ವೈದ್ಯಕೀಯ ಸಾಮಾಗ್ರಿಗಳ ಕೊರತೆ: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೋಗಿಗಳ ಚಿಕಿತ್ಸೆಗೆ ಹರಸಾಹಸ

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯಲ್ಲಿರುವ 201 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯಕೀಯ ಸಾಮಗ್ರಿಗಳ ಕೊರತೆ ಎದುರಾಗಿದ್ದು, ರೋಗಿಗಳಿಗೆ ಚಿಕಿತ್ಸೆ ನಿರಾಕರಿಸಲಾಗುತ್ತಿದೆ ಎಂದು ವರದಿಯಾಗಿದೆ.

ಸಾರ್ವಜನಿಕರು ಅನಾರೋಗ್ಯ ಅಥವಾ ವೈದ್ಯಕೀಯ ತುರ್ತು ಚಿಕಿತ್ಸೆಗಾಗಿ ಅತ್ಯಂತ ಸಮೀಪದಲ್ಲಿ ಜನರು ಸಂಪರ್ಕಿಸುವುದು ಪ್ರಾಥಮಿಕ ಆರೋಗ್ಯ ಕೇಂದ್ರಗಳಾಗಿವೆ. ಆದರೆ ಕೆಲವು ಕಡೆಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸುತ್ತಿವೆ ಎಂಬ ಮಾತುಗಳು ಕೇಳಿ ಬಂದಿವೆ. ಇದಕ್ಕೆ ಮೂಲ ಕಾರಣ ಸಾಮಗ್ರಿಗಳ ಕೊರತೆ ಎಂದು ಹೇಳಲಾಗುತ್ತಿದೆ.

ಇದನ್ನು ಓದಿ: ಆರೋಗ್ಯ ಕೇಂದ್ರದಲ್ಲಿನ ಮೂಲಸೌಕರ್ಯಗಳ ಪರಿಹಾರಕ್ಕಾಗಿ ಡಿವೈಎಫ್‌ಐ ಪ್ರತಿಭಟನೆ

ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತ (ಕೆಎಸ್‌ಎಂಎಸ್‌ಸಿಎಲ್), ರಾಜ್ಯದಲ್ಲಿ ಔಷಧಿಗಳು ಮತ್ತು ವೈದ್ಯಕೀಯ ಸಲಕರಣೆಗಳ ಪೂರೈಕೆದಾರಿಗೆ ಕಳೆದ ಎರಡು ವರ್ಷಗಳಿಂದ ಬಿಲ್ ಮೊತ್ತ ಬಾಕಿ ಉಳಿಸಿಕೊಂಡಿದೆ. ಬಾಕಿ ಹಣ ಪಾವತಿಯಾಗದ ಹಿನ್ನೆಲೆಯಲ್ಲಿ ವೈದ್ಯಕೀಯ ಸಲಕರಣೆಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ ಎಂದು ವರದಿಯಾಗಿದೆ.

ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿರುವ ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ) ಡಾ.ಕೆ.ವಿ.ತ್ರಿಲೋಕ್ ಚಂದ್ರ, ರೋಗಿಗಳಿಗೆ ಚಿಕಿತ್ಸೆ ನೀಡಲು ಜನೌಷಧಿ ಕೇಂದ್ರಗಳಿಂದ ಔಷಧಿಗಳನ್ನು ಖರೀದಿಸಲು ಪಿಎಚ್‌ಸಿಗಳ ವೈದ್ಯರು ಮತ್ತು ಸಿಬ್ಬಂದಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನು ಓದಿ: ಸಮುದಾಯ ಆರೋಗ್ಯ ಕೇಂದ್ರ ಅವ್ಯವಸ್ಥೆ ವಿರುದ್ಧ ಆಕ್ರೋಶ

ಅಲ್ಲದೆ, ಕೆಎಸ್‌ಎಂಎಸ್‌ಸಿಎಲ್‌ ನ ಕೆಲವು ಟೆಂಡರ್‌ಗಳನ್ನು ಇಲ್ಲಿಯವರೆಗೆ ತೆರವುಗೊಳಿಸಲಾಗಿಲ್ಲ, ಇದು ಸರಬರಾಜು ಕೊರತೆಗೆ ಕಾರಣ ಎಂದಿರುವ ಅವರು, ಸಮಸ್ಯೆ ಎದುರಾಗದಂತೆ ಕ್ರಮವಹಿಸಲು ಪಿಎಚ್‌ಸಿ ಸಿಬ್ಬಂದಿಗಳಿಗೆ ತಿಳಿಸಲಾಗಿದೆ. ಅಗತ್ಯಕ್ಕೆ ಅನುಗುಣವಾಗಿ ಜನೌಷಧಿ ಕೇಂದ್ರಗಳಿಂದ ಔಷಧಿಗಳನ್ನು ಖರೀದಿಸುವಂತೆ ಸೂಚಿಸಿದ್ದಾರೆ.

ವೈದ್ಯಕೀಯ ಚಿಕಿತ್ಸಾ ಸಾಮಾಗ್ರಿ ಸರಬರಾಜುದಾರರೊಬ್ಬರು, ನಮಗೆ ಪಾವತಿಯಾಗಬೇಕಿರುವ ಬಿಲ್‌ಗಳು ಮೊತ್ತ ಸಂಪೂರ್ಣವಾಗಿ ಪಾವತಿ ಮಾಡಿಲ್ಲ. ದೊಡ್ಡ ಮೊತ್ತ  ಬಾಕಿಯಿರುವುದರಿಂದ, ಸರಬರಾಜು  ಸಂಪೂರ್ಣವಾಗಿ ನಿಲ್ಲಿಸಲು ನಿರ್ಧರಿಸಲಾಗಿದೆ. ರೂ.50 ಕೋಟಿ ಮೌಲ್ಯದ ಬಿಲ್‌ಗಳು ರಾಜ್ಯ ಸರ್ಕಾರದ ಮುಂದೆ  ಕ್ಲಿಯರೆನ್ಸ್‌ಗಾಗಿ ಬಾಕಿ ಉಳಿದಿವೆ ಎಂದು ಹೇಳಿದ್ದಾರೆ.

ಕೆಎಸ್‌ಎಂಎಸ್‌ಸಿಎಲ್ ಇಲಾಖೆಯಲ್ಲಿನ ವ್ಯವಸ್ಥಾಪಕ ಅಧಿಕಾರಿಗಳು ಪದೇ ಪದೇ ಬದಲಾಗುತ್ತಿರುವುದರಿಂದ ಬಿಲ್‌ಗಳನ್ನು ತೆರವುಗೊಳಿಸಲು ವಿಳಂಬವಾಗುತ್ತಿದೆ ಎಂದು ಬಿಬಿಎಂಪಿ ಆರೋಗ್ಯ ಇಲಾಖೆ ಅಧಿಕಾರಿಯೊಬ್ಬರ ಮಾಹಿತಿಯಾಗಿದೆ.

ಇಲ್ಲಿ ಕ್ಲಿಕ್‌ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್‌ ಗುಂಪು ಸೇರಲು ಈ ಲಿಂಕ್‌ ಕ್ಲಿಕ್‌ ಮಾಡಿ

Donate Janashakthi Media

Leave a Reply

Your email address will not be published. Required fields are marked *