ಬೆಂಗಳೂರು: ಕನ್ನಡ ಚಿತ್ರರಂಗದ ನಟ ಪವರ್‌ಸ್ಟಾರ್ ಪುನೀತ್ ರಾಜಕುಮಾರ್ ಹೃದಯಘಾತದಿಂದ ಡೊಡ್ಮನೆ ಹುಡುಗ ನಿಧನರಾಗಿದ್ದಾರೆ. ಅವರಿಗೆ 46 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುನೀತ್ ರಾಜ್ ಕುಮಾರ್ ಚಿಕಿತ್ಸೆ ಫಲಕಾರಿಯಾಗದೆ ಮರಣ ಹೊಂದಿದ್ದು ಕುಟುಂಬಸ್ಥರು, ಅಸಂಖ್ಯಾತ ಅಭಿಮಾನಿಗಳು ಶೋಕಸಾಗರದಲ್ಲಿ ಮುಳುಗಿದ್ದಾರೆ.
ಆಕಾಶ್ ಚಿತ್ರದಿಂದ ಪೂರ್ಣ ಪ್ರಮಾಣದಲ್ಲಿ ನಟನಾಗಿ ಗುರುತಿಸಿಕೊಂಡಿದ್ದ ಪುನೀತ್ ರಾಜಕುಮಾರ್ ಬಾಲ ಕಲಾವಿದನಾಗಿ ಜನಪ್ರಿಯ ಚಿತ್ರಗಳಲ್ಲಿ ನಟಿಸಿದ್ದರು. ಪ್ರೇಮದ ಕಾಣಿಕೆ ಚಲನಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ ಪುನೀತ್ ರಾಜಕುಮಾರ್.
ಇಂದು ಮನೆಯಲ್ಲಿರುವ ತಮ್ಮ ಜಿಮ್‌ನಲ್ಲಿ ಕಸರತ್ತು ಮಾಡುವ ಸಂದರ್ಭದಲ್ಲಿ ಹೃದಾಯಘಾತ ಸಂಭವಿಸಿದಾಗ ಕೂಡಲೇ ಪುನೀತ್ ರಾಜಕುಮಾರ್ ಅವರನ್ನು ಬೆಳಿಗ್ಗೆ 11.30ಕ್ಕೆ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇದರಿಂದ ಕನ್ನಡ ಚಿತ್ರರಂಗ, ಕನ್ನಡ ನಾಡು ಅಪಾರ ನಷ್ಟಕ್ಕೊಳಗಾಗಿದ್ದು, ಅಭಿಮಾನಿಗಳು ಕಣ್ಣೀರು ಸುರಿಸುತ್ತಿದ್ದಾರೆ. ನಟ ಪುನೀತ್ ರಾಜ್‌ಕುಮಾರ್ ದಾಖಲಾಗಿದ್ದ ವಿಕ್ರಂ ಆಸ್ಪತ್ರೆಯ ಸುತ್ತಮುತ್ತ ಬಿಗಿಭದ್ರತೆ ಇದ್ದು, ವಿಕ್ರಂ ಆಸ್ಪತ್ರೆ ಬಳಿಯ ಕಾಲೇಜ್ ಅವಧಿಗೂ ಮುನ್ನವೇ ಬಂದ್ ಮಾಡಲಾಗಿದೆ.
ಸಾವಿನಲ್ಲೂ ಸಾರ್ಥಕತೆ ಮೆರೆದ ಪುನೀತ್ ರಾಜಕುಮಾರ್ ನಮ್ಮ ಕಣ್ಣುಗಳನ್ನು ದಾನ ಮಾಡಿದ್ದಾರೆ.
ಪುನೀತ್ ನಿವಾಸಕ್ಕೆ ಬಿಗಿ ಭದ್ರತೆ: ಪುನೀತ್ ರಾಜ್ ಕುಮಾರ್ ಅವರ ನಿಧನ ಸುದ್ದಿ ತಿಳಿಯುತ್ತಿದ್ದಂತೆ ಅವರ ಅಭಿಮಾನಿಗಳು ತಂಡೋಪತಂಡವಾಗಿ ಮನೆಯತ್ತ ಲಗ್ಗೆಯಿಡುತ್ತಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪುನೀತ್ ಮನೆಗೆ ತೆರಳುವ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಅವರ ನಿವಾಸಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ಏರ್ಪಡಿಸಲಾಗಿದೆ.