ಲೈಂಗಿಕ ದೌರ್ಜನ್ಯ ಪ್ರಕರಣ : ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದ ಅಡಿಯಲ್ಲಿ ಜೈಲು ಸೇರಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.

ಈ ಹಿಂದೆ ಮೂರು ಅರ್ಜಿಗಳನ್ನು ಸೆಷನ್ಸ್ ಕೋರ್ಟ್ ವಜಾ ಮಾಡಿತ್ತು. ಇದರಲ್ಲಿ ಒಂದು ಜಾಮೀನು ಅರ್ಜಿ, ಎರಡು ನಿರೀಕ್ಷಣಾ ಜಾಮೀನು ಅರ್ಜಿ ಸೇರಿವೆ. ಇದೀಗ ಮೂರನೇ ನಿರೀಕ್ಷಣಾ ಜಾಮೀನು ಅರ್ಜಿ ಕೂಡ ತಿರಸ್ಕೃತಗೊಂಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ. ಸಂತೋಷ್ ಗಜಾನನ ಭಟ್ ಅವರು ಅರ್ಜಿ ವಜಾಗೊಳಿಸಿದ್ದಾರೆ.

ಇದನ್ನು ಓದಿ : ₹31 ಸಾವಿರ ಕನಿಷ್ಠ ವೇತನಕ್ಕಾಗಿ ಗ್ರಾ. ಪಂಚಾಯಿತಿ ನೌಕರರ ಪ್ರತಿಭಟನೆ

ನಿನ್ನೆಯಷ್ಟೇ ಪ್ರಜ್ವಲ್ ಸಹೋದರ ಸೂರಜ್ ರೇವಣ್ಣ ಅವರು ಜಾಮೀನಿನ ಮೇಲೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು. ಇದರ ಖುಷಿಯಲ್ಲಿದ್ದ ಕುಟುಂಬಸ್ಥರು ಇಂದು ಪ್ರಜ್ವಲ್​ಗೂ ಜಾಮೀನು ಸಿಗಲಿದೆ ಎನ್ನುವ ನಿರೀಕ್ಷೆಯಲ್ಲಿದ್ದರು. ಆದರೆ ಕೋರ್ಟ್​, ಪ್ರಜ್ವಲ್ ರೇವಣ್ಣನವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ವಿಶೇಷ ಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿರುವುದರಿಂದ ಪ್ರಜ್ವಲ್‌ ರೇವಣ್ಣ ಈಗ ಹೈಕೋರ್ಟ್‌ ಮೊರೆ ಹೋಗುವ ಸಾಧ್ಯತೆ ಇದೆ.

ಏನಿದು ಪ್ರಕರಣ?

ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನದ ಭೀತಿಯಿಂದ 35 ದಿನ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್‌ ರೇವಣ್ಣ ಎರಡು ತಿಂಗಳ ಹಿಂದೆ ಬೆಂಗಳೂರಿಗೆ ವಾಪಸಾದಾಗ ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅದನ್ನು ಚಿತ್ರೀಕರಿಸಿದ ಆರೋಪ ಪ್ರಜ್ವಲ್‌ ವಿರುದ್ದ ಕೇಳಿ ಬಂದಿದೆ. ಆರೋಪಿ ಪ್ರಜ್ವಲ್‌ ರೇವಣ್ಣ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇದನ್ನು ನೋಡಿ : ನಮ್ಮ ಕಷ್ಟ ಸರ್ಕಾರಕ್ಕೆ ಅರ್ಥ ಆಗಲ್ವಾ? – ಗ್ರಾಪಂ ನೌಕರರ ಆಕ್ರೋಶ, 2ನೇ ದಿನಕ್ಕೆ ಕಾಲಿಟ್ಟ ಧರಣಿ Janashakthi Media

Donate Janashakthi Media

Leave a Reply

Your email address will not be published. Required fields are marked *