ಚಿಕ್ಕಬಳ್ಳಾಪುರ: ತಂದೆ ಹೆಚ್.ಡಿ. ದೇವೇಗೌಡ ಹಾಗೂ ತನ್ನ ಮಾತಿಗೆ ಬೆಲೆಕೊಟ್ಟು ಪ್ರಜ್ವಲ್ ರೇವಣ್ಣ ವಿದೇಶದಿಂದ ಬಂದು ಎಸ್‌ಐಟಿ ಮುಂದೆ ಹಾಜರಾಗುತ್ತಿರುವುದಾಗಿ
ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಇದನ್ನು ಓದಿ : ಪ್ರಜ್ವಲ್ ರೇವಣ್ಣ ಬಂಧನಕ್ಕಾಗಿ “ಚಲೋ ಹಾಸನ್”
ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್‌ಡಿಕೆ, ಸಂಸದ ಪ್ರಜ್ವಲ್ ರೇವಣ್ಣಗೆ ತಕ್ಷಣವೇ ವಿದೇಶದಿಂದ ವಾಪಸ್ ಬರುವಂತೆ ಸೂಚಿಸಿದ್ದೆ. ನನ್ನ ಮನವಿಗೆ ಬೆಲೆ ಕೊಟ್ಟು ವಾಪಸ್ ಬರುತ್ತಿದ್ದಾನೆ. ವಿದೇಶದಿಂದ ಪ್ರಜ್ವಲ್ ರೇವಣ್ಣ ಕರ್ಯಕರ್ತರಲ್ಲಿ ಕ್ಷಮೆಯಾಚಿಸಿದ್ದು ನನಗೆ ಸಮಾಧಾನ ತಂದಿದೆ. ಪ್ರಜ್ವಲ್‌ಗೆ ದೇವೇಗೌಡರು ಪತ್ರ ಬರೆದು ವಾಪಸ್ ಬರುವಂತೆ ಎಚ್ಚರಿಕೆ ನೀಡಿದ್ದರು. ಇದೀಗ ವಾಪಸ್ ಬರುತ್ತಿದ್ದಾರೆ ಎಂದು ತಿಳಿಸಿದರು.
ಅಶ್ಲೀಲ ವಿಡೀಯೋ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಕಳೆದ ಒಂದು ತಿಂಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದರು.
ಇದನ್ನು ನೋಡಿ : ಲೈಂಗಿಕ ಹತ್ಯಾಕಾಂಡ :ಪ್ರಜ್ವಲ್ ಬಂಧನ ವಿಳಂಬಕ್ಕೆ ಹೈಕೋರ್ಟ್ ವಕೀಲ ಬಿ.ಟಿ.ವೆಂಕಟೇಶ್ ಆಕ್ರೋಶ