ಬೆಂಗಳೂರು: ಮುಖ್ಯಮಂತ್ರಿ ಹುದ್ದೆ ಸದ್ಯಕ್ಕೆ ಖಾಲಿ ಇಲ್ಲ. ಹೀಗಾಗಿ ಮುಂದಿನ ಮುಖ್ಯಮಂತ್ರಿಯ ಕುರಿತು ಚರ್ಚೆ ಮಾಡುವ ಅಗತ್ಯವೂ ಇಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋರ್ಟ್ನಲ್ಲಿ ಪ್ರಕರಣದ ವಿಚಾರಣೆ ಹಂತದಲ್ಲಿರುವುದು ನಿಜ. ಅಲ್ಲಿ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ. ಎಲ್ಲದಕ್ಕೂ ಮೊದಲೇ ಮುಂದಿನ ಮುಖ್ಯಮಂತ್ರಿ ಕುರಿತು ಚರ್ಚೆ ಮಾಡುವ ಅಗತ್ಯ ಸದ್ಯಕ್ಕಂತೂ ನನಗೆ ಕಾಣಿಸುತ್ತಿಲ್ಲ ಎಂದು ಹೇಳಿದರು.
ಸಿಎಂ ಸಿದ್ದರಾಮಯ್ಯ ಅವರು ರಾಜ್ಯಪಾಲರು ನೀಡಿರುವ ಅಭಿಯೋಜನೆಗೆ ಪೂರ್ವಾನುಮತಿಗೆ ತಡೆಯಾಜ್ಞೆ ಕೋರಿ ನ್ಯಾಯಾಲಯಕ್ಕೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಅದರ ವಾದ ಇಂದು ಮುಂದುವರೆಯಲಿದೆ. ಅಡ್ವಕೇಟ್ ಜನರಲ್ ಹಾಗೂ ಇತರ ವಕೀಲರು ತಮ ವಾದವನ್ನು ಮುಂದುವರೆಸಲಿದ್ದಾರೆ. ಇತ್ತೀಚಿನ ವಿಚಾರಣೆಯಲ್ಲಿ ನ್ಯಾಯಾಧೀಶರು 12ನೇ ತಾರೀಕಿನೊಳಗೆ ಪ್ರಕರಣವನ್ನು ಇತ್ಯರ್ಥಪಡಿಸುವುದಾಗಿ ತಿಳಿಸಿದ್ದಾರೆ ಎಂದರು.
ಇದನ್ನು ಓದಿ : ರೇಣುಕಾಸ್ವಾಮಿ ಕೊಲೆ ಪ್ರಕರಣ: ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ ನಟ ದರ್ಶನ್
ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರ ಪಕ್ಷದಲ್ಲಿರುವ ಭಿನ್ನಮತಗಳನ್ನು ಮೊದಲು ನೋಡಿಕೊಳ್ಳಲಿ, ನಮ್ಮ ಪಕ್ಷದ ವಿಚಾರವಾಗಿ ಅವರೇಕೆ ತಲೆ ಕೆಡಿಸಿಕೊಳ್ಳುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಇತ್ತೀಚೆಗೆ ಎತ್ತಿನಹೊಳೆ ಯೋಜನ ಉದ್ಘಾಟನೆಯ ದಿನ ನಾನು ಮತ್ತು ಸಚಿವ ಎಂ.ಬಿ.ಪಾಟೀಲ್ ಹಾಸನಕ್ಕೆ ಭೇಟಿ ನೀಡಬೇಕಿತ್ತು. ಇಬ್ಬರೂ ಜೊತೆಯಲ್ಲಿ ತೆರಳುವ ಕುರಿತು ಮಾತನಾಡಿಕೊಂಡಿದ್ದವು. ನಮ ಮನೆಗೆ ಉಪಹಾರಕ್ಕೆ ಬನ್ನಿ ಎಂದು ಎಂ.ಬಿ.ಪಾಟೀಲ್ ಆಹ್ವಾನ ನೀಡಿದ್ದರು. ಹೀಗಾಗಿ ನಾನು, ಅವರು ತಿಂಡಿ ತಿಂದು ಸಿಎಂ ಅವರು ಮನೆಬಿಟ್ಟ ತಕ್ಷಣವೇ ನಾವೂ ಜೊತೆಯಲ್ಲಿಯೇ ಹೋಗಿದ್ದೇವೆ. ಅದರಲ್ಲಿ ರಾಜಕೀಯ ವಿಚಾರಗಳೇನೂ ಇಲ್ಲ. ಅನಗತ್ಯವಾಗಿ ಇಂತಹುದನ್ನು ದೊಡ್ಡದು ಮಾಡುವ ಅಗತ್ಯವಿಲ್ಲ ಎಂದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕುಟುಂಬ ಸಮೇತರಾಗಿ ಅಮೆರಿಕಾಕ್ಕೆ ಖಾಸಗಿ ಪ್ರವಾಸ ತೆರಳಿದ್ದಾರೆ. ಅದು ಸರ್ಕಾರದಿಂದ ಪ್ರಾಯೋಜಿತವಾದ ಪವಾಸವಲ್ಲ. ಅವರ ಪುವಾಸದ ಬಗ್ಗೆ ಕಾಂಗ್ರೆಸ್ ಸಭೆಯಲ್ಲೂ ಮಾಹಿತಿ ನೀಡಿದ್ದರು ಎಂದು ಹೇಳಿದರು.
ಮುಡಾ ಪುಕರಣದಿಂದ ರಾಜ್ಯ ಸರ್ಕಾರದ ಆಡಳಿತದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಎಲ್ಲಾ ಸಚಿವರೂ ಆಯಾ ಇಲಾಖೆಗಳ ಕಾರ್ಯಕಲಾಪಗಳನ್ನು ನಿರ್ವಹಣೆ ಮಾಡುತ್ತಿದ್ದಾರೆ. ಮುಖ್ಯ ಕಾರ್ಯದರ್ಶಿಯವರು ತಮ ಪಾಲಿನ ಜವಾಬ್ದಾರಿಯನ್ನ ನಿಭಾಯಿಸುತ್ತಿದ್ದಾರೆ. ಹೈಕೋರ್ಟ್ನಲ್ಲಿ ಪುಕರಣದ ವಿಚಾರಣ ಇರುವುದರಿಂದ ಮುಖ್ಯಮಂತ್ರಿಯವರು ತಮ ಕಲಾಪಗಳನ್ನು ನಿಲ್ಲಿಸಿರಬಹುದು. ಉಳಿದಂತೆ ಎಲ್ಲಾ ಆಡಳಿತ ವ್ಯವಸ್ಥೆ ಮುಂದುವರೆದಿದೆ ಎಂದರು.
ಇದನ್ನು ನೋಡಿ : ಒಕ್ಕೂಟ ವ್ಯವಸ್ಥೆ ನಾಶ ಪಡಿಸಲು ಬಿಜೆಪಿ ಸಂಚು – ಮೀನಾಕ್ಷಿ ಬಾಳಿJanashakthi Media