ಪ್ರಧಾನಿ ನರೇಂದ್ರ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಕೇರಳದಲ್ಲಿ ಪ್ರದರ್ಶನವಾಗಲಿದೆ: ಡಿವೈಎಫ್‌ಐ

ತಿರುವನಂತಪುರಂ: ಬಿಬಿಸಿ ಸಿದ್ಧಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಕುರಿತ ‘ಇಂಡಿಯಾ: ದಿ ಮೋದಿ ಕ್ವೆಷ್ಚನ್‌’ ಸಾಕ್ಷ್ಯಚಿತ್ರ ಕೇರಳದಲ್ಲಿ ಪ್ರದರ್ಶಿಸಲಾಗುವುದು ಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್‌(ಡಿವೈಎಫ್‌ಐ) ಪ್ರಕಟಿಸಿದ್ದು, ಸಾಕ್ಷ್ಯಚಿತ್ರದ ಯೂಟ್ಯೂಬ್ ವೀಡಿಯೊಗಳು ಮತ್ತು ಲಿಂಕ್‌ಗಳನ್ನು ಹಂಚಿಕೊಂಡಿದೆ.

2002ರಲ್ಲಿ ನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಡೆದ ಗೋಧ್ರೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದಂತಹ ವಿವರಾಣಾತ್ಮಕ ಎರಡು ಕಂತಿನ ಸಾಕ್ಷ್ಯಚಿತ್ರ ಇದಾಗಿದೆ.

ಇದನ್ನು ಓದಿ: ಪ್ರಧಾನಿ ನರೇಂದ್ರ ಮೋದಿ ಕುರಿತ ಸಾಕ್ಷ್ಯಚಿತ್ರ; ಇಷ್ಟಕ್ಕೂ ಬಿಬಿಸಿ ವಿರುದ್ಧ ಕೇಂದ್ರ ಸರ್ಕಾರ ಕೆಂಡಕಾರುವುದೇಕೆ?

ಆದರೆ, ಕೇಂದ್ರ ಸರ್ಕಾರ ಐಟಿ ನಿಯಮಾವಳಿ 2021ರ ಅನ್ವಯ ತುರ್ತು ಅಧಿಕಾರ ಬಳಸಿ ಸಾಕ್ಷ್ಯಚಿತ್ರದ ವಿಡಿಯೊ ಮತ್ತು ಪೋಸ್ಟ್‌ಗಳನ್ನು ನಿರ್ಬಂಧಿಸಲು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ನಿರ್ದೇಶನಗಳನ್ನು ನೀಡಿದೆ. ಬಿಬಿಸಿ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದ ಹಲವು ಯೂಟ್ಯೂಬ್ ವಿಡಿಯೊಗಳು ಮತ್ತು ಲಿಂಕ್‌ಗಳನ್ನು ಹಂಚಿಕೊಂಡಿರುವ ಟ್ವೀಟ್‌ಗಳನ್ನು ನಿರ್ಬಂಧಿಸಲು ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ

ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಮೋದಿ ಕುರಿತಾದ ಸಾಕ್ಷ್ಯಚಿತ್ರವನ್ನು ನಿರ್ಬಂಧಿಸುವ ಕೇಂದ್ರದ ವಿರುದ್ಧ ಕಾಂಗ್ರೆಸ್‌ ಸೇರಿದಂತೆ ವಿವಿಧ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.

ಇದೀಗ ಕೇರಳ ಅಲ್ಲದೆ, ಹೈದರಾಬಾದ್‌ನಲ್ಲಿ ಸಾಕ್ಷ್ಯ ಚಿತ್ರ ಪ್ರದರ್ಶನ ಕಂಡಿದೆ. ಜವಾಹರ್‌ಲಾಲ್‌ ನೆಹರೂ ವಿಶ್ವವಿದ್ಯಾಲಯ(ಜೆಎನ್‌ಯು)ದ ವಿದ್ಯಾರ್ಥಿ ಸಂಘಟನೆ- ಜೆಎನ್‌ಯುಎಸ್‌ಯು ಸಾಕ್ಷ್ಯಚಿತ್ರ ಪ್ರದರ್ಶನ ನೀಡುವುದಾಗಿ ಪ್ರಕಟಿಸಿದೆ.

