ಪ್ರಜ್ವಲ್‌ ರೇವಣ್ಣನಿಗೀಗ ಪರಪ್ಪನ ಅಗ್ರಹಾರ

ಬೆಂಗಳೂರು: ಹಾಸನ ಮಾಜಿ ಸಂಸದ ಜೆಡಿಎಸ್‌ನ ಪ್ರಜ್ವಲ್ ರೇವಣ್ಣಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದ್ದು, ಪ್ರಜ್ವಲ್‌ ರೇವಣ್ಣನಿಗೀಗ ಪರಪ್ಪನ ಅಗ್ರಹಾರದ ಜೈಲೇ ಗತಿಯಾಗಿದೆ. ಪ್ರಜ್ವಲ್ ರೇವಣ್ಣಗೆ ಎಸಿಎಂಎಂ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ವಿಧಿಸಿದೆ.ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಜೈಲು ಶಿಕ್ಷೆ ವಿಧಿಸಿ 42ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ.

ಲೈಂಗಿಕ ಅತ್ಯಾಚಾರ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ ಪ್ರಜ್ವಲ್‌ ರೇವಣ್ಣಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಎಸ್‌ಐಟಿ ಕಸ್ಟಡಿ ಸೋಮವಾರ ಬೆಳಿಗ್ಗೆಗೆ ಮುಕ್ತಾಯಗೊಂಡಿದ್ದರಿಂದ ತನಿಖಾಧಿಕಾರಿಗಳು ಪ್ರಜ್ವಲ್‌ ರೇವಣ್ಣನನ್ನು ನ್ಯಾಯಾಧೀಶರ ಮುಂದೆ ಮತ್ತೊಮ್ಮೆ ವಿಚಾರಣೆಗೊಳಪಡಿಸಿದ್ದರು.

ಎಸ್ಐಟಿ (ವಿಶೇಷ ತನಿಖಾ ದಳ) ವಶದಲ್ಲಿದ್ದ ಪ್ರಜ್ವಲ್ ರೇವಣ್ಣ ಕಸ್ಟಡಿ ಇಂದಿಗೆ ಅಂತ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿರುವ 42ನೇ ಎಸಿಎಂಎಂ ಕೋರ್ಟ್‌ಗೆ ಹಾಜರು ಪಡಿಸಿದ್ದರು.

ಸೋಮವಾರ ವಿಚಾರಣೆ ನಡೆಸಿದ ನ್ಯಾಯಾಧೀಶರು, ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಎಂಎಂ ಕೋರ್ಟ್ ಪ್ರಜ್ವಲ್ ರೇವಣ್ಣಗೆ ಜೂನ್ 24ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದು, ಶೀಘ್ರವೇ ಅವರನ್ನು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗುತ್ತದೆ.

ಇದನ್ನೂ ಓದಿ: ಎನ್‌ಡಿಎ ಸರ್ಕಾರ ಎಷ್ಟು ದಿನ ಇರುತ್ತೆ ಎಂಬುದು ಖಚಿತವಿಲ್ಲ- ಎಂ.ಬಿ.ಪಾಟೀಲ

ಈಗಾಗಲೇ ಹೊಳೆನರಸೀಪುರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಜ್ವಲ್ ರೇವಣ್ಣನನ್ನು ಬಂಧಿಸಿದ್ದು, ಲೈಂಕಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಇರಡು ಕೇಸ್ ಬಾಕಿ ಇದೆ ಎನ್ನಲಾಗಿದೆ.

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಎಸ್‍ಐಟಿ ಸೋಮವಾರ ಪೊಲೀಸರು ಬಸವನಗುಡಿ ನಿವಾಸಕ್ಕೆ ಕರೆತಂದು ಮಹಜರು ನಡೆಸಿದ್ದಾರೆ.

