನವಾಗಿ ನಿಂತಿದೆ” ಎಂದು ಸಿಪಿಐಎಂ ಹೇಳಿದೆ.

“ರಾಜ್ಯದ ಬಹುತೇಕ ಸಂಸದರು ಬಿಜೆಪಿಯವರಾಗಿದ್ದು, ಅವರೆಲ್ಲರೂ ಬಾಯಿ ಹೊಲೆದುಕೊಂಡಿರುವುದು ಅವರ ಜನವಿರೋದಿ ನೀತಿಯನ್ನು ಬಯಲುಗೊಳಿಸುತ್ತದೆ. ಜನರಿಗೆ ಆಹಾರಧಾನ್ಯದ ಬದಲು ನಗದು ವರ್ಗಾವಣೆ ಮಾಡುವಂತೆ ಸೂಚಿಸುವ ಬಿಜಿಪಿ ಧೋರಣೆಯು ಬಡವರಪರವಾಗಿರದೇ ಲೂಟಿಕೋರ ಕಾರ್ಪೊರೇಟ್‌ ಕಂಪನಿಗಳ ಪರವಾದ ನೀತಿಯಾಗಿದೆ” ಎಂದು ಪಕ್ಷವೂ ಕಟುವಾಗಿ ಟೀಕಿಸಿದೆ.

ಪ್ರತಿಭಟನೆಯಲ್ಲಿ ಸಿಪಿಐಎಂ ಹಿರಿಯ ಮುಖಂಡರಾದ ಹೆಚ್.ಎನ್ ಗೋಪಾಲಗೌಡ, ಜಿಲ್ಲಾ ಕಾರ್ಯದರ್ಶಿ ಎನ್.ಪ್ರತಾಪ್ ಸಿಂಹ, ರಾಜ್ಯ ಸಮಿತಿ‌ ಸದಸ್ಯರಾದ ದೇವಿ, ಜಿಲ್ಲಾ ಮುಖಂಡರಾದ ಚಂದ್ರಶೇಖರ್, ಹುಳ್ಳಿ ಉಮೇಶ್ ಮಾತನಾಡಿದರು.

 

Donate Janashakthi Media

Leave a Reply

Your email address will not be published. Required fields are marked *