ಲೈಂಗಿಕ ಕಿರುಕುಳ ಪ್ರಕರಣ| ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ಲೈಂಗಿಕ ಕಿರುಕುಳ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.

ಪ್ರಜ್ವಲ್‌ ರೇವಣ್ಣ ಅವರು ಕಳೆದ ನಾಲ್ಕು ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಒಂದು ಪ್ರಕರಣದಲ್ಲಿ ಜಾಮೀನು ಹಾಗೂ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್‌ ರೇವಣ್ಣ ಅರ್ಜಿ ಸಲ್ಲಿಸಿದ್ದರು.

ಇದನ್ನು ಓದಿ : ಬಡ್ಡಿ ಕೊಟ್ಟಿಲ್ಲ ಎಂದು ಸಾಲಗಾರನ ಪುತ್ರಿ ಮೇಲೆ ಅತ್ಯಾಚಾರ: ಆರೋಪಿಯ ಬಂಧನ

ಇದರ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಸೋಮವಾರ (ಅ.21) ತೀರ್ಪು ಪ್ರಕಟಿಸಿದೆ.

ಹೊಳೆ ನರಸೀಪುರ ಠಾಣೆಯಲ್ಲಿ ದಾಖಲಾಗಿದ್ದು ಕೇಸ್‌ ನಲ್ಲಿ ಅವರು ಜಾಮೀನಿಗೆ ಅರ್ಜಿ ಹಾಕಿದ್ದರು. ಸಿಐಡಿ ಸೈಬರ್‌ ಸೆಲ್‌ ನಲ್ಲಿ ದಾಖಲಾಗಿದ್ದ ಎರಡು ಪ್ರಕರಣಕ್ಕೆ ಸಂಬಂಧಿಸಿ ಅವರು ನಿರೀಕ್ಷಣಾ ಜಾಮೀನು ಕೋರಿದ್ದರು.

ಇದನ್ನು ನೋಡಿ : ಗೌರಿ ಲಂಕೇಶ್ ಹಂತಕರಿಗೆ ಸನ್ಮಾನ : ಬಹುದೊಡ್ಡ ಅಪಾಯಕಾರಿ ನಡೆ – ಕವಿತಾ ಲಂಕೇಶ್ Janashakthi Media

Donate Janashakthi Media

Leave a Reply

Your email address will not be published. Required fields are marked *