ಪ್ರಜ್ವಲ್ ರೇವಣ್ಣ ಅವರನ್ನು ಸ್ಥಳ ಮಹಜರಿಗೆ ಕರೆತಂದ ವೇಳೆ ಅವರ ತಾಯಿ ಭವಾನಿ ರೇವಣ್ಣ ಮನೆಯ ಮೊದಲ ಮಹಡಿಯಲ್ಲಿರುವ ತುಳಸಿಕಟ್ಟೆಗೆ ಪೂಜೆ ಸಲ್ಲಿಸುತ್ತಿದ್ದರು. ಈ ವೇಳೆ ಅಧಿಕಾರಿಗಳು ಮಹಜರು ಮುಕ್ತಾಯವಾಗುವವರೆಗೂ ಮನೆಯ ಪ್ರತ್ಯೇಕ ಜಾಗದಲ್ಲಿ ಇರುವಂತೆ ಮನೆಯ ಸದಸ್ಯರಿಗೆ ಸೂಚಿಸಿದ್ದಾರೆ. ಅಲ್ಲದೇ ಪ್ರಜ್ವಲ್‍ರನ್ನು ಭೇಟಿಯಾಗಲು ಮನೆಯ ಸದಸ್ಯರಿಗೆ ಅವಕಾಶ ನೀಡಲಿಲ್ಲ. ಹೇಳಿಕೆ ದಾಖಲಿಸಿಕೊಳ್ಳಲು ಅಧಿಕಾರಿಗಳು ಪ್ರಿಂಟರ್ ಹಾಗೂ ಕಂಪ್ಯೂಟರ್ ತೆಗೆದುಕೊಂಡು ಹೋಗಿದ್ದಾರೆ.ಮಹಜರು ವೇಳೆ ಪ್ರಕರಣ ಸಂಬಂಧ ಮಹತ್ವದ ಸಾಕ್ಷ್ಯಗಳನ್ನು ಅಧಿಕಾರಿಗಳು ಕಲೆಹಾಕಿದ್ದಾರೆನ್ನಲಾಗಿದೆ.

ಪ್ರಜ್ವಲ್ ವಿರುದ್ಧದ ಇನ್ನೂ ಎರಡು ಪ್ರಕರಣಗಳ ತನಿಖೆ ಬಾಕಿ ಹಿನ್ನೆಲೆ ಪುನಃ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ. ಪ್ರತಿ ಪ್ರಕರಣದ ತನಿಖೆಯನ್ನ ಪ್ರತ್ಯೇಕವಾಗಿ ನಡೆಸುತ್ತಿರುವ ಎಐಟಿ, ಸದ್ಯ ಈಗ ಹೊಳೆನರಸೀಪುರ ಟೌನ್ ಠಾಣೆ ಪ್ರಕರಣ ಸಂಬಂಧ ತನಿಖೆ ನಡೆಸ್ತಿದೆ. ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಸಂಬಂಧ ಕಳೆದ ಹತ್ತು ದಿನಗಳಿಂದ ಪ್ರಜ್ವಲ್ ವಿಚಾರಣೆ ನಡೆಯುತ್ತಿದೆ. ಬಂಧನಕ್ಕೊಳಗಾಗಿರುವ ಆರೋಪಿ ಪ್ರಜ್ವಲ್ ಹಲವು ಮಹಿಳೆಯ ಜೊತೆ ಇದ್ದಾರೆ ಎನ್ನಲಾದ ವೀಡಿಯೋ ವೈರಲ್ ಆಗಿತ್ತು. ವೀಡಿಯೋಗಳು ವೈರಲ್ ಆಗುತ್ತಿದ್ದಂತೆ ಅವರು ಜರ್ಮನಿಗೆ ತೆರಳಿ ತಲೆಮರೆಸಿಕೊಂಡಿದ್ದರು. ಸುಮಾರು 34 ದಿನಗಳ ಕಾಲ ಯಾರ ಸಂಪರ್ಕಕ್ಕೂ ಸಿಗದೇ ಜರ್ಮನಿಯಲ್ಲಿದ್ದರು. ಬಳಿಕ ಭಾರತಕ್ಕೆ ಮರಳುತ್ತಿದ್ದಂತೆ ಎಸ್‍ಐಟಿ ಅಧಿಕಾರಿಗಳು ಅವರನ್ನು ಬಂಧಿಸಿದ್ದರು.

ಇದನ್ನೂ ನೋಡಿ: ಮಹಾರಾಷ್ಟ್ರದಲ್ಲಿ ಪ್ರಧಾನಿ ಮೋದಿ ಪ್ರಚಾರ ನಡೆಸಿದ್ದ 18 ಕ್ಷೇತ್ರಗಳಲ್ಲಿ 15ರಲ್ಲಿ ಎನ್‌ಡಿಎ ಗೆ ಸೋಲು

Donate Janashakthi Media

Leave a Reply

Your email address will not be published. Required fields are marked *