ಬೆಂಗಳೂರು | ಗುಂಡಿಗಳನ್ನು ಮುಚ್ಚಲು ಮತ್ತು ಮೂಲಸೌಕರ್ಯಗಳನ್ನು ಸುಧಾರಿಸಲು ಸರ್ಕಾರ ಭದ್ದ – ಡಿಕೆ ಶಿವಕುಮಾರ್

ಬೆಂಗಳೂರು: ರಾಜ್ಯ ಸರ್ಕಾರವು  ನಗರದಲ್ಲಿನ ಗುಂಡಿಗಳನ್ನು ಮುಚ್ಚಲು ಮತ್ತು ರಸ್ತೆ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಮೂಲಸೌಕರ್ಯಗಳನ್ನು ಸುಧಾರಿಸಲು ಬದ್ಧವಾಗಿದೆ. ಸದ್ಯ ನಡೆಯುತ್ತಿರುವ ರಸ್ತೆ ದುರಸ್ತಿ ಕಾರ್ಯಗಳ ಗುಣಮಟ್ಟದ ಬಗ್ಗೆ ಇರುವ ಕಳವಳಗಳನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬುಧವಾರ ತಳ್ಳಿಹಾಕಿದರು. ಬೆಂಗಳೂರು

ಇದನ್ನೂ ಓದಿ : ಹುಣಸೂರು |ಅತಿಥಿ ಉಪನ್ಯಾಸಕರ ನೇಮಕಾತಿ ಹಾಗೂ ಪರೀಕ್ಷಾ ಶುಲ್ಕ ಪಾವತಿ ದಿನಾಂಕ ಮತ್ತು ಪರೀಕ್ಷೆ ಮೂಂದುಡುವಂತೆ ಎಸ್‌ ಫ್‌ ಐ ಪ್ರತಿಭಟನೆ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎಲ್ಲವೂ ಚೆನ್ನಾಗಿ ಆಗುತ್ತಿದೆ. ಬೆಂಗಳೂರು ನಗರದ ಬಗ್ಗೆ ಮಾಧ್ಯಮಗಳು ಮತ್ತು ವಿರೋಧ ಪಕ್ಷಗಳು ಸೃಷ್ಟಿಸಿರುವ ಗ್ರಹಿಕೆಯನ್ನು ನಾವು ಬದಲಾಯಿಸಲಿದ್ದೇವೆ. ನಾವು ಅದೇ ಕಾರ್ಯದಲ್ಲಿದ್ದೇವೆ. ನಾವು ನಮ್ಮ ಕೆಲಸ ಮಾಡುತ್ತಿದ್ದೇವೆ’ ಎಂದು ತಿಳಿಸಿದರು. ಬೆಂಗಳೂರು

ದೇಶದ ಯಾವುದೇ ರಾಜ್ಯಗಳಲ್ಲಿ ರಸ್ತೆಯಲ್ಲಿ ಗುಂಡಿ ಕಂಡರೆ ಮಾಹಿತಿ ನೀಡಿ ಎಂದು ಯಾವುದೇ ಸಚಿವರು ಸಾರ್ವಜನಿಕರಿಗೆ ಕರೆ ನೀಡಿರಲಿಲ್ಲ. ಆದರೆ ನಾನು ಇದಕ್ಕಾಗಿ ಪ್ರತ್ಯೇಕ ಆಪ್ ಸಿದ್ಧಪಡಿಸಿ, ಪೊಲೀಸರ ಸಹಕಾರದಲ್ಲಿ ರಸ್ತೆಗುಂಡಿ ಮುಚ್ಚಲಾಗುತ್ತಿದೆ. ಇಂತಹ ಪ್ರಯತ್ನ ನಡೆದಿರುವುದು ಕರ್ನಾಟಕದಲ್ಲಿ ಮಾತ್ರ. ಬೆಂಗಳೂರು ಜಾಗತಿಕ ನಗರ ಹೀಗಾಗಿ ಎಲ್ಲರೂ ಬೆಂಗಳೂರು ರಸ್ತೆ ಗುಂಡಿಗಳ ಬಗ್ಗೆ ಮಾತ್ರ ಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದರು. ಬೆಂಗಳೂರು

ಇದನ್ನೂ ನೋಡಿ : ಧರ್ಮಸ್ಥಳ ಪ್ರಕರಣ | ಕೊಂದವರು ಯಾರು ಎಂಬ ಸತ್ಯ ಸಧ್ಯದಲ್ಲೇ ಗೊತ್ತಾಗಲಿದೆ – ಕೆ.ನೀಲಾJanashakthi Media

Donate Janashakthi Media

Leave a Reply

Your email address will not be published. Required fields are marked *