ಬೆಂಗಳೂರು: ಪ್ರಜ್ವಲ್ ರೇವಣ್ಣರನ್ನಎಸ್‌ಐಟಿ ಕಚೇರಿಗೆ ಜೀಪ್ನಲ್ಲಿ ಕರೆತಂದಿದ್ದು ಮಹಿಳಾ ಅಧಿಕಾರಿಗಳು. ಪ್ರಜ್ವಲ್ ರೇವಣ್ಣ ಇದ್ದ ಜೀಪ್ನಲ್ಲಿ ಚಾಲಕ ಹೊರತು ಪಡಿಸಿದರೆ ಉಳಿದ ಐವರು ಮಹಿಳಾ ಅಧಿಕಾರಿಗಳೆ ಇದ್ದರು. ಎಸ್‌ಐಟಿ ಅಧಿಕಾರಿಗಳು ಮೂವರು ಮಹಿಳಾ ಪೊಲೀಸ್ ಪೇದೆಗಳ ಮೂಲಕ ಪ್ರಜ್ವಲ್ ಅವರನ್ನ ವಶಕ್ಕೆ ಪಡೆದಿದ್ದರು. ಮಹಿಳಾ ಪೊಲೀಸರಿಂದಲೇ ಬಂಧಿಸಿದ್ದು ಯಾಕೆ ಎಂಬುದು ಇದೀಗ ಸದ್ಯದ ಕುತೂಹಲಕ್ಕೆ ಕಾರಣವಾಗಿದೆ.
ಕಳೆದ ಕೆಲ ದಿನಗಳಿಂದ ಟಿಕೆಟ್ ಬುಕ್ ಮಾಡಿ ಎಸ್‌ಐಟಿ ಅಧಿಕಾರಿಗಳ ತಾಳ್ಮೆ ಪರೀಕ್ಷೆ ನಡೆಸಿದ್ದ ಪ್ರಜ್ವಲ್ ರೇವಣ್ಣ ಅವರನ್ನ ಮಹಿಳಾ ಪೋಲಿಸರಿಂದಲೇ ಬಂದಿಸಿದ್ದು, ಒಂದೇ ಕಲ್ಲಲ್ಲಿ ಎರಡು ಹಕ್ಕಿ ಹೊಡೆಯುವ ಪ್ಲಾನ್ ಅನ್ನು ಎಸ್ ಐಟಿ ಅಧಿಕಾರಿಗಳು ಮಾಡಿದ್ದಾರೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತ ಮಹಿಳೆಯರು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಅಧಿಕಾರಿಗಳಿಂದ
ಇದನ್ನೂ ಓದಿ: ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ರದ್ದು ಮಾಡುವಂತೆ ಕೋರ್ಟ್ ಮೊರೆ ಹೋದ ಎಸ್‌ಐಟಿ
ಹೆಣ್ಣನ್ನು ಕೇವಲವಾಗಿ ನೋಡಿದ ಪ್ರಜ್ವಲ್‌ಗೆ ಮುಜುಗರ, ಅವಮಾನಿಸಲು, ನಾಚಿಕೆಪಡುವಂತಾಗಲಿ ಎಂದು ಮಹಿಳಾ ಅಧಿಕಾರಿಗಳಿಂದಲೇ ಎಸ್ ಐಟಿ ಅಧಿಕಾರಿಗಳು ಅರೆಸ್ಟ್ ಮಾಡಿಸಿದ್ದಾರೆ ಎನ್ನಲಾಗಿದೆ. ಮಹಿಳಾ ಪೊಲೀಸ್ರಿಂದ ಅರೆಸ್ಟ್ ಮಾಡಿಸಿ ಹೆಣ್ಣು ಅಬಲೆಯಲ್ಲ, ನಾವಿದ್ದೇವೆ ಧೈರ್ಯವಾಗಿ ಬಂದು ದೂರು ನೀಡುವಂತೆ ಸಂತ್ರಸ್ತ ಮಹಿಳೆಯರಿಗೆ ಧೈರ್ಯ ತುಂಬುವ ಸಂದೇಶ ರವಾನಿಸಿದೆ ಎಂದು ಹೇಳಲಾಗಿದೆ.
ಇದನ್ನೂ ನೋಡಿ: ಏನಿದು ಸಿದ್ರಾಮಯ್ಯನವರೆ ಅನ್ಯಾಯದ ಕಡೆ ವಾಲುತ್ತಿದ್ದೀರಿ!?Janashakthi Media