ಬೆಂಗಳೂರು: ರಾಜ್ಯ ಸರ್ಕಾರ ನಿಗಮ ಮಂಡಳಿ ಮತ್ತು ಪ್ರಾಧಿಕಾರ ನಾಮನಿರ್ದೇಶಿತ ಅಧ್ಯಕ್ಷರ ನೇಮಕಾತಿಯನ್ನು ವಾಪಸ್ಸು ಪಡೆದಿದೆ. ಶಾಸಕರು, ಮಾಜಿ ಶಾಸಕರು, ಅಧ್ಯಕ್ಷರು ಇರುವ ನಿಗಮ/ಮಂಡಳಿ/ಪ್ರಾಧಿಕಾರದ ಒಟ್ಟು 52 ಮಂದಿಯನ್ನು ಹಿಂಪಡೆದಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ.
ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಆದೇಶ ಹೊರಡಿಸಿದ್ದಾರೆ. ಮುಖ್ಯಮಂತ್ರಿ ಬಸವಾರಾಜ ಬೊಮ್ಮಾಯಿ ಅವರ ಆದೇಶದ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿ ಕಚೇರಿಯಿಂದ ಆಯಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ಮತ್ತು ಕಾರ್ಯದರ್ಶಿಗಳಿಗೆ, ಸೂಚನೆ ನೀಡಲಾಗಿದೆ.
ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಅವಧಿಯಲ್ಲಿ ನೇಮಕಗೊಂಡಿದ್ದ ವಿವಿಧ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ನೇಮಕಾತಿಯನ್ನು ರದ್ದು ಮಾಡಲಾಗಿದೆ. ಒಂದೂವರೆ ವರ್ಷದ ಅಧಿಕಾರಾವಧಿ ಪೂರ್ಣಗೊಳಿಸಿದ ಮಾನದಂಡದ ಅಡಿಯಲ್ಲಿ ರದ್ದುಮಾಡಲಾಗಿದೆ. ಈ ಸಂಬಂಧ ನೇಮಕಾತಿ ರದ್ದು ಸಂಬಂಧ ಬಿಜೆಪಿ ತ್ರಿಸದಸ್ಯ ಸಮಿತಿ ರಚಿಸಿತ್ತು.
ಸಚಿವ ಆರ್. ಅಶೋಕ್, ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ನೇತೃತ್ವದ ತ್ರಿ ಸದಸ್ಯ ಸಮಿತಿ ರದ್ದುಪಟ್ಟಿ ತಯಾರಿಸಿ ಮುಖ್ಯಮಂತ್ರಿ ಅವರಿಗೆ ಹಸ್ತಾಂತರಿಸಿದ್ದರು. ನಿನ್ನೆ (ಜುಲೈ 11) ಮುಖ್ಯಮಂತ್ರಿಗಳು ಸಮಿತಿ ಸದಸ್ಯರ ಜೊತೆ ಚರ್ಚಿಸಿ ಅಂತಿಮ ಪಟ್ಟಿ ಸಿದ್ದಪಡಿಸಿದ್ದರು.
ಹೊಸಬರ ನೇಮಕಕ್ಕೆ ಈಗಾಗಲೇ ಪಟ್ಟಿ ಸಿದ್ಧವಾಗಿದ್ದು, ಯಾವುದೇ ಕ್ಷಣದಲ್ಲಿ ಅದು ಹೊರಬೀಳಬಹುದು.
