ಪವರ್ ಟಿವಿ ಕೂಡಲೇ ತನ್ನ ಕಾರ್ಯಕ್ರಮಗಳ ಪ್ರಸಾರ ಸ್ಥಗಿತಗೊಳಿಸಬೇಕು: ಹೈಕೋರ್ಟ್

ಬೆಂಗಳೂರು: ಪವರ್ ಟಿ.ವಿಗೆ ಹೈಕೋರ್ಟ್ ಲೈಸೆನ್ಸ್ ನವೀಕರಣ ಮಾಡದ ಆರೋಪದ ಹಿನ್ನೆಲೆಯಲ್ಲಿ ಅದರ ಕಾರ್ಯಕ್ರಮಗಳ ಪ್ರಸಾರವನ್ನು ತಕ್ಷಣವೇ ಸ್ಥಗಿತಗೊಳಿಸಬೇಕೆಂದು ಆದೇಶ ನೀಡಿದೆ.

ನ್ಯಾಯಮೂರ್ತಿ ಎಸ್‌ ಆರ್‌ ಕೃಷ್ಣಕುಮಾರ್‌ ರಿದ್ದ ಏಕಸದಸ್ಯ ಪೀಠ ಕೇಂದ್ರ ವಲಯದ ಐಜಿ ಬಿ.ಆರ್‌ ರವಿಕಾಂತೇಗೌಡ, ವಿಧಾನ ಪರಿಷತ್‌ ಮಾಜಿ ಸದಸ್ಯ ಎಚ್‌ಎಂ ರಮೇಶ್‌ ಗೌಡ ಸಲ್ಲಿಸಿದ್ದ ಅರ್ಜಿಗಳನ್ನು ಪರಿಶೀಲಿಸಿ ಮಹತ್ವದ ಆದೇಶ ನೀಡಿದೆ.

ಕರ್ನಾಟಕ ಹೈಕೋರ್ಟ್ ಕೇಬಲ್ ಟೆಲಿವಿಷನ್ ನೆಟ್‌ವರ್ಕ್‌ಗಳ (ನಿಯಂತ್ರಣ) ಕಾಯಿದೆ – 1995 ರ ಆದೇಶವನ್ನು ಉಲ್ಲಂಘಿಸಿರುವ ಕಾರಣ ಜುಲೈ 8 ರವರೆಗೆ ಸುದ್ದಿ ಸೇರಿದಂತೆ ಯಾವುದೇ ಕಾರ್ಯಕ್ರಮಗಳನ್ನು ಪ್ರಸಾರ ಮಾಡದಂತೆ ಚಾನೆಲ್‌ಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಇದನ್ನೂ ಓದಿ: 18ನೇ ಲೋಕಸಭೆಯ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆ: ಧ್ವನಿಮತ ಮೂಲಕ ಅಂಗೀಕಾರ

ಕರ್ನಾಟಕ ಹೈಕೋರ್ಟ್ ಹೆಚ್ಚುವರಿ ನಿರ್ದೇಶಕ ರಾಕೇಶ್ ಸಂಜೀವ ಶೆಟ್ಟಿ ಅಲಿಯಾಸ್ ರಾಕೇಶ್ ಶೆಟ್ಟಿ, ಪವರ್ ಟಿವಿಯ ಮಾತೃಸಂಸ್ಥೆಯಾದ M/s ಪವರ್ ಸ್ಮಾರ್ಟ್ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನ ಪ್ರತಿನಿಧಿ, ಪ್ರಕರಣದ ಪ್ರತಿವಾದಿಗೆ ನಿರ್ದೇಶಿಸಿ ಆದೇಶ ಹೊರಡಿಸಿದೆ.

ಅರ್ಜಿದಾರರ ಪರ ಹೈಕೋರ್ಟ್‌ನ ಹಿರಿಯ ವಕೀಲರಾದ ಪ್ರಭುಲಿಂಗ ಕೆ ನಾವಡಗಿ, ಸಂದೇಶ್‌ ಜೆ ಚೌಟ ಹಾಗೂ ಡಿಆರ್‌ ರವಿಶಂಕರ್‌ ವಾದ ಮಂಡಿಸಿ, “ಪ್ರತಿವಾದಿ ರಾಕೇಶ್‌ ಶೆಟ್ಟಿ, ಅರ್ಜಿದಾರರ ವಿರುದ್ಧ ಮಾನಹಾನಿಕರ ಸುದ್ದಿಗಳನ್ನು ಬಿತ್ತರಿಸುತ್ತಿದ್ದಾರೆ. ವಾಸ್ತವದಲ್ಲಿ ಅವರು ಚಾನೆಲ್‌ ಅನ್ನು ಕಾನೂನು ಬಾಹಿರವಾಗಿ ನಡೆಸುತ್ತಿದ್ದಾರೆ. 2021ರಿಂದಲೂ ಚಾನೆಲ್‌ ಪರವಾನಗಿ ನವೀಕರಿಸಿಲ್ಲ” ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ವಾದ ಆಲಿಸಿದ ನ್ಯಾಯಪೀಠ ಮೇಲಿನ ಆದೇಶ ಹೊರಡಿಸಿ, ಪ್ರಕರಣದ ವಿಚಾರಣೆಯನ್ನು ಮುಂದೂಡಿದೆ.

ಇದನ್ನೂ ನೋಡಿ: ನಾಟಕ | ದೇವರ ಹೆಣ – ಕಥೆ : ಕುಂ. ವೀರಭದ್ರಪ್ಪ, ನಿರ್ದೇಶನ : ವಸಂತ ಗಂಗೇರ್ Janashakthi Media

Donate Janashakthi Media

Leave a Reply

Your email address will not be published. Required fields are marked *