‘ನಾನೂ ಕಾಕ್ರೋಚ್’ ಪ್ರಕಾಶ್ ರಾಜ್‌ ರಿಂದ ಮಹುವಾ ಮೊಯಿತ್ರಾವರೆಗೆ ಯುವಕರ ಚಳವಳಿಗೆ ವ್ಯಾಪಕ ಬೆಂಬಲ

ಬೆಂಗಳೂರು: ಶಿಕ್ಷಣ ಕ್ಷೇತ್ರದಲ್ಲಿನ ಅಕ್ರಮಗಳು, ನಿರುದ್ಯೋಗ ಮತ್ತು ಆಡಳಿತ ವೈಫಲ್ಯಗಳ ವಿರುದ್ಧ ಧ್ವನಿ ಎತ್ತುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಚಳವಳಿಗೆ ದೇಶದ ವಿವಿಧ ಕ್ಷೇತ್ರಗಳ ಗಣ್ಯರಿಂದ ಬೆಂಬಲ ವ್ಯಕ್ತವಾಗುತ್ತಿದೆ. ಅದರಲ್ಲೂ ಕನ್ನಡದ ಖ್ಯಾತ ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್‌ ರಾಜ್‌ ಅವರು ಈ ಚಳವಳಿಗೆ ಬೆಂಬಲ ಸೂಚಿಸಿ, ನಾನು ಕಾಕ್ರೋಚ್‌ ಎಂದು ಹೇಳಿಕೊಂಡಿದ್ದಾರೆ. ನಾನೂ

ಕಾಕ್ರೋಚ್ ಜನತಾ ಪಾರ್ಟಿಗೆ ಬಹಿರಂಗ ಬೆಂಬಲ ವ್ಯಕ್ತಪಡಿಸಿರುವ ಪ್ರಮುಖರ ಪೈಕಿ ಪರಿಸರ ಹೋರಾಟಗಾರ ಸೋನಂ ವಾಂಗ್‌ಚುಕ್, ಹಿರಿಯ ವಕೀಲ ಪ್ರಶಾಂತ್ ಭೂಷಣ್, ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ, ಮಾಜಿ ಕ್ರಿಕೆಟಿಗ ಹಾಗೂ ಸಂಸದ ಕೀರ್ತಿ ಆಜಾದ್, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಸೇರಿದಂತೆ ಹಲವು ಸಾರ್ವಜನಿಕ ವ್ಯಕ್ತಿಗಳು ಸೇರಿದ್ದಾರೆ. ಇದೇ ವೇಳೆ ನಟ ಅತುಲ್ ಕುಲಕರ್ಣಿ, ಪತ್ರಕರ್ತ ಸೌರವ್ ದಾಸ್, ಲೇಖಕಿ ವಿಜೇತಾ ದಹಿಯಾ, ಸಾಮಾಜಿಕ ಕಾರ್ಯಕರ್ತ ಅಶುತೋಷ್ ರಂಕಾ ಸೇರಿದಂತೆ ಹಲವರು ಕಾಕ್ರೋಚ್ ಜನತಾ ಪಾರ್ಟಿಯ ಅಭಿಯಾನವನ್ನು ಬಹಿರಂಗವಾಗಿ ಬೆಂಬಲಿಸುತ್ತಿದ್ದಾರೆ. ಮತ್ತು ನಾನು ಕಾಕ್ರೋಚ್‌ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ :ಕಾಕ್ರೋಚ್‌ ಜನತಾ ಪಾರ್ಟಿ ಪ್ರತಿಭಟನೆ ; ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಕಾಕ್ರೋಚ್ ಜನತಾ ಪಾರ್ಟಿಯ ಪ್ರತಿಭಟನೆಗೆ ಸಾವಿರಾರು ಯುವಕರು ಭಾಗವಹಿಸಿದ್ದರು. ಯುವಕರ ಭವಿಷ್ಯ, ಪರೀಕ್ಷಾ ಅಕ್ರಮಗಳು ಮತ್ತು ನಿರುದ್ಯೋಗದ ಪ್ರಶ್ನೆಗಳನ್ನು ರಾಷ್ಟ್ರೀಯ ಚರ್ಚೆಯ ಕೇಂದ್ರಕ್ಕೆ ತರುವಲ್ಲಿ ಈ ಚಳವಳಿ ಯಶಸ್ವಿಯಾಗಿದೆ ಎಂದು ಬೆಂಬಲಿಗರು ಅಭಿಪ್ರಾಯಪಟ್ಟಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಆರಂಭವಾದ ಈ ಚಳವಳಿ ಈಗ ಶಿಕ್ಷಣ ಕ್ಷೇತ್ರದಲ್ಲಿನ ಅಕ್ರಮಗಳು, ನಿರುದ್ಯೋಗ ಮತ್ತು ಯುವಕರ ಭವಿಷ್ಯದ ಪ್ರಶ್ನೆಗಳನ್ನು ಕೇಂದ್ರವಾಗಿಸಿಕೊಂಡು ದೇಶವ್ಯಾಪಿ ಯುವಜನ ಚಳವಳಿಯಾಗಿ ರೂಪುಗೊಳ್ಳುತ್ತಿದೆ. ಸಾವಿರಾರು ಯುವಕರು “ನಾನೂ ಕಾಕ್ರೋಚ್” ಎಂಬ ಘೋಷಣೆಯೊಂದಿಗೆ ಈ ಅಭಿಯಾನಕ್ಕೆ ಬೆಂಬಲ ಸೂಚಿಸುತ್ತಿದ್ದಾರೆ.

ಇದನ್ನೂ ನೋಡಿ : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್‌ ಜನತಾ ಪಕ್ಷದಿಂದ ಪ್ರತಿಭಟನೆ

Donate Janashakthi Media

Leave a Reply

Your email address will not be published. Required fields are marked *