ಪಟ್ಟಿಯ ವಿವರ ಹೀಗಿದೆ;
- ಎಲ್.ಆರ್.ಮಹದೇವಸ್ವಾಮಿ: ಕರ್ನಾಟಕ ಮೃಗಾಲಯ ಪ್ರಾಧಿಕಾರ, ಮೈಸೂರು
- ರವಿ ಕುಶಲಪ್ಪ: ಕರ್ನಾಟಕ ರಾಜ್ಯ ಪಶ್ಚಿಮಘಟ್ಟಗಳ ಸಂರಕ್ಷಣ ಕಾರ್ಯಪಡೆ ಸಮಿತಿ
- ಮಣಿರಾಜ ಶೆಟ್ಟಿ: ಕರ್ನಾಟಕ ಗೇರು ಅಭಿವೃದ್ಧಿ ನಿಗಮ ನಿಯಮಿತ, ಮಂಗಳೂರು
- ಅನಂತ ಹೆಗಡೆ ಆಶೀಸರ: ಕರ್ನಾಟಕ ಜೀವ ವೈವಿಧ್ಯ ಮಂಡಳಿ
- ಮುಕ್ತಾರ್ ಹುಸೇನ್ ಫಕ್ರುದ್ದಿನ್ ಪಠಾಣಸಾ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ
- ತಮ್ಮೇಶಗೌಡ ಎಚ್.ಸಿ: ಕರ್ನಾಟಕ ವಿದ್ಯುತ್ ಕಾರ್ಖಾನೆ ನಿಯಮಿತ
- ಸಂತೋಷ್ ರೈ ಬೋಲಿಯಾರ್: ಮೈಸೂರು ಎಲೆಕ್ಟ್ರಿಕಲ್ಸ್ ಇಂಡಸ್ಟ್ರೀಸ್ ಲಿಮಿಟೆಡ್
- ಡಾ. ಎಂ.ಎನ್.ನಂದೀಶ್ ಹಂಜೆ: ಕರ್ನಾಟಕ ಪುಸ್ತಕ ಪ್ರಾಧಿಕಾರ
- ಸುನೀಲ್ ಪುರಾಣಿಕ್: ಕರ್ನಾಟಕ ಚಲನಚಿತ್ರ ಅಕಾಡೆಮಿ
- ಆನಂದ್ ಆ ಶ್ರೀ ಉಪ್ಪಳ್ಳಿ: ಸಾವಯವ ಕೃಷಿ ಉತ್ಪನ್ನ ಮಟ್ಟದ ಅಧಿಕಾರಯುಕ್ತ ಸಮಿತಿ
- ಲಿಂಗರೆಡ್ಡಿ ಗೌಡ: ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ(ತೊಗರಿ ಅಭಿವೃದ್ಧಿ ಮಂಡಳಿ)
- ಹನುಮನಗೌಡ ಬೆಳಗುರ್ಕಿ:ಕೃಷಿ ಬೆಲೆ ಆಯೋಗ
- ಎನ್.ಶಿವಲಿಂಗಯ್ಯ: ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರ, ಕಾವೇರಿ ಜಲಾನಯನ ಯೋಜನೆ (ಕಾಡಾ),ಮೈಸೂರು
- ಶರಣಪ್ಪ ತಳವಾರ: ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರ ಕೃಷ್ಣಾ ಮೇಲ್ದಂಡೆ ಯೋಜನೆ, ಭೀಮರಾಯನಗುಡಿ, ಕಲಬುರಗಿ
- ತಿಪ್ಪೇರುದ್ರಸ್ವಾಮಿ ಬಿ.ಎಚ್.ಎಂ: ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ, ತುಂಗಭದ್ರ ಯೋಜನೆ, ಕಾಡಾ
- ಕಾಂತಿಲಾಲ್ ಕೇವಲಚಂದ್ರ ಬನ್ಸಾಲಿ: ಕರ್ನಾಟಕ ದ್ರಾಕ್ಷಿರಸ ಮಂಡಳಿ
- ಕೆ.ವಿ.ನಾಗರಾಜ: ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತ
- ಸವಿತಾ ವಿಶ್ವನಾಥ್ ಅಮರಶೆಟ್ಟಿ: ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ
- ಎಸ್.ಆರ್.ಗೌಡ: ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ, ನಿಯಮಿತ
- ಅಶೋಕ್ ಎಸ್. ಅಲ್ಲಾಪುರ, ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ, ಇಂಡಿ, ವಿಜಯಪುರ
- ಎಂ.ಜಯದೇವ:ಬೆಂಗಳೂರು– ಮೈಸೂರು ಮೂಲಸೌಕರ್ಯ ಕಾರಿಡಾರ್ ಪ್ರದೇಶ ಯೋಜನಾ ಪ್ರಾಧಿಕಾರ
- ಶರಣು ಭೀಮಣ್ಣ ತಳ್ಳೀಕೇರಿ: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ
- ನಿತಿನ್ ಕುಮಾರ್, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತ, ಮಂಗಳೂರು.
