ಹುಬ್ಬಳ್ಳಿ: ಐದು ವರ್ಷದ ಬಾಲಕಿಯ ಕೊಲೆ ಪ್ರಕರಣ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದ್ದೂ, ಅದಕ್ಕೆ ಸಂಬಂಧಪಟ್ಟಂತೆ ಇದೀಗ ಮರಣೋತ್ತರ ಪರೀಕ್ಷೆಯಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಬಯಲಾಗಿದೆ.
ಬಿಹಾರ ಮೂಲದ ಆರೋಪಿ ರಿತೇಶ್ ಕುಮಾರ್ ಐದು ವರ್ಷ ದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ನಂತರ ಕೊಲೆ ಮಾಡಿದ್ದಾನೆ.
ಬಾಲಕಿಯ ಲೆಗ್ಗಿನ್ಸ್ ಅನ್ನು ತನ್ನ ಒಳ ಉಡುಪಿನಲ್ಲಿ ಇಟ್ಟುಕೊಂಡು ವಿಕೃತ ಕಾಮಿಯಂತೆ ವರ್ತಿಸಿದ್ದಾನೆ ಎಂದು ಕಿಮ್ಸ್ ವೈದ್ಯ ಮೂಲದಿಂದ ಮಾಹಿತಿ ಹೊರಬಿದ್ದಿದೆ. ಆದರೆ ಮರಣೋತ್ತರ ಪರೀಕ್ಷಾ ವರದಿ ಇನ್ನಷ್ಟೇ ಅಧಿಕೃತವಾಗಿ ಹೊರಬರಬೇಕಿದೆ.
ಇದನ್ನೂ ಓದಿ: ಗುವಾಹಟಿ| ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ; ಕಲ್ಲು ತೂರಾಟ
ಪೊಲೀಸರು ಆರೋಪಿ ವಿರುದ್ಧ ಪೋಕ್ಸೋ, ಅಪಹರಣ ಮತ್ತು ಕೊಲೆ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆತನನ್ನು ಹಿಡಿಯಲು ಯತ್ನಿಸಿದಾಗ ಎನ್ಕೌಂಟರ್ ಮಾಡಿದ್ದಾರೆ. ಆರೋಪಿ ರಿತೇಶ್ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಆತನ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಇದರಿಂದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ.
ಇದೀಗ ಮೃತ ಬಾಲಕಿಯ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡುವುದಾಗಿ ಸರ್ಕಾರ ಘೋಷಿಸಿದೆ. ಅದರ ಜೊತೆಗೆ ಬಾಲಕಿಯ ಕುಟುಂಬಸ್ಥರಿಗೆ ಸ್ಲಂ ಬೋರ್ಡ್‌ನಿಂದ ಒಂದು ಮನೆ ನೀಡಲು ನಿರ್ಧಾರ ಮಾಡಲಾಗಿದೆ.
ಇದನ್ನೂ ನೋಡಿ:ಅತ್ಯಾಚಾರ- ಕೊಲೆ ಹೇಯ ಕೃತ್ಯ ಆದರೆ ಎನ್ಕೌಂಟರ್ ಪರಿಹಾರವೇ???