ಬೆಂಗಳೂರು: ಸಾಮೂಹಿಕ ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಅಮಾನತುಗೊಂಡಿರುವ ಜೆಡಿಎಸ್‌ನ ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವ ಪ್ರಕ್ರಿಯೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತೊಡಗಿದೆ ಎಂದು ವರದಿಯಾಗಿದೆ.
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರಮವನ್ನು ತ್ವರಿತಗೊಳಿಸಲು ಎರಡನೇ ಬಾರಿಗೆ ಪ್ರಧಾನಿ ಮೋದಿಗೆ
ಪ್ರಜ್ವಲ್ ಅವರ ಪಾಸ್‌ಪೋರ್ಟ್ ಹಿಂಪಡೆಯಲು ಕರ್ನಾಟಕ ಸರ್ಕಾರದ ಔಪಚಾರಿಕ ಪತ್ರವನ್ನು ವಿದೇಶಾಂಗ ಸಚಿವಾಲಯವು ಮಂಗಳವಾರ ಸ್ವೀಕರಿಸಿದೆ ಅಧಿಕಾರಿಯೊಬ್ಬರು ಷರತ್ತಿನ ಮೇಲೆ ತಿಳಿಸಿರುವುದಾಗಿ ವರದಿಯಾಗಿದೆ.
33 ವರ್ಷದ ಪ್ರಜ್ವಲ್ ರೇವಣ್ಣ ಅತ್ಯಾಚಾರ, ಕ್ರಿಮಿನಲ್ ಬೆದರಿಕೆ ಮತ್ತು ಲೈಂಗಿಕ ಕಿರುಕುಳದ ಆರೋಪಗಳನ್ನು ಎದುರಿಸುತ್ತಿರುವ ಎಸ್‌ಐಟಿ ತನಿಖೆ ನಡೆಸುತ್ತಿರುವ ಪ್ರಕರಣದ ಆರೋಪಿಯಾಗಿದ್ದು, ಸದ್ಯಕ್ಕೆ ಜರ್ಮನಿಯಲ್ಲಿ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದೆ.
“ಇದನ್ನು 1967 ರ ಪಾಸ್‌ಪೋರ್ಟ್ ಕಾಯಿದೆ ಮತ್ತು ಸಂಬಂಧಿತ ನಿಯಮಗಳ ಅಡಿಯಲ್ಲಿ ಪ್ರಕ್ರಿಯೆಗೊಳಿಸಲಾಗುತ್ತಿದೆ”. ಪಾಸ್‌ಪೋರ್ಟ್ ರದ್ದುಗೊಳಿಸುವ ಪ್ರಕ್ರಿಯೆಯು ಎಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂಬುದು ತಕ್ಷಣವೇ ಸ್ಪಷ್ಟವಾಗಿಲ್ಲ.