ಇದನ್ನು ಓದಿ: ಬಿಲ್ಕಿಸ್ ಬಾನೋ ಅತ್ಯಾಚಾರ ಮತ್ತು ಹತ್ಯಾಕಾಂಡದ ಪ್ರಕರಣದ ಅಪರಾಧಿಗಳ ಬಿಡುಗಡೆ: “ಇದೆಂತಾ ವಿವೇಚನೆ ? ಯಾವ ಆಧಾರದಲ್ಲಿ ಬಿಡುಗಡೆ?-ಸುಭಾಷಿಣಿ ಅಲಿ

ಜೆಎನ್‌ಯುಎಸ್‌ಯು ಕಚೇರಿಯಲ್ಲಿ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಕುರಿತಾದ ಬಿಬಿಸಿ ನಿರ್ಮಿಸಿರುವ ‘ಇಂಡಿಯಾ: ದಿ ಮೋದಿ ಕ್ವೆಷ್ಚನ್‌’ ಹೆಸರಿನ ಸಾಕ್ಷ್ಯಚಿತ್ರವನ್ನು ಇಂದು ರಾತ್ರಿ ತನ್ನ ಕಚೇರಿ ಆವರಣದಲ್ಲಿ ಪ್ರದರ್ಶಿಸುವುದಾಗಿ ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಯ (ಜೆಎನ್‌ಯುಎಸ್‌ಯು) ಪ್ರಕಟಿಸಿದೆ.

ಸಾಕ್ಷ್ಯಚಿತ್ರ ಪ್ರದರ್ಶನ ಕುರಿತು ಮಾಹಿತಿ ಹಂಚಿಕೊಂಡಿರುವ ಜೆಎನ್‌ಯುಎಸ್‌ಯು ಅಧ್ಯಕ್ಷೆ ಐಶೆ ಘೋಷ್, ಸಾಮಾಜಿಕ ಮಾಧ್ಯಮ ಟ್ವಿಟರ್‌ ನಲ್ಲಿ ಕರಪತ್ರ ಹಂಚಿಕೊಂಡಿದ್ದಾರೆ ಮತ್ತು ‘ಸಾಕ್ಷ್ಯಚಿತ್ರ ಪ್ರದರ್ಶನಕ್ಕಾಗಿ ನಮ್ಮೊಂದಿಗೆ ಸೇರಿ, ಇದನ್ನು ಅತಿದೊಡ್ಡ ‘ಪ್ರಜಾಪ್ರಭುತ್ವ’ದ ‘ಚುನಾಯಿತ ಸರ್ಕಾರ’ ನಿಷೇಧಿಸಿದೆ ಎಂದು ಬರೆದುಕೊಂಡಿದ್ದಾರೆ.

ಸಾಕ್ಷ್ಯಚಿತ್ರ ಪ್ರದರ್ಶಿಸಲು ವಿದ್ಯಾರ್ಥಿ ಸಂಘಟನೆ ಅನುಮತಿ ಪಡೆದಿಲ್ಲ. ಹೀಗಾಗಿ ಪ್ರದರ್ಶನವನ್ನು ತಕ್ಷಣವೇ ರದ್ದುಪಡಿಸಬೇಕು ಎಂದು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ವಿದ್ಯಾರ್ಥಿ ಸಂಘಟನೆಗೆ ಸೂಚಿಸಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಐಶೆ ಘೋಷ್‌, ಜೆಎನ್‌ಯುಎಸ್‌ಯು ಕಚೇರಿಯಲ್ಲಿ ಯಾವುದೇ ಕಾರ್ಯಕ್ರಮ ನಡೆಸಲು ಯಾವುದೇ ಅನುಮತಿ ಪಡೆಯಬೇಕೆಂಬ ನಿಯಮವಿಲ್ಲ ಹಾಗಾಗಿ, ನಾವು ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವುದಿಲ್ಲ ಎಂದು ಹೇಳಿದ್ದಾರೆ.

ಇಲ್ಲಿ ಕ್ಲಿಕ್‌ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್‌ ಗುಂಪು ಸೇರಲು ಈ ಲಿಂಕ್‌ ಕ್ಲಿಕ್‌ ಮಾಡಿ

Donate Janashakthi Media

Leave a Reply

Your email address will not be published. Required fields are marked *