ಪ್ರಜ್ವಲ್‌ ರೇವಣ್ಣ ನಮ್ಮ ಸಂಸದರಲ್ಲ: ಬಿಜೆಪಿ ಯೂಟರ್ನ್‌

ಬೆಂಗಳೂರು: ಇಷ್ಟು ದಿನ ಪ್ರಜ್ವಲ್‌ ರೇವಣ್ಣರನ್ನು ಎನ್ಡಿಎ ಒಕ್ಕೂಟದ ಅಭ್ಯರ್ಥಿ ಎನ್ನುತ್ತಿದ್ದ ರಾಜ್ಯ ಬಿಜೆಪಿ ಪಾಳಯ ವಿದೀಗ ಯೂಟರ್ನ್‌ ಹೊಡೆದಿದ್ದು, ಪೆನ್‌ಡ್ರೈವ್‌ ಪ್ರಕರಣದ ಪ್ರಮುಖ ಆರೋಪಿ ಪ್ರಜ್ವಲ್‌ ರೇವಣ್ಣ ವಿಚಾರ ರಾಜಕೀಯ ವಲಯದಲ್ಲಿ ಕೆಸೆರೆರಚಾಡುತ್ತಿದ್ದಂತೆ, ರಾಜ್ಯ ಸೇರಿದಂತೆ ದೇಶಾದ್ಯಂತ ಮಹಿಳೆಯರು, ಸಮಾಜದ ಜನರು ಛೀ..ಥೂ ಎನ್ನುತ್ತಿದ್ದಂತೆಯೇ ಪ್ರಜ್ವಲ್‌ ರೇವಣ್ಣ ನಮ್ಮ ಸಂಸದರಲ್ಲ ಎನ್ನುತ್ತಿದೆ.

ಈ ಕುರಿತು ಪ್ರತಿಪಕ್ಷ ನಾಯಕ ಆರ್.ಅಶೋಕ್‌ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಜ್ವಲ್‌ ರೇವಣ್ಣ ನಮ್ಮ ಸಂಸದರಲ್ಲ. ಜೆಡಿಎಸ್‌ನಿಂದ ಈ ಹಿಂದೆ ಸಂಸದರಾಗಿದ್ದು, ಇವರೇ ಜೋಡೆತ್ತು ಎಂದು ಮೊದಲಿಗೆ ಗೆಲ್ಲಿಸಿದ್ದರು. ಇದಕ್ಕೆ ಕಾಂಗ್ರೆಸ್‌ ಪಕ್ಷವೇ ಉತ್ತರಿಸಬೇಕು ಎಂದಿದ್ದಾರೆ. ಅಷ್ಟೇ ಅಲ್ಲಾ, ವಿದೇಶಕ್ಕೆ ಪ್ರಜ್ವಲ್‌ ಹೋಗುವಾಗ ಕರ್ನಾಟಕದ ಪೊಲೀಸರು ಏನು ಮಾಡುತ್ತಿದ್ದರು? ಜಿಲ್ಲಾಧಿಕಾರಿ ಏನು ಮಾಡುತ್ತಿದ್ದೃು? ಎಂದು ಪ್ರ‍ಶ್ನಿಸಿದ ಅಶೋಕ್‌, ಗುಪ್ತಚರ ದಳ ವಿಫಲವಾಗಿದೆ ಎನ್ನುವುದನ್ನು ಸರ್ಕಾರ ಒಪ್ಪಿಕೊಳ್ಳಲೀ ಎಂದಿದ್ದಾರೆ.

ಪ್ರಜ್ವಲ್‌ ರೇವಣ್ಣ ನಮ್ಮ ಸಂಸದರಲ್ಲ. ಇವರೇ ಜೋಡೆತ್ತು ಎಂದು ಅವರ ಜೊತೆಗೆ ಇದ್ದು ಮೊದಲಿಗೆ ಗೆಲ್ಲಿಸಿದ್ದರು. ಇದಕ್ಕೆ ಕಾಂಗ್ರೆಸ್ಸೇ ಉತ್ತರ ನೀಡಬೇಕು. ಪ್ರಜ್ವಲ್‌ ವಿದೇಶಕ್ಕೆ ಹೋಗುವಾಗ ಕರ್ನಾಟಕ ಪೊಲೀಸರು ಏನು ಮಾಡುತ್ತಿದ್ದರು? ಜಿಲ್ಲಾಧಿಕಾರಿ ಏನು ಮಾಡುತ್ತಿದ್ದರು? ಕಾಂಗ್ರೆಸ್‌ ಸರ್ಕಾರ ಗುಪ್ತಚರ ದಳ ವಿಫಲವಾಗಿದೆ ಎಂದು ಒಪ್ಪಿಕೊಳ್ಳಲಿ ಎಂದರು.

ಯಾವುದೇ ಕಾರಣಕ್ಕೂ ಇಂತಹ ಘಟನೆಗೆ ಪಕ್ಷ ಬೆಂಬಲ ನೀಡುವುದಿಲ್ಲ. ಬಿಜೆಪಿಯಿಂದ ಕಠಿಣ ಕ್ರಮ ವಹಿಸಲಾಗುತ್ತದೆ. ಸಿದ್ದರಾಮಯ್ಯನವರು ಅಧಿಕಾರ ಬಿಟ್ಟು ಇಳಿದು ಬಿಜೆಪಿಗೆ ಅಧಿಕಾರ ನೀಡಿದರೆ 24 ಗಂಟೆಯಲ್ಲಿ ಪ್ರಜ್ವಲ್‌ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಆರ್ ಅಶೋಕ್ ಹೇಳಿದರು.

ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣ ಹಾಸನ ಪೆನ್ಡ್ರೈವ್‌ ಹಗರಣಕ್ಕೆ ಹೊಸ ಟ್ವಿಸ್ಟ್

ಪ್ರಜ್ವಲ್‌ ರೇವಣ್ಣ ನಮ್ಮ ಸಂಸದರಲ್ಲ ಎನ್ನುತ್ತಿರುವ ಬಿಜೆಪಿ ಪಾಳಕ್ಕೆ ಕೇಂದ್ರದ ಬಿಜೆಪಿ ವರಿಷ್ಠರು ಯಾವುದೇ ಕಾರಣಕ್ಕೂ ಈ ಬಗ್ಗೆ ಸಮರ್ಥಿಸಿಕೊಳ್ಳುವುದಕ್ಕಾಗಲೀ, ಎನ್ಡಿಎ ಒಕ್ಕೂಟದ ಸ್ಪರ್ಧೆಯ ವಿಚಾರವಾಗಲೀ ಪ್ರಸ್ತಾಪಿಸಂತೆ ಸೂಚನೆಯೊಂದನ್ನು ರವಾನಿಸಿದ್ದು,ಆದಷ್ಟು ಈ ವಿಚಾರವನ್ನು ಜೆಡಿಎಸ್‌ ಪಕ್ಷವೇ ಮಾತನಾಡಲೀ ಎಂದು ಸೂಚನೆಯೊಂದನ್ನು ರವಾನಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ನೋಡಿ: ಪೆನ್‌ಡ್ರೈವ್‌ ಪ್ರಕರಣ : ವಿಡಿಯೋ ಲೀಕ್ ಹಿಂದಿನ ಉದ್ದೇಶ ಬಿಚ್ಚಿಟ್ಟ ಪ್ರಜ್ವಲ್ ಮಾಜಿ ಡ್ರೈವರ್ Janashakthi Media

Donate Janashakthi Media

Leave a Reply

Your email address will not be published. Required fields are marked *