ಪೆನ್ ಡ್ರೈವ್ ಪ್ರಕರಣ : ಪ್ರಜ್ವಲ್ ರೇವಣ್ಣ ಅಮಾನತು

ಬೆಂಗಳೂರು: ಪೆನ್ಡ್ರೇವ್ ಹಗರಣದಿಂದ ಮುಜುಗರಕ್ಕೊಳಗಾಗಿರುವ ತೆನೆಹೊತ್ತ ಮಹಿಳೆಯ ಸಖ್ಯ ಅರ್ಥಾತ್ ಜೆಡಿಎಸ್ ಪಕ್ಷದಿಂದ‌‌ ಹಾಸನ ಸಂಸದ ಪ್ರಜ್ವಲ್ ರೇವಣ್ಣನನ್ನು ಅಮಾನತು ಮಾಡಲಾಗಿದೆ.

ಜೆಇಎಸ್‌ನ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರ ಅನುಮೋದನೆಯಂತೆ ಪಕ್ಷದ ಮಹಾ ಪ್ರಧಾನ ಕಾರ್ಯದರ್ಶಿ ಕೆ.ಆರ್.ಶಿವಕುಮಾರ್, ಪ್ರಜ್ವಲ್ ರೇವಣ್ಣನನ್ನು ಪಕ್ಷದಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ವಿಡಿಯೋಗಳು ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಪಕ್ಷದ ಘನತೆ ಮತ್ತು ಗೌರವಗಳಿಗೆ ಹಾಗೂ ಮುಖಂಡತ್ವಕ್ಕೆ ಸಾಕಷ್ಟು ಧಕ್ಕೆ ಉಂಟಾಗಿರುತ್ತದೆ.

ಇದನ್ನೂ ಓದಿ: ಹಾಸನದ ಲೈಂಗಿಕ ಹಗರಣವನ್ನು ಎಸ್‌ಐಟಿ ತನಿಖೆಗೆ ಒಪ್ಪಿಸಿದ್ದಕ್ಕೆ ಸಿಪಿಐ ಸ್ವಾಗತ

ಅಲ್ಲದೇ ಮಹಿಳೆಯರ ಮೇಲೆ ಎಸಗಿದೆ ಎಂದು ಹೇಳಲಾಗಿರುವ ಚಿತ್ರಗಳು ಮತ್ತು ವಿಡಿಯೋಗಳ ಬಗ್ಗೆ ತನಿಖೆ ನಡೆಸಲು ಕಾಂಗ್ರೆಸ್ ಸರ್ಕಾರ  ಎಸ್‌ಐಟಿ ವಿಶೇಷ ತನಿಖಾದಳ ರಚಿಸಿದ್ದು, ತನಿಖಾದಳ ಈಗಾಗಲೇ ತನ್ನ ಕಾರ್ಯಗಳನ್ನು ಪ್ರಾರಂಭಿಸಿದೆ.

ಈ ಹಿನ್ನೆಲೆಯಲ್ಲಿ ಜನತಾದಳ (ಜಾತ್ಯತೀತ) ಪಕ್ಷದ ಸಂವಿಧಾನ ಮತ್ತು  Article XXII-Breach of Discipline-4  ಹಾಗೂ  Punishment-68ರನ್ವಯ ಹಾಸನ ಲೋಕಸಭಾ ಕ್ಷೇತ್ರದ ಸದಸ್ಯ ಪ್ರಜ್ವಲ್ ರೇವಣ್ಣರನ್ನು ನ್ನು ತತ್‌ಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಅಮಾನತ್ತುಗೊಳಿಸಲಾಗಿದೆ ಎಂದು ಅಮಾನತು ಆದೇಶ ಪ್ರತಿಯಲ್ಲಿ ತಿಳಿಸಲಾಗಿದೆ.

ಇದನ್ನೂ ನೋಡಿ: ಹಾಸನ ಪೆನ್ ಡ್ರೈವ್ ಪ್ರಕರಣ: ಕಾಂಗ್ರೆಸ್ ಸುದ್ದಿಗೋಷ್ಠಿ

Donate Janashakthi Media

Leave a Reply

Your email address will not be published. Required fields are marked *