- ಅಣ್ಣಪ್ಪ: ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ಸಂಸ್ಥೆ (ಜಂಗಲ್ ಲಾಡ್ಜಸ್)
- ಕೆ.ಹೇಮಂತ ಕುಮಾರ್ ಗೌಡ: ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ, ಮೈಸೂರು
- ಶಶಿಕಲಾ ವಿ.ಟೆಂಗಳಿ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ಮತ್ತು ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣ ನಿಗಮ
- ಅಂತೋಣಿ ಸೆಬಾಸ್ಟಿನ್: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ
- ಪ್ರಮೀಳಾ ನಾಯ್ಡು ಆರ್. : ಕರ್ನಾಟಕ ರಾಜ್ಯ ಮಹಿಳಾ ಆಯೋಗ
- ಚಿಕ್ಕಮ್ಮ ಬಸವರಾಜ: ಬಾಲಭವನ ಸೊಸೈಟಿ
- ಹರಿಕೃಷ್ಣ ಬಂಟ್ವಾಳ: ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ
- ಜೀವನ ಮೂರ್ತಿ ಎಸ್. : ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ
- ಸಿ.ಮುನಿಕೃಷ್ಣ: ಕರ್ನಾಟಕ ಮಾರುಕಟ್ಟೆ ಕನ್ಸಲ್ಟೆಂಟ್ ಮತ್ತು ಏಜೆನ್ಸೀಸ್ ಲಿಮಿಟೆಡ್
- ಬೇಳೂರು ರಾಘವೇಂದ್ರ ಶೆಟ್ಟಿ: ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ ನಿಯಮಿತ
- ಕೃಷ್ಣಪ್ಪಗೌಡ ಎನ್.ಆರ್: ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ
- ಎಸ್. ಲಿಂಗಮೂರ್ತಿ: ಮೈಸೂರು ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್
- ಬಿ.ಕೆ. ಮಂಜುನಾಥ್: ಕರ್ನಾಟಕ ರಾಜ್ಯ ತೆಂಗಿನ ನಾರಿನ ಅಭಿವೃದ್ಧಿ ನಿಗಮ ನಿಯಮಿತ
- ಶಿವಲಿಂಗೇಗೌಡ: ಮೈಸೂರು ಸಕ್ಕರೆ ಕಾರ್ಖಾನೆ, ಮಂಡ್ಯ
- ಎಚ್.ಹನುಮಂತಪ್ಪ: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ
- ಎಂ.ರಾಮಚಂದ್ರಪ್ಪ: ಕೇಂದ್ರ ಪರಿಹಾರ ಸಮಿತಿ
- ಬಾಬು ಪತ್ತಾರ್: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ
- ಕೆ.ರವೀಂದ್ರ ಶೆಟ್ಟಿ: ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮ
- ಆರ್.ಅನುರಾಧ ಪಾಟೀಲ: ಡಿ.ದೇವರಾಜ ಅರಸ್ ಸಂಶೋಧನಾ ಸಂಸ್ಥೆ
- ಕೆ.ರತ್ನಪ್ರಭ: ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರ
- ಎನ್.ವಿ.ಫಣೀಶ್: ಮೈಸೂರು ಪೈಂಟ್ಸ್ ಮತ್ತು ವಾರ್ನಿಸ್ ನಿಯಮಿತ
- ಈರಣ್ಣ ಶಿ.ಜಡಿ: ಕರ್ನಾಟಕ ಬಾಲ ವಿಕಾಸ ಅಕಾಡೆಮಿ, ಧಾರವಾಡ
- ಶೃತಿ: ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ
- ಕೆ.ರೇವಣ್ಣಪ್ಪ ಕೋಳಗಿ: ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ
- ಕೆ.ಪಿ.ಪುರುಷೋತ್ತಮ್: ಕರ್ನಾಟಕ ಕ್ರೀಡಾ ಪ್ರಾಧಿಕಾರ
- ನೀಲಕಂಠ ಬಿ.ಮಾಸ್ತರಮರಡಿ: ಕರ್ನಾಟಕ ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮ
- ಎಸ್.ದತ್ತಾತ್ರಿ: ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ
- ಎಸ್.ಎನ್.ಈಶ್ವರಪ್ಪ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ
- ಎಂ.ಆರ್.ವೆಂಕಟೇಶ್: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