ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣಗೆ ಗ್ರಂಥಾಲಯದ ಕ್ಲರ್ಕ್‌ ಕೆಲಸ

ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ.

ಕಾರಾಗೃಹದ ನಿಯಮಾನುಸಾರ, ಜೈಲಿನಲ್ಲಿ ಕೈದಿಗಳಿಗೆ ವಿವಿಧ ಕೆಲಸಗಳನ್ನು ಹಂಚಲಾಗುತ್ತಿದ್ದು, ಪ್ರಜ್ವಲ್ ರೇವಣ್ಣಗೆ ಅಲ್ಲಿ ಗ್ರಂಥಾಲಯದ ಕ್ಲರ್ಕ್‌ ಕೆಲಸವನ್ನು ಜೈಲು ಅಧಿಕಾರಿಗಳು ನೀಡಿದ್ದಾರೆ. ಅಗ್ರಹಾರ

ಇದನ್ನೂ ಓದಿ: ರಾಷ್ಟ್ರೀಯ ವಿಪತ್ತು ಘೋಷಿಸಬೇಕು ಮತ್ತು ಸಮರೋಪಾದಿಯಲ್ಲಿ ಪರಿಣಾಮಕಾರಿ ಪರಿಹಾರ ಒದಗಿಸಬೇಕು- ಕೇಂದ್ರ ಸರಕಾರಕ್ಕೆ ಸಿಪಿಐ(ಎಂ) ಆಗ್ರಹ

ವಿಚಾರಣಾಧೀನ ಕೈದಿಗಳು ಹಾಗೂ ಸಜಾಬಂದಿಗಳಿಗೆ ಜೈಲಿನ ಗ್ರಂಥಾಲಯದಿಂದ ಪುಸ್ತಕ ವಿತರಣೆ ಮಾಡುವುದು, ಮತ್ತು ಯಾವ ಕೈದಿಗೆ ಯಾವ ಪುಸ್ತಕ ನೀಡಲಾಗಿದೆ ಎಂಬುದನ್ನು ದಾಖಲೆ ಮಾಡುವ ಹೊಣೆಗಾರಿಕೆಗಳಿವೆ. ಈ ಕೆಲಸಕ್ಕೆ ಪ್ರಜ್ವಲ್‌ಗೆ ಪ್ರತಿದಿನ 524 ರೂ. ಸಂಬಳವನ್ನು ನಿಗದಿಪಡಿಸಲಾಗಿದೆ.

‘ನೋಂದಣಿ ಮಾಡಿಕೊಂಡು ಕೆಲಸ ಮಾಡಿದ ದಿನದಂದು ಕೂಲಿ ಬರಲಿದೆ. ನ್ಯಾಯಾಲಯಕ್ಕೆ ಹಾಜರಾಗಬೇಕಾದ ದಿನಗಳಂದು ಹಣ ನೀಡಲಾಗುವುದಿಲ್ಲ’ ಎಂದು ಜೈಲಿನ ಮೂಲಗಳು ತಿಳಿಸಿವೆ.

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆಗಸ್ಟ್‌ 2ರಂದು ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟಿಸಿತ್ತು.

ಇದನ್ನೂ ನೋಡಿ: ಧರ್ಮಸ್ಥಳದ ನಿಗೂಢಗಳು |ಕೊಲೆ ಪ್ರಕರಣಗಳನ್ನು ತನಿಖೆ ಮಾಡಿ ಎನ್ನುವುದು ದೇವಸ್ಥಾನಕ್ಕೆ ಅಪಪ್ರಚಾರವಾ!Janashakthi Media

Donate Janashakthi Media

Leave a Reply

Your email address will not be published. Required fields are marked *