ಬೆಂಗಳೂರು: ವಿಕೃತ ಕಾಮಿ ಪ್ರಜ್ವಲ್ ರೇವಣ್ಣನನ್ನು ಎಸ್‌ಐಟಿ ಮತ್ತೆ ತನ್ನ ವಶಕ್ಕೆ ಪಡೆದಿದೆ.
ಹಾಸನದ ಮಾಜಿ ಸಂಸದ, ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. 3 ಪ್ರಕರಣಗಳಲ್ಲಿ ಅವರು ಸಲ್ಲಿಕೆ ಮಾಡಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಎಸ್‌ಐಟಿ ಮತ್ತೆ ಪ್ರಜ್ವಲ್ ರೇವಣ್ಣರನ್ನು ತಮ್ಮ ವಶಕ್ಕೆ ಪಡೆದಿದೆ.
ಇದನ್ನು ಓದಿ: ಬುಡಮಟ್ಟದ ಹೋರಾಟಗಳಿಂದ ಲೋಕಸಭೆಯನ್ನು ತಲುಪಿದ ರೈತ ಎರಡು ಗಟ್ಟಿ ದನಿಗಳು
ಜೂನ್ 10ರಂದು ಪ್ರಜ್ವಲ್ ರೇವಣ್ಣರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಪೊಲೀಸರು ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಿದ್ದರು. ಎಸ್‌ಐಟಿ ಪೊಲೀಸರು ಬುಧವಾರ ಬಾಡಿ ವಾರೆಂಟ್ ಮೂಲಕ ಪ್ರಜ್ವಲ್ ರೇವಣ್ಣರನ್ನು ವಶಕ್ಕೆ ಪಡೆದುಕೊಂಡು ಕೋರ್ಟ್ ಮುಂದೆ ಹಾಜರುಪಡಿಸಿದ್ದರು.
ಇದನ್ನು ನೋಡಿ : ಬಿಜೆಪಿಯನ್ನು ಕೈ ಬಿಟ್ಟ ಐದು ರಾಜ್ಯಗಳು Janashakthi Media