ರೈತರ ಸಮಸ್ಯೆಗಳು, ಕೇಂದ್ರ ಜಾರಿಗೆ ತಂದಿರುವ ಕೃಷಿ ಕಾಯ್ದೆ ಮತ್ತು ರಾಜ್ಯಸಭೆಯಿಂದ 8 ಸದಸ್ಯರನ್ನು ಅಮಾನತು ಮಾಡಿದ ನಿರ್ಧಾರದ ವಿರುದ್ಧ ಕಾಂಗ್ರೆಸ್, ಸಿಪಿಎಂ ಟಿಎಂಸಿ, ಸಮಾಜವಾದಿ ಪಕ್ಷ, ಆಮ್ ಆದ್ಮಿ ಪಕ್ಷ ಸೇರಿದಂತೆ ಹಲವು ವಿರೋಧ ಪಕ್ಷಗಳು ಸೋಮವಾರ ಪ್ರತಿಭಟನೆ ನಡೆಸಿದವು.
ಈ ಹೋರಾಟದಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ದಿಗ್ವಿಜಯ್ ಸಿಂಗ್, ಸಮಾಜವಾದಿ ಪಕ್ಷದ ನಾಯಕಿ ಜಯಾ ಬಚ್ಚನ್, ರಾಜ್ಯಸಭೆಯಿಂದ ಅಮಾನತುಗೊಂಡ ಟಿಎಂಸಿಯ ಡೆರಿಕ್ ಒಬ್ರೆಯನ್ ಸೇರಿದಂತೆ ಹಲವರು ಭಾಗವಹಿಸಿದ್ದಾರೆ.
ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.