ಜನಮತ 2023 : ಕೈ ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆ, ಸಿಎಂ ವಿರುದ್ಧ ಅಹ್ಮದ್ ಖಾನ್ ಪಠಾಣ್‌ಗೆ ಟಿಕೆಟ್‌

ಬೆಂಗಳೂರು : ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆ ಮಾಡಿದೆ. ಮುಖ್ಯವಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಅಭ್ಯರ್ಥಿ ಬದಲಾವಣೆ ಮಾಡಿದ್ದು, ಯಾಸಿರ್ ಅಹ್ಮದ್ ಖಾನ್ ಪಠಾಣ್ ಎಂಬುವರಿಗೆ ಟಿಕೆಟ್‌ ಘೋಷಣೆ ಮಾಡಲಾಗಿದೆ.

ಬಾಕಿ ಉಳಿಸಿಕೊಂಡಿದ್ದ ಎಂಟು ಕ್ಷೇತ್ರಗಳ ಪೈಕಿ 3 ಕ್ಷೇತ್ರಗಳ ಟಿಕೆಟ್ ಘೋಷಣೆ ಮಾಡಿದೆ. ಶಿಗ್ಗಾವಿಯಲ್ಲಿ ಮುಹಮ್ಮದ್ ಯೂಸುಫ್ ಸವಣೂರು ಬದಲಾಗಿ, ಯಾಸಿರ್ ಅಹಮ್ಮದ್ ಖಾನ್ ಪಠಾಣ್ ಅವರಿಗೆ ಟಿಕೆಟ್ ನೀಡಲಾಗಿದೆ.

ಯಾವ ಯಾವ ಕ್ಷೇತ್ರಕ್ಕೆ ಟಿಕೆಟ್‌ ಘೋಷಣೆ?
ಇನ್ನ ಮುಳಬಾಗಿಲು ಕ್ಷೇತ್ರಕ್ಕೆ ಬಿ.ಸಿ ಮುದ್ದು ಗಂಗಾಧರ್ ಗೆ ಟಿಕೆಟ್ ಕೊಡಲಾಗಿದೆ,ಕೆಆರ್‌ ಪುರಕ್ಕೆ ಡಿಕೆ ಮೋಹನ್, ಪುಲಕೇಶಿ ನಗರಕ್ಕೆ ಎಸಿ ಶ್ರೀನಿವಾಸ್ ಅವರಿಗೆ ಟಿಕೆಟ್ ನೀಡಲಾಗಿದೆ. ಪುಲಕೇಶಿ ನಗರದ ಟಿಕೆಟ್ ಆಕಾಂಕ್ಷಿ ಅಖಂಡ ಶ್ರೀನಿವಾಸ್ ಮೂರ್ತಿಗೆ ಟಿಕೆಟ್ ಕೈತಪ್ಪಿದೆ.

ಇನ್ನೂ ಐದು ಕ್ಷೇತ್ರಗಳಿಗೆ ಘೋಷಣೆಯಾಗದ ಟಿಕೆಟ್
ಎಂಟು ಕ್ಷೇತ್ರಗಳ ಪೈಕಿ ಕೇವಲ ಮೂರು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದ್ದು, ಇನ್ನೂ ಐದು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿಲ್ಲ. ನಾಮಪತ್ರ ಸಲ್ಲಿಕೆ ಮಾಡಲು ಗುರುವಾರ ಕೊನೆಯ ದಿನವಾಗಿದೆ. ಹೀಗಿದ್ದರೂ ಐದು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿಲ್ಲ.

ಇದನ್ನೂ ಓದಿ : ಜನಮತ 2023 – ವಿಧಾನಸಭಾ ಚುನಾವಣೆ : ಕೈ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ

ಕಾಂಗ್ರೆಸ್‌ ಈ ಬಾರಿಯ ಚುನಾವಣೆಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಹಂತ ಹಂತವಾಗಿ ಬಿಡುಗಡೆ ಮಾಡಿತು. ಐದು ಪಟ್ಟಿಗಳು ಬಿಡುಗಡೆಯಾಗಿದ್ದು, ಒಟ್ಟು 224 ವಿಧಾನಸಭಾ ಕ್ಷೇತ್ರಗಳ ಪೈಕಿ 218 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಿಸಿದ್ದಾರೆ. ಮಂಡ್ಯದ ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ದರ್ಶನ್‌ ಪುಟ್ಟಣ್ಣಯ್ಯ ಅವರಿಗೆ ಬೆಂಬಲ ಸೂಚಿಸಿದ್ದಾರೆ. ಏ.20 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಗುರುವಾರ ಬೆಳಿಗ್ಗೆಯೊಳಗೆ ಬಾಕಿ ಐದು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡಲಿದೆ ಎಂದು ಮೂಲಗಳು ತಿಳಿಸಿವೆ.

ಬಾಕಿ ಇರುವ ಕ್ಷೇತ್ರಗಳು
ಸಿ.ವಿ ರಾಮನ್ ನಗರ
ಮಂಗಳೂರು ಉತ್ತರ
ಶಿಡ್ಲಘಟ್ಟ
ಅರಕಲಗೂಡು
ರಾಯಚೂರು ಸಿಟಿ

ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ (2018) ರಾಜ್ಯದಲ್ಲಿಯೇ ಅತಿ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದ ಪುಲಕೇಶಿನಗರದ ಅಖಂಡ ಶ್ರೀನಿವಾಸ ಮೂರ್ತಿಯವರು ಕೊನೆಯ ಅಂತದವರೆಗೂ ಕಾಂಗ್ರೆಸ್‌ ಟಿಕೆಟ್‌ಗಾಗಿ ಕಾದಿದ್ದರು. ಕೊನೆಗೂ ಈ ಬಾರಿ ಟಿಕೆಟ್‌ ಸಿಕ್ಕಿಲ್ಲ. ದೊಡ್ಡ ನಾಯಕರೊಬ್ಬರು ಟಿಕೆಟ್ ತಪ್ಪಿಸಿದ್ದಾರೆ. ಈ ಬೆಳವಣಿಗೆಯಿಂದ ನನಗೆ ತುಂಬಾ ನೋವಾಗಿದೆ ಎಂದು ಅಖಂಡ ಶ್ರೀನಿವಾಸಮೂರ್ತಿ ಅವರು ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ‘ಹಾಲಿ ಶಾಸಕನಾಗಿದ್ದರೂ ನನಗೆ ಟಿಕೆಟ್ ಕೊಟ್ಟಿಲ್ಲ. ನಾನು ಎಲ್ಲ ಸಮುದಾಯದವರ ಜೊತೆ ಚೆನ್ನಾಗಿದ್ದೇನೆ. ಕ್ಷೇತ್ರದಲ್ಲಿ ಹಿಂದೂ- ಮುಸ್ಲಿಂ ಅಣ್ಣ ತಮ್ಮಂದಿರಂತೆ ಇದ್ದಾರೆ’ ಎಂದರು.

Donate Janashakthi Media

Leave a Reply

Your email address will not be published. Required fields are